ಮಧ್ಯಪ್ರದೇಶದ ಸತ್ನಾದಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಮಗ ಮದುವೆಯಾಗುವುದಾಗಿ ನಂಬಿಸಿ 27 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಈ ಬಗ್ಗೆ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಉಸ್ತುವಾರಿ ಯೋಗೇಂದ್ರ ಸಿಂಗ್ ಪರಿಹಾರ್ ಮಾಹಿತಿ ನೀಡಿದ್ದು, ಬುಧವಾರ ಸಂಜೆ ಎಫ್ಐಆರ್ ದಾಖಲಿಸಲಾಗಿದೆ. ಕೌನ್ಸಿಲರ್ ಮನೆಯ ಮೇಲೆ ತಂಡ ದಾಳಿ ನಡೆಸಿದೆ. ಆದರೆ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಬೀದರ್ | ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಅತ್ಯಾಚಾರ ಆರೋಪ; ಯುವತಿ ವಿರುದ್ಧವೇ ಪ್ರತ್ಯಾರೋಪ ಮಾಡಿದ ಶಾಸಕ
ಜಬಲ್ಪುರದ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುವ ಮಹಿಳೆ ಹಲವಾರು ವರ್ಷಗಳಿಂದ ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದಳು. ಮದುವೆಯಾಗುವುದಾಗಿ ಭರವಸೆ ನೀಡಿ ಆತ ದೈಹಿಕ ಸಂಬಂಧ ಬೆಳೆಸಿದ್ದನು. ಆದರೆ ಬಳಿಕ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.
ಆರೋಪಿಯು ಏಪ್ರಿಲ್ 20ರಂದು ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲಿದ್ದು, ಏಪ್ರಿಲ್ 16ರಂದು ತಿಲಕ ಸಮಾರಂಭವನ್ನು ನಡೆಯಲಿತ್ತು. ಆದ್ದರಿಂದ ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ ಎಂದು ವರದಿಯಾಗಿದೆ.
ಪೋಲೀಸರು ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತದ ಸೆಕ್ಷನ್ 69 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ತಾಯಿ ಬಿಜೆಪಿ ಕೌನ್ಸಿಲರ್ ಆಗಿದ್ದಾರೆ. ಈ ಹಿಂದೆ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.





