ಜೆನ್‌-ಝೀ ಮತಗಳ ಮೇಲೆ ಬಿಜೆಪಿ ಕಣ್ಣು; ಚುನಾವಣಾ ರಾಜ್ಯಗಳ 45 ನಾಯಕರೊಂದಿಗೆ ನಿತಿನ್ ನಬಿನ್ ಸಭೆ

Date:

ದೇಶದ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿರುವ ಜೆನ್‌-ಝೀ ವಿದ್ಯಾರ್ಥಿ, ಯುವ ಮತದಾರರನ್ನು ಸೆಳೆಯಲು ಬಿಜೆಪಿ ತನ್ನ ಪ್ರಚಾರ ಮತ್ತು ಸಂಘಟನಾ ತಂತ್ರವನ್ನು ಚುರುಕುಗೊಳಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಗಳು ನಡೆಯಲಿರುವ ರಾಜ್ಯಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರೊಂದಿಗೆ ಪಕ್ಷದ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಸಭೆ ನಡೆಸಿದ್ದಾರೆ. ಹೊಸ ತಲೆಮಾರಿನ ಮತದಾರರ ಮನೋಭಾವ, ಸಮಸ್ಯೆಗಳು ಹಾಗೂ ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳುವ ಕಾರ್ಯತಂತ್ರ ಕುರಿತು ಚರ್ಚಿಸಿದ್ದಾರೆ.

- Advertisement -

ಸಭೆಯಲ್ಲಿ; ಯುವಜನರ ವಿಶ್ವಾಸ ಗಳಿಸಲು ಅನುಸರಿಸಬೇಕಾದ ಮುಂದಿನ ಮಾರ್ಗಸೂಚಿ, ಅವರಿಗೆ ಎದುರಾಗುತ್ತಿರುವ ಸವಾಲುಗಳು ಹಾಗೂ ಅವುಗಳಿಗೆ ರಾಜಕೀಯ ಮತ್ತು ನೀತಿಗಳೊಂದಿಗೆ ಯಾವ ರೀತಿಯ ಪ್ರತಿಕ್ರಿಯಿಸಬಹುದು ಎಂಬುದರ ಕುರಿತು ಚರ್ಚೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪಕ್ಷದ ಮೂಲಗಳ ಪ್ರಕಾರ, ಉತ್ತರ ಪ್ರದೇಶ, ಪಂಜಾಬ್ ಹಾಗೂ ಗುಜರಾತ್ ಸೇರಿದಂತೆ ಚುನಾವಣೆ ಎದುರಿಸುತ್ತಿರುವ ಪ್ರಮುಖ ರಾಜ್ಯಗಳಿಂದ ಸುಮಾರು 45 ನಾಯಕರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್, ಕೇಂದ್ರ ಸಚಿವ ಕಮ್ಲೇಶ್ ಪಾಸ್ವಾನ್, ನಟ-ರಾಜಕಾರಣಿ ರವಿ ಕಿಶನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಹರೀಶ್ ದ್ವಿವೇದಿ, ಸಂಸದ ತೇಜಸ್ವಿ ಸೂರ್ಯ, ರಾಜು ಬಿಸ್ತಾ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಹೊಸದಾಗಿ ನೇಮಕಗೊಂಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹೇಮಾಂಗ್ ಜೋಶಿ, ಪೂನಂ ಮಹಾಜನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಮೃತಿ ಇರಾನಿ, ಗುಜರಾತ್ ಉಪಮುಖ್ಯಮಂತ್ರಿ ಹರ್ಷ ಸಂಘವಿ ಹಾಗೂ ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಕೂಡ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ನಾಯಕರು ಯುವಜನರಲ್ಲಿ ಪ್ರಭಾವ ಮತ್ತು ಸಂಪರ್ಕ ಹೊಂದಿರುವವರಾಗಿದ್ದು, ಅವರನ್ನು ಈ ಉದ್ದೇಶಕ್ಕಾಗಿಯೇ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಯುವಜನರು ಮುನ್ನಡೆಸಿದ ವಿವಿಧ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಬಿಜೆಪಿ Gen-Next ಮತ್ತು Gen-Z ಮತದಾರರ ವಿಶ್ವಾಸವನ್ನು ಮರಳಿ ಪಡೆಯಲು ಹೆಚ್ಚು ಒತ್ತು ನೀಡುತ್ತಿದೆ ಎನ್ನಲಾಗಿದೆ. ಯುವಜನರ ರಾಜಕೀಯ ಮನೋಭಾವದಲ್ಲಿ ಬದಲಾವಣೆ ಕಂಡುಬರುತ್ತಿರುವುದರಿಂದ ಅವರ ನಿರೀಕ್ಷೆಗಳನ್ನು ನೇರವಾಗಿ ಅರಿತುಕೊಳ್ಳಬೇಕೆಂಬ ಅಭಿಪ್ರಾಯ ಪಕ್ಷದೊಳಗೆ ಹೆಚ್ಚಾಗಿದೆ.

ಪಕ್ಷದ ಮೂಲಗಳ ಪ್ರಕಾರ, 2027ರಲ್ಲಿ ನಡೆಯಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಸಭೆಯ ಪ್ರಮುಖ ಅಜೆಂಡಾಗಳಲ್ಲಿ ಒಂದಾಗಿದ್ದವು. ವಿಶೇಷವಾಗಿ ಉತ್ತರ ಪ್ರದೇಶ, ಪಂಜಾಬ್ ಹಾಗೂ ಗುಜರಾತ್ ಸೇರಿದಂತೆ ಏಳು ರಾಜ್ಯಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಯುವ ಮತದಾರರೊಂದಿಗೆ ಸಂಪರ್ಕ ಸಾಧಿಸುವ ಸಮಗ್ರ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚಿಸಲಾಗಿದೆ.

ಬಿಜೆಪಿ ಈಗಾಗಲೇ ಯುವಜನರನ್ನು ತಲುಪಲು ಪ್ರತ್ಯೇಕ ತಂಡವೊಂದನ್ನು ರಚಿಸಿದೆ. ಈ ತಂಡವು ಯುವಜನರ ಆಶೆಗಳು, ಉದ್ಯೋಗ, ಶಿಕ್ಷಣ, ಆರ್ಥಿಕ ಅವಕಾಶಗಳು, ಸಾಮಾಜಿಕ ಅಸಮಾಧಾನಗಳು ಹಾಗೂ ರಾಜಕೀಯ ನಿರೀಕ್ಷೆಗಳನ್ನು ಅರಿತುಕೊಳ್ಳಲು ಪ್ರಯತ್ನಿಸಲಿದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

ಈ ತಂಡದಿಂದ ದೊರೆಯುವ ಪ್ರತಿಕ್ರಿಯೆಗಳ ಆಧಾರದಲ್ಲಿ 2027ರ ವಿಧಾನಸಭಾ ಚುನಾವಣೆಗಳು ಮಾತ್ರವಲ್ಲ, 2029ರ ಲೋಕಸಭಾ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ಬಿಜೆಪಿ ತನ್ನ ಯುವಜನ ಸಂಪರ್ಕ ತಂತ್ರವನ್ನು ಮರುರೂಪಿಸಲಿದೆ ಎನ್ನಲಾಗಿದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವರು ಮತ್ತು ಪಕ್ಷದ ನಾಯಕರಿಗೆ ‘ಒಂದು ದಿನ–ಒಂದು ವಿಶ್ವವಿದ್ಯಾಲಯ/ಕಾಲೇಜು’ ಮಾದರಿಯಲ್ಲಿ ವಿದ್ಯಾರ್ಥಿಗಳೊಂದಿಗೆ ನೇರ ಸಂಪರ್ಕ ಸಾಧಿಸಲು ಸೂಚಿಸಿದ್ದಾರೆ. ಇದರ ಭಾಗವಾಗಿ ದೇಶದ ವಿವಿಧ ಭಾಗಗಳಲ್ಲಿ ಬಿಜೆಪಿ ಶಾಸಕರು ಮತ್ತು ನಾಯಕರು ತಮ್ಮ ಕ್ಷೇತ್ರಗಳ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಆರಂಭಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...