ಪಶ್ಚಿಮ ಬಂಗಾಳ ದ ಧಿನಾಜ್‌ಪುರ್ ಜಿಲ್ಲೆಯ ಚೋಪ್ರಾ ಪ್ರದೇಶದಲ್ಲಿ ಹಾಡಹಗಲಿನಲ್ಲಿಯೇ ಮಹಿಳೆಯೊಬ್ಬರ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಯಾವುದೋ ತಪ್ಪು ಮಾಡಿರುವ ಉದ್ದೇಶದಿಂದ ಒರ್ವ ಮಹಿಳೆ ಹಾಗೂ ಪುರುಷರೊಬ್ಬರ ಮೇಲೆ ಗುಂಪು ಹಲ್ಲೆ ನಡೆಸಿದೆ. ವಿಡಿಯೋದಲ್ಲಿರುವಂತೆ ಹಲವರು ಯುವಕರು ಮಹಿಳೆ ಹಾಗೂ ಪುರುಷನೊಬ್ಬನ ಮೇಲೆ ಮನಬಂದಂತೆ ಹಲ್ಲೆ ನಡೆಸುತ್ತಿದ್ದಾರೆ.
ಘಟನೆಗೆ ವಿಪಕ್ಷಗಳಾದ ಸಿಪಿಎಂ ಹಾಗೂ ಬಿಜೆಪಿ, ಆಡಳಿತ ಪಕ್ಷ ಟಿಎಂಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಟಿಎಂಸಿ ಗೂಂಡಾಗಳು ಕಾಂಗರೊ ಕೋರ್ಟ್ ಮಾದರಿ ತಾವೆ ವಿಚಾರಣೆ ನಡೆಸಿ ಶಿಕ್ಷೆ ನೀಡುತ್ತಿರುವುದು ತೃಣಮೂಲ ಕಾಂಗ್ರೆಸ್ ಪಕ್ಷದ ಆಡಳಿತದ ಮಾದರಿಗೆ ಸಾಕ್ಷಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯಗೊಂಡಿದೆ ಎಂದು ಕಿಡಿಕಾರಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 ಆರೋಪಿಗಳ ಪೈಕಿ ಏಳು ಮಂದಿಯನ್ನು ಬಂಧಿಸಿದ್ದು, ಉಳಿದ ಮೂವರ ಬಂಧನಕ್ಕೆ ಶೋಧ ನಡೆಯುತ್ತಿದ್ದಾರೆ. ಇಂದು ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಈ ನಡುವೆ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಖೊಂಡುಪ್ ಕೂಡ ಸಂತ್ರಸ್ತೆ ಹಾಗೂ ತನಿಖೆಯ ವಿವರಗಳನ್ನು ತಿಳಿಯಲು ಅವರು ಜಿಲ್ಲಾ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದರು.
ಪ್ರಕರಣದಲ್ಲಿ ದಾಖಲಿಸಲಾದ ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಕಾನೂನುಗಳನ್ನು ಅನ್ವಯಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ .
