ಬಿಲ್ಕಿಸ್ ಬಾನೊ ಪ್ರಕರಣ | ಗುಜರಾತ್, ಕೇಂದ್ರಕ್ಕೆ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

Date:

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮೊದಲೇ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ನಡೆಸಿದ ನ್ಯಾ ಬಿ ವಿ ನಾಗರತ್ನ ಹಾಗೂ ನ್ಯಾ. ಉಜ್ವಲ್ ಭುಯಾನ್‌ ಅವರಿದ್ದ ವಿಭಾಗೀಯ ಪೀಠ ಆದೇಶವನ್ನು ಕಾಯ್ದಿರಿಸಿದೆ.

ಆಗಸ್ಟ್‌ನಲ್ಲಿ ಆರಂಭವಾದ 11 ದಿನಗಳ ಸುದೀರ್ಘ ವಿಚಾರಣೆಯ ನಂತರ ನ್ಯಾಯಮೂರ್ತಿಗಳು ಆದೇಶವನ್ನು ಕಾಯ್ದಿರಿಸಿದರು.

ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಹಾಗೂ ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಅಕ್ಟೋಬರ್ 16 ರೊಳಗೆ ಸಲ್ಲಿಸುವಂತೆ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾವು ಪ್ರತಿವಾದಿಗಳಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳನ್ನು ಸಲ್ಲಿಸಲು ಗುಜರಾತ್ ರಾಜ್ಯದ ವಕೀಲರನ್ನು ಕೇಳಿದ್ದೇವೆ. ಮೂಲ ದಾಖಲೆಗಳು ಗುಜರಾತಿಯಲ್ಲಿವೆ ಎಂದು ಸಲ್ಲಿಸಲಾಗಿದೆ. ಆದ್ದರಿಂದ ಇಂಗ್ಲಿಷ್ ಭಾಷಾಂತರಗಳು ಸೋಮವಾರದೊಳಗೆ ಮೂಲ ದಾಖಲೆಗಳೊಂದಿಗೆ ಸಹ ಒದಗಿಸಬೇಕು. ಕೇಂದ್ರ ಸರ್ಕಾರವು ಕೂಡ ಮೂಲ ದಾಖಲೆಗಳನ್ನು ಒದಗಿಸಬೇಕು” ಎಂದು ನ್ಯಾಯಾಧೀಶರು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಇಸ್ರೇಲ್ ಮೇಲೇಕೆ ಮೋದಿ ಪ್ರೀತಿ: ಸುಬ್ರಹ್ಮಣ್ಯನ್ ಸ್ವಾಮಿ ಪ್ರಶ್ನೆ

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ 11 ಅಪರಾಧಿಗಳನ್ನು ಅವರು ನಡೆಸಿದ ಅಮಾನುಷ ಅಪರಾಧಕ್ಕಾಗಿ ಮರಳಿ ಜೈಲಿಗೆ ಕಳುಹಿಸಬೇಕು ಎಂದು ಬಿಲ್ಕಿಸ್‌ ಪರ ವಕೀಲೆ ಶೋಭಾ ಗುಪ್ತಾ ಸುಪ್ರೀಂ ಕೋರ್ಟಿನ ಮುಂದೆ ತಮ್ಮ ವಾದ ಮಂಡಿಸಿದರು.

ಅವರನ್ನು ಬಿಡುಗಡೆಗೊಳಿಸುವ ಮುನ್ನ ಅಪರಾಧದ ಸ್ವರೂಪವನ್ನು, ಅದು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಸರ್ಕಾರ ಪರಿಗಣಿಸಬೇಕಿತ್ತು ಎಂದು ಬಿಲ್ಕಿಸ್‌ ಬಾನೊ ಅವರ ವಕೀಲೆ ಹೇಳಿದರು.

ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಲ್ಕಿಸ್ ಬಾನೊ ಮಾತ್ರವಲ್ಲದೆ, ಸಿಪಿಎಂ ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಲಖನೌ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ರೂಪ್ ರೇ ವರ್ಮಾ ಸೇರಿದಂತೆ ಹಲವರು ಪಿಐಎಲ್ ಸಲ್ಲಿಸಿದ್ದಾರೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರೂ ಅಪರಾಧಿಗಳಿಗೆ ನೀಡಲಾದ ವಿನಾಯಿತಿ ಮತ್ತು ಅವರ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ದಾರೆ.

2002ರಲ್ಲಿ ಸಂಭವಿಸಿದ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ಭುಗಿಲೆದ್ದ ಕೋಮುಗಲಭೆಯಿಂದ ತಪ್ಪಿಸಿಕೊಳ್ಳಲು ಪಲಾಯನ ಮಾಡುತ್ತಿದ್ದ ಬಿಲ್ಕಿಸ್ ಬಾನೊ ಅವರ ಕುಟುಂಬದ ಮೇಲೆ ದಾಳಿ ನಡೆದಿತ್ತು. ಆ ಸಮಯದಲ್ಲಿ ಐದು ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಜೊತೆಗೆ ಬಾನೊ ಕುಟುಂಬದ ಏಳು ಜನರನ್ನು ಹತ್ಯೆ ಮಾಡಲಾಗಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾರಿತಪ್ಪಿಸುವ ಜಾಹೀರಾತು ಪ್ರಕರಣ: ಮತ್ತೆ ಪತ್ರಿಕೆಗಳಲ್ಲಿ ಕ್ಷಮೆಯಾಚನೆ ಪ್ರಕಟಿಸಿದ ರಾಮ್‌ದೇವ್

ಪತಂಜಲಿ ಆಯುರ್ವೇದ್ ಲಿಮಿಟೆಡ್ ವಿರುದ್ಧ ದಾರಿತಪ್ಪಿಸುವ ಜಾಹೀರಾತು ಪ್ರಕರಣ ದಾಖಲಾಗಿದ್ದು, ಸುಪ್ರೀಂ...

ʼಈ ದಿನʼ ಸಮೀಕ್ಷೆ | ರೈತರಿಗೆ ಮೋದಿ ಮಹಾ ಮೋಸ; ‘ಬೆಂಬಲ ಬೆಲೆ’ ಕೊಡೋರಿಗೆ ನಮ್ಮ ಬೆಂಬಲ ಎಂದ ಮತದಾರರು!

ಭಾರತವು ಜಾಗತಿಕ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ...

ಗಡ್ಕರಿ ಚುನಾವಣಾ ಅಭಿಯಾನಕ್ಕೆ ವಿದ್ಯಾರ್ಥಿಗಳ ಬಳಕೆ; ಶಾಲೆಯ ವಿರುದ್ಧ ಕ್ರಮಕ್ಕೆ ಇಸಿ ಆದೇಶ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಚುನಾವಣಾ ಪ್ರಚಾರದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡ...

ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳಲಿದೆ ಎಂದು ವಿವಾದಾತ್ಮಕ ಹೇಳಿಕೆ...