ಲೋಕಸಭೆಗೆ ಟಿಕೆಟ್ ನೀಡಿದ ಬಿಜೆಪಿ: ವಿವಾದದ ಬೆನ್ನಲ್ಲೇ ‘ಸ್ಪರ್ಧಿಸಲ್ಲ’ ಎಂದ ಭೋಜ್‌ಪುರಿ ನಟ, ಗಾಯಕ!

Date:

ಭಾರತೀಯ ಜನತಾ ಪಕ್ಷ ಲೋಕಸಭೆ ಚುನಾವಣೆ 2024ರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 195 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಮೊದಲ ಪಟ್ಟಿಯಲ್ಲಿ 28 ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಹಿಂದುಳಿದ ವರ್ಗದ 57 ಅಭ್ಯರ್ಥಿಗಳಿಗೆ, ಎಸ್​ಸಿ ಸಮುದಾಯದ 27 ಅಭ್ಯರ್ಥಿಗಳು, 18 ಎಸ್​ಟಿ ಹಾಗೂ 50 ವರ್ಷದ ಕೆಳಗಿರುವ 47 ಯುವಕರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲಿ ಮೋದಿ ಕ್ಯಾಬಿನೆಟ್​ನಲ್ಲಿದ್ದ 34 ಕೇಂದ್ರ ಸಚಿವರಿಗೆ ಮತ್ತೆ ಟಿಕೆಟ್​ ಖಚಿತವಾಗಿದೆ. ಇಬ್ಬರು ಮಾಜಿ ಸಿಎಂಗಳಿಗೂ ಟಿಕೆಟ್​ ನೀಡಲಾಗಿದೆ.

ಈತನ್ಮಧ್ಯೆ, ಬಿಜೆಪಿ ಟಿಕೆಟ್ ನೀಡಿದ್ದರೂ ಸಹ ಪಶ್ಚಿಮ ಬಂಗಾಳದ ಗಾಯಕ, ನಟನೊಬ್ಬ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದಾರೆ. ಭೋಜ್‌ಪುರಿ ಗಾಯಕ ಮತ್ತು ಬಿಜೆಪಿ ಅಭ್ಯರ್ಥಿ ಪವನ್ ಸಿಂಗ್ ಅವರು ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ಅವರು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿರುವುದಾಗಿ ಪವನ್ ಸಿಂಗ್ ಅವರು ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ತಮ್ಮ ಟ್ವೀಟ್‌ನಲ್ಲಿ ಪವನ್ ಸಿಂಗ್, “ಭಾರತೀಯ ಜನತಾ ಪಕ್ಷದ ಉನ್ನತ ನಾಯಕತ್ವಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ಪಕ್ಷವು ನನ್ನನ್ನು ನಂಬಿ ಅಸನ್ಸೋಲ್ ಅಭ್ಯರ್ಥಿ ಎಂದು ಘೋಷಿಸಿತು. ಆದರೆ ಕಾರಣಾಂತರಗಳಿಂದ ನಾನು ಅಸನ್ಸೋಲ್‌ನಿಂದ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ. ನಿನ್ನೆ ಬಿಜೆಪಿ ಪ್ರಕಟಿಸಿದ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಪವನ್ ಸಿಂಗ್ ಹೆಸರೂ ಸೇರಿತ್ತು. ಕಾರಣ ಬಹಿರಂಗಗೊಳಿಸಿಲ್ಲ. ಟಿಕೆಟ್ ಘೋಷಣೆ ವೇಳೆ ಭಾರೀ ಸಂಭ್ರಮಾಚರಣೆ ಕೂಡ ಮಾಡಿದ್ದರು.

ವಾಸ್ತವವಾಗಿ, ಅಸನ್ಸೋಲ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪವನ್ ಸಿಂಗ್ ಹೆಸರನ್ನು ಘೋಷಿಸಿದ ತಕ್ಷಣ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪವನ್ ಸಿಂಗ್ ತಮ್ಮ ಹಾಡಿನಲ್ಲಿ ಮಹಿಳೆಯರನ್ನು ಅವಹೇಳನಕಾರಿಯಾಗಿ ತೋರಿಸಿದ್ದನ್ನು ಬಹಿರಂಗಗೊಳಿಸಿತು.

ಪವನ್ ಸಿಂಗ್ ಅವರು ಬಂಗಾಳಿ ಮಹಿಳೆಯರ ಬಗ್ಗೆ ಹಾಡಿದ ಹಾಡುಗಳಿಗೆ ಟಿಎಂಸಿ ಅವರನ್ನು ಗುರಿಯಾಗಿಸಿದ್ದು, ಪವನ್ ಸಿಂಗ್ ಅವರ ಹಾಡುಗಳ ಪೋಸ್ಟರ್‌ಗಳನ್ನು ಹಂಚಿಕೊಳ್ಳುವಾಗ, ಟಿಎಂಸಿ ನಾಯಕರು ಬಂಗಾಳಿ ಹಾಡುಗಳು, ಸಂಸ್ಕೃತಿ ಮತ್ತು ಮಹಿಳೆಯರನ್ನು ಅವಮಾನಿಸಿದ ವ್ಯಕ್ತಿಯನ್ನು ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ ಎಂದು ಟೀಕಿಸಿದ್ದರು.

ಕೆಲವು ಟಿಎಂಸಿ ನಾಯಕರು ಭೋಜ್‌ಪುರಿ ಗಾಯಕನ ಕೆಲವು ಹಾಡುಗಳ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಇದರಲ್ಲಿ ಅವರು ಸ್ಪಷ್ಟವಾಗಿ ಮಹಿಳೆಯರನ್ನು ಅವಮಾನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಸೇರಿದಂತೆ ಹಲವು ನಾಯಕರು ಪವನ್ ಸಿಂಗ್ ಅವರ ಆಯ್ಕೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು.

ಪಶ್ಚಿಮ ಬಂಗಾಳದ 42 ಸ್ಥಾನಗಳ ಪೈಕಿ ಚುನಾವಣೆ ಘೋಷಣೆಯಾಗುವ ಮೊದಲೇ ಬಿಜೆಪಿ ಒಂದು ಸ್ಥಾನವನ್ನು ಬಿಟ್ಟುಕೊಟ್ಟಿದೆ ಎಂದು ಟಿಎಂಸಿ ನಾಯಕ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪವನ್ ಸಿಂಗ್ ಚುನಾವಣಾ ಕ್ಷೇತ್ರದಿಂದ ಹಿಂದೆ ಸರಿದಿರುವ ಕುರಿತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದು, “ಪಶ್ಚಿಮ ಬಂಗಾಳದ ಜನರ ಅದಮ್ಯ ಚೇತನ ಮತ್ತು ಶಕ್ತಿ’ ಎಂದು ಹೇಳಿದರೆ, ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಒಬ್ರಿಯಾನ್, ‘ಬಿಜೆಪಿಯವರ ಆಟ ಪ್ರಾರಂಭವಾಗುವ ಮೊದಲೇ ಮುಗಿದಿದೆ’ ಎಂದು ಹೇಳುವ ಮೂಲಕ ವ್ಯಂಗ್ಯವಾಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ...

ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ...

ಭಾರತದ ಯುವಕರದು ವಿರಾಟ್ ಕೊಹ್ಲಿ ರೀತಿಯ ಮನಸ್ಥಿತಿ: ರಘುರಾಂ ರಾಜನ್

ಬೃಹತ್ ಸಂಖ್ಯೆಯ ಭಾರತದ ಯುವಕರು ವಿದೇಶಗಳಿಗೆ ಹೋಗಿ ಅಲ್ಲಿ ತಮ್ಮ ಉದ್ಯಮವನ್ನು...