ಪಂಜಾಬ್‌| ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ರೈತರ ಪ್ರತಿಭಟನೆಯ ಬಿಸಿ

Date:

ಪಂಜಾಬ್‌ನಲ್ಲಿ ರೈತರ ಪ್ರತಿಭಟನೆ ನಿರಂತರವಾಗಿ ಮುಂದುವರೆದಿದ್ದು, ಲೋಕಸಭೆ ಚುನಾವಣೆಯ ಪ್ರಚಾರ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿಗಳಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದೆ. ಬಿಜೆಪಿ ಅಭ್ಯರ್ಥಿಗಳು ಮತ್ತು ಮುಖಂಡರು ಲೋಕಸಭೆ ಚುನಾವಣೆ ಪ್ರಚಾರ ಮಾಡುವಾಗ ರೈತರ ಕಪ್ಪು ಬಾವುಟವನ್ನು ಎದುರಿಸಬೇಕಾಗಿದೆ.

ಬಟಾಲಾದಲ್ಲಿ ಬಿಜೆಪಿ ಅಭ್ಯರ್ಥಿ ದಿನೇಶ್ ಬಬ್ಬು ಮತ್ತು ಪಂಜಾಬ್‌ನ ಬರ್ನಾಲಾದಲ್ಲಿ ಬಿಜೆಪಿ ಮುಖಂಡ ಅರವಿಂದ್ ಖನ್ನಾ ವಿರುದ್ಧ ರೈತರು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಮುಖಂಡರು ನಮ್ಮ ಬೇಡಿಕೆ ಈಡೇರಿಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫರೀದ್‌ಕೋಟ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾದ ಹನ್ಸ್ ರಾಜ್ ಹನ್ಸ್, ಅಮೃತಸರದ ಬಿಜೆಪಿ ಅಭ್ಯರ್ಥಿ ತರಂಜಿತ್ ಸಿಂಗ್ ಸಂಧು ಮತ್ತು ಪಟಿಯಾಲದ ಬಿಜೆಪಿ ಅಭ್ಯರ್ಥಿ ಪ್ರಣೀತ್ ಕೌರ್ ಈಗಾಗಲೇ ರೈತರ ಆಕ್ರೋಶಕ್ಕೆ ಒಳಗಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಪೊಲೀಸರ ಗುಂಡಿನ ದಾಳಿಯಿಂದ ಮೃತಪಟ್ಟ ರೈತ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ 1 ಕೋಟಿ ರೂ. ಪರಿಹಾರ

ಬಟಾಲಾದಲ್ಲಿನ ಫತೇಘರ್ ಚುರಿಯನ್‌ನಲ್ಲಿ, ಗುರುದಾಸ್‌ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ದಿನೇಶ್ ಬಬ್ಬು ವಿರುದ್ಧ ರೈತರ ಗುಂಪು ಭಾನುವಾರ ಘೋಷಣೆಗಳನ್ನು ಕೂಗಿದೆ. ಕೊನೆಗೆ ಬಬ್ಬು ಮತ್ತು ಬಿಜೆಪಿ ಬೆಂಬಲಿಗರು ಚುನಾವಣಾ ಸಂಬಂಧಿತ ಕಾರ್ಯಕ್ರಮ ನಡೆಸುತ್ತಿದ್ದ ಸ್ಥಳಕ್ಕೆ ಪ್ರತಿಭಟನಾಕಾರರು ಹೋಗದಂತೆ ಪೊಲೀಸರು ತಡೆಯುವ ಪ್ರಯತ್ನ ಮಾಡಿದ್ದಾರೆ.

ಕೇಂದ್ರ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ. ಈ ಕಾರಣದಿಂದಾಗಿ ನಾವು ಸ್ಥಳೀಯವಾಗಿ ಬಿಜೆಪಿ ನಾಯಕರನ್ನು ವಿರೋಧಿಸುವುದನ್ನು ಮುಂದುವರಿಸುತ್ತೇವೆ ಎಂದು ಫತೇಘರ್ ಚುರಿಯನ್‌ನಲ್ಲಿ ಪ್ರತಿಭಟನಾಕಾರರೊಬ್ಬರು ಹೇಳಿದ್ದಾರೆ.

ಇನ್ನು ಈ ಪ್ರತಿಭಟನೆ ಬಗ್ಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಬ್ಬು, “ನಮ್ಮ ಪಕ್ಷಕ್ಕೆ ಮಾತ್ರ ರೈತರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುವುದಾದರೆ ಇತರ ರಾಜಕೀಯ ಸಂಘಟನೆಗಳು ತಮ್ಮ ಪಟ್ಟಭದ್ರ ಹಿತಾಸಕ್ತಿಗಳಿಗೆ ರೈತರನ್ನು ಬಳಸುತ್ತಾರೆ. ನಾವು ರೈತರೊಂದಿಗೆ ಇದ್ದೇವೆ ಮತ್ತು ನಾನು ಕೂಡ ರೈತ. ಅವರ ಸಮಸ್ಯೆಯನ್ನು ಮಾತುಕತೆ ಮೂಲಕ ಪರಿಹರಿಸಬಹುದು” ಎಂದರು.

ಇದನ್ನು ಓದಿದ್ದೀರಾ?  ಸರ್ಕಾರದ ಮೇಲೆ ಕಾರ್ಪೊರೇಟ್ ನಿಯಂತ್ರಣವಿದೆ; ಬಿಜೆಪಿ ಪ್ರಣಾಳಿಕೆಯನ್ನ ರೈತರು ನಂಬುವುದಿಲ್ಲ: ರಾಕೇಶ್ ಟಿಕಾಯತ್

ಇನ್ನೊಂದೆಡೆ ಬಿಜೆಪಿ ನಾಯಕ ಅರವಿಂದ್ ಖನ್ನಾ ಅವರು ಪ್ರಚಾರಕ್ಕೆ ಹೋದಾಗ ಬರ್ನಾಲಾದಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.

ರೈತರನ್ನು ದೆಹಲಿಗೆ ಹೋಗಲು ಬಿಡುತ್ತಿಲ್ಲ ಮತ್ತು ಅವರ ವಿರುದ್ಧ ಬಲ ಪ್ರಯೋಗ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರಲ್ಲಿ ಒಬ್ಬರು ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ನೇತೃತ್ವದಲ್ಲಿ ಕೇಂದ್ರ ಸರ್ಕಾರವು ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿ ನೀಡಬೇಕು ಎಂದು ಒತ್ತಾಯಿಸಿ ರೈತರಿಂದ ‘ದೆಹಲಿ ಚಲೋ’ ಮೆರವಣಿಗೆಯನ್ನು ನಡೆಸಲಾಗುತ್ತಿದೆ. ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ರೈತರು ಮೆರವಣಿಗೆ ಆರಂಭಿಸಿದ್ದು ಇದನ್ನು ಭದ್ರತಾ ಪಡೆಗಳು ತಡೆದಿದ್ದಾರೆ.

ಪಂಜಾಬ್‌ನ 13 ಲೋಕಸಭಾ ಸ್ಥಾನಗಳಿಗೆ ಜೂನ್ 1 ರಂದು ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೆಮಲ್ ಚಂಡಮಾರುತ| ಬಂಗಾಳದಲ್ಲಿ ಭೂಕುಸಿತ ಸಾಧ್ಯತೆ; ವಿಮಾನ, ರೈಲುಗಳು ರದ್ದು

ರೆಮಲ್ ಚಂಡಮಾರುತ ಇಂದು (ಮೇ 26) ರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದ್ದು,...

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

ಉತ್ತರ ಪ್ರದೇಶ ಶಹಜಹಾನ್‌ಪುರದಲ್ಲಿ ಬಸ್‌ ಹಾಗೂ ಟ್ರಕ್ ನಡುವೆ  ಸಂಭವಿಸಿದ ಭೀಕರ...

ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್...