ದೆಹಲಿಯ ‘ಎಐ’ ಶೃಂಗಸಭೆಯಲ್ಲಿ ಬಿಲ್ ಗೇಟ್ಸ್ ಭಾಗಿ: ಊಹಾಪೋಹ ಅಲ್ಲಗಳೆದ ಗೇಟ್ಸ್ ಫೌಂಡೇಶನ್‌

Date:

ದೆಹಲಿಯಲ್ಲಿ ನಡೆಯಲಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ–2026’ರಲ್ಲಿ ಮೈಕ್ರೋಸಾಫ್ಟ್ ಸಹ–ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಪಾಲ್ಗೊಳ್ಳುವುದು ಖಚಿತವಾಗಿದೆ. ಅವರು ಶೃಂಗಸಭೆಗೆ ಗೈರಾಗಲಿದ್ದಾರೆ ಎಂಬ ಊಹಾಪೋಹಗಳನ್ನು ಗೇಟ್ಸ್ ಫೌಂಡೇಶನ್‌ನ ವಕ್ತಾರರು ಮಂಗಳವಾರ ತಳ್ಳಿಹಾಕಿದ್ದು, ಗೇಟ್ಸ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನಿಗದಿಯಂತೆ ತಮ್ಮ ಪ್ರಧಾನ ಭಾಷಣವನ್ನು ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

ಈ ಹಿಂದೆ, ಶೃಂಗಸಭೆಯ ಆನ್‌ಲೈನ್ ಪಟ್ಟಿಯಿಂದ ಗೇಟ್ಸ್ ಅವರ ಹೆಸರು ನಾಪತ್ತೆಯಾಗಿದ್ದರಿಂದ ಅವರು ಕಾರ್ಯಕ್ರಮಕ್ಕೆ ಗೈರಾಗಬಹುದು ಎಂದು ಮೂಲಗಳು ತಿಳಿಸಿದ್ದವು. ಇದು ತೀವ್ರ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ, ಈ ಎಲ್ಲ ವರದಿಗಳನ್ನು ನಿರಾಕರಿಸಿರುವ ವಕ್ತಾರರು, “ಗೇಟ್ಸ್ ಫೌಂಡೇಶನ್‌ನ ಅಧ್ಯಕ್ಷರಾದ ಬಿಲ್ ಗೇಟ್ಸ್ ಅವರು ಎಐ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ” ಎಂದು ಅಧಿಕೃತವಾಗಿ ಘೋಷಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಫೆಬ್ರುವರಿ 19 ಮತ್ತು 20ರಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ಈ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಕೃತಕ ಬುದ್ಧಿಮತ್ತೆಯ ಆಡಳಿತ, ಜಾಗತಿಕ ಸಹಕಾರ ಮತ್ತು ಆವಿಷ್ಕಾರದ ಕುರಿತು ನಡೆಯುವ ಈ ಮಹತ್ವದ ಸಮಾವೇಶದಲ್ಲಿ 30ಕ್ಕೂ ಹೆಚ್ಚು ರಾಷ್ಟ್ರಗಳ ನೀತಿ ನಿರೂಪಕರು ಭಾಗವಹಿಸುತ್ತಿದ್ದಾರೆ. ಆಲ್ಫಾಬೆಟ್‌ನ ಸುಂದರ್ ಪಿಚೈ ಮತ್ತು ಓಪನ್‌ಎಐನ ಸ್ಯಾಮ್ ಆಲ್ಟ್‌ಮನ್‌ ಅವರಂತಹ ಜಾಗತಿಕ ತಂತ್ರಜ್ಞಾನ ದಿಗ್ಗಜರು ಕೂಡ ಪಾಲ್ಗೊಳ್ಳಲಿದ್ದಾರೆ.

ಜೆಫ್ರಿ ಎಪ್ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳ ಬಗ್ಗೆ ಆನ್‌ಲೈನ್‌ನಲ್ಲಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಸ್ಪಷ್ಟನೆ ಹೊರಬಿದ್ದಿದೆ. ಈ ಹಿಂದೆಯೇ ಗೇಟ್ಸ್ ಅವರು ಎಪ್ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳನ್ನು “ಸಂಪೂರ್ಣ ಅಸಂಬದ್ಧ ಮತ್ತು ಸುಳ್ಳು” ಎಂದು ತಳ್ಳಿಹಾಕಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶನಿವಾರ ದೆಹಲಿಯಲ್ಲಿ ಸಿಜೆಪಿ 2ನೇ ಬೃಹತ್ ಪ್ರತಿಭಟನೆ

ಎಸ್‌ಐಆರ್‌ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ವಿರುದ್ಧ...

ದೆಹಲಿ ಗಲಭೆ, ಜಾಮಿಯಾ ಹಿಂಸಾಚಾರ: ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿಗಳು ವಜಾ

2020ರ ಈಶಾನ್ಯ ದೆಹಲಿ ಗಲಭೆ ಹಾಗೂ 2019ರ ಡಿಸೆಂಬರ್‌ನಲ್ಲಿ ಜಾಮಿಯಾ ಮಿಲಿಯಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...