ವಿಪಕ್ಷಗಳನ್ನು ಒಂದಾಗಿಸುತ್ತಿರುವ ಬಿಜೆಪಿಯ ಸರ್ವಾಧಿಕಾರಿ, ದಮನ, ದಬ್ಬಾಳಿಕೆಯ ಹೊಡೆತ

Date:

ಕಳೆದ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟವು ಬಿಜೆಪಿಗೆ ತೀವ್ರ ಸ್ಪರ್ಧೆ ನೀಡಿತು, ಬಿಜೆಪಿ ಬಹುಮತ ಪಡೆಯಲು ಸಾಧ್ಯವಾಗದಂತೆ ಮಾಡಿತು. ಆದರೆ ಆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮಾತ್ರ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿತು. ಅದೇ ನಿರ್ಧಾರವನ್ನು ವಿಧಾನಸಭೆ ಚುನಾವಣೆ ವೇಳೆಯೂ ಕೈಗೊಂಡಿದೆ. ಇದೀಗ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ತೀವ್ರ ಹಿನ್ನಡೆ ಕಂಡಿದೆ. ಬಿಜೆಪಿಯ ಸರ್ವಾಧಿಕಾರಿ, ದಮನ, ದಬ್ಬಾಳಿಕೆ ಹೆಚ್ಚಾಗುತ್ತಿದೆ. ಇವೆಲ್ಲವುದರ ಹೊಡೆತ ಇದೀಗ ವಿಪಕ್ಷಗಳು ಒಂದಾಗುವಂತೆ ಮಾಡಿದೆ.

- Advertisement -

ಬಂಗಾಳದಲ್ಲಿ ಟಿಎಂಸಿ ಆಘಾತಕಾರಿ ಸೋಲು ಕಂಡ ಬಳಿಕ ಮಮತಾ ಬ್ಯಾನರ್ಜಿ ಪರವಾಗಿ ಎಲ್ಲ ವಿಪಕ್ಷಗಳು ನಿಂತಿವೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಿ ವಿಪಕ್ಷಗಳ ಮತಗಳನ್ನು ಕಿತ್ತುಕೊಂಡ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ಹೆಚ್ಚಾಗಿದೆ. ‘ಬಿಜೆಪಿಯು ನೂರಕ್ಕೂ ಅಧಿಕ ಸೀಟುಗಳನ್ನು ಲೂಟಿ ಮಾಡಿದೆ’ ಎಂಬ ಮಮತಾ ಅವರ ಗಂಭೀರ ಆರೋಪಕ್ಕೆ ವಿಪಕ್ಷ ನಾಯಕರುಗಳು ದನಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ದೆಹಲಿ ಕಪಿಮುಷ್ಟಿಗೆ ಸಿಲುಕುವರೇ ಜೋಸೆಫ್ ವಿಜಯ್? ಮೈತ್ರಿ ಲೆಕ್ಕಾಚಾರದಲ್ಲಿ ತಮಿಳುನಾಡು ರಾಜಕೀಯ

ಮಮತಾ ಬ್ಯಾನರ್ಜಿ ಅವರ ಆರೋಪದಲ್ಲಿ ಹುರುಳಿದೆ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಅವರು ಬ್ಯಾನರ್ಜಿಗೆ ಬೆಂಬಲ ನೀಡಿದ್ದಾರೆ. ಬಿಜೆಪಿಯ ಈ ಗೆಲುವು ‘ಜನಾದೇಶದ ಅಪಹರಣ’ ಎಂದು ರಾಹುಲ್ ಗಾಂಧಿ ಕರೆದಿದ್ದಾರೆ. ಬಿಜೆಪಿ ಮತ್ತು ಚುನಾವಣಾ ಆಯೋಗ ಸೇರಿ ಪಶ್ಚಿಮ ಬಂಗಾಳದಲ್ಲಿ ಮತಗಳ್ಳತನ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಬ್ಯಾನರ್ಜಿ ಸೋತಿದ್ದರೂ, ಬಿಜೆಪಿ ಗೆಲುವು ಆತಂಕಕಾರಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಸುಮಾರು ಮೂರು ದಶಕಗಳಿಂದ ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಟಿಎಂಸಿ ಸರ್ಕಾರದ ಸೋಲು ದೇಶದ ಪ್ರಶ್ನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಬಂಗಾಳದಲ್ಲಿ ಟಿಎಂಸಿ ಸೋತಿದ್ದಕ್ಕೆ ಸಂಭ್ರಮಿಸುತ್ತಿರುವ ಕೆಲವು ಕಾಂಗ್ರೆಸ್ಸಿಗರಿಗೆ ರಾಹುಲ್ ಗಾಂಧಿ ಕಟುವಾದ ಎಚ್ಚರಿಕೆ ನೀಡಿದ್ದಾರೆ. “ಇದು ಕೇವಲ ಒಂದು ಪಕ್ಷದ ಸೋಲಲ್ಲ. ಇದು ದೇಶದ ಜನತಂತ್ರವನ್ನು ನಾಶಪಡಿಸಲು ನಡೆಯುತ್ತಿರುವ ವ್ಯಾಪಕ ಹುನ್ನಾರ. ಮಧ್ಯಪ್ರದೇಶ, ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ನಡೆದದ್ದೇ ಈಗ ಬಂಗಾಳದಲ್ಲೂ ಮರುಕಳಿಸಿದೆ,” ಎಂದು ಹೇಳುವ ಮೂಲಕ ವಿಪಕ್ಷಗಳೆಲ್ಲವೂ ಒಗ್ಗಟ್ಟಾಗಲು ಕರೆ ನೀಡಿದ್ದಾರೆ.

ಇನ್ನೊಂದೆಡೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಜಾರ್ಖಂಡ್‌ನ ಜೆಎಂಎಂ ನಾಯಕ ಹೇಮಂತ್ ಸೊರೇನ್, ಬಿಹಾರದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್‌ ಮೊದಲಾದ ಪ್ರಾದೇಶಿಕ ನಾಯಕರು ಮಮತಾ ಬ್ಯಾನರ್ಜಿಯೊಂದಿಗೆ ಮಾತನಾಡಿ ಸಾಂತ್ವನ ಹೇಳಿದ್ದಾರೆ. ಹಾಗೆಯೇ ಬಿಜೆಪಿಯ ಚುನಾವಣಾ ತಂತ್ರಗಾರಿಕೆಯ ವಿರುದ್ಧ ಹೋರಾಡಲು ಒಮ್ಮತ ಸೂಚಿಸಿದ್ದಾರೆ.

ಇವೆಲ್ಲವುದರ ನಡುವೆ ತಮಿಳುನಾಡಿನಲ್ಲಿ ಹೊಸ ಲೆಕ್ಕಾಚಾರ ನಡೆಯುತ್ತಿದೆ. ದಕ್ಷಿಣದ ರಾಜಕಾರಣದಲ್ಲಿ ತಮಿಳುನಾಡು ಈಗ ಕುತೂಹಲದ ಕೇಂದ್ರಬಿಂದುವಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ ಘೋಷಿಸಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಟಿವಿಕೆಗೆ ಬೆಂಬಲ ನೀಡಲು ಮುಂದಾಗಿದೆ. ಇದರಿಂದಾಗಿ ಡಿಎಂಕೆ ಜತೆಗಿನ ಮೈತ್ರಿ ಮುರಿದುಬಿದ್ದಿದೆ.

2024ರ ಲೋಕಸಭೆ ಚುನಾವಣೆ ಬಳಿಕ ವಿಪಕ್ಷಗಳು ಹರಿದು ಹಂಚಿಹೋಗಿದ್ದವು. ಇದೀಗ ಚುನಾವಣೆ ಫಲಿತಾಂಶಗಳು ಬಿಜೆಪಿಯ ಎಸ್‌ಐಆರ್ ಆಟ, ಸರ್ವಾಧಿಕಾರಿ ನಡೆಯು ವಿಪಕ್ಷಗಳನ್ನು ಮತ್ತೆ ಎಚ್ಚರಿಸಿವೆ. ಈಗ ಬಿಜೆಪಿಯ ಅಶ್ವಮೇಧಕ್ಕೆ ಬ್ರೇಕ್ ಹಾಕಲು ಮತ್ತೆ ಒಂದಾಗುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...