ಮುಂಬರುವ ಚುನಾವಣಾ ಸಿದ್ಧತೆಗಾಗಿ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರ ನೇಮಿಸಿದ ಬಿಜೆಪಿ

Date:

  • ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಅಧ್ಯಕ್ಷರ ನೇಮಕ ಕುರಿತು ಬಿಜೆಪಿ ಮಾಹಿತಿ
  • ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗಳು

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐದು ರಾಜ್ಯ ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಚುನಾವಣೆ ನಡೆಯುವ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ಮಂಗಳವಾರ (ಜುಲೈ 4) ನೇಮಕ ಮಾಡಿದೆ.

- Advertisement -

ತೆಲಂಗಾಣದ ಬಿಜೆಪಿಯ ನೂತನ ಅಧ್ಯಕ್ಷರಾಗಿ ಜಿ.ಕಿಶನ್‌ ರೆಡ್ಡಿ, ಆಂಧ್ರಪ್ರದೇಶದ ಅಧ್ಯಕ್ಷರಾಗಿ ಡಿ.ಪುರುಂದೇಶ್ವರಿ, ಜಾರ್ಖಂಡ್‌ ರಾಜ್ಯಕ್ಕೆ ಮಾಜಿ ಮುಖ್ಯಮಂತ್ರಿ ಬಾಬುಲಾಲ್‌ ಮುರಾಂಡಿ ಹಾಗೂ ಪಂಜಾಬ್‌ಗೆ ಸುನಿಲ್‌ ಜಾಖರ್‌ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡಿ ಪಕ್ಷ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಬಿಜೆಪಿ ಈ ಕುರಿತು ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ಸುನಿಲ್‌ ಜಾಖರ್‌ ಅವರು ಈ ಹಿಂದೆ ಪಂಜಾಬ್‌ನ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬ್ರೇಕಿಂಗ್ ನ್ಯೂಸ್ | ಸೆಂಥಿಲ್ ಬಾಲಾಜಿ ಪ್ರಕರಣ; ಮದ್ರಾಸ್ ಹೈಕೋರ್ಟ್‌ ದ್ವಂದ್ವ ತೀರ್ಪು

ತೆಲಂಗಾಣದ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಈಟಾಳ ರಾಜೇಂದರ್‌ ಅವರನ್ನು ಬಿಜೆಪಿಯು ಇದೇ ವೇಳೆ ನೇಮಿಸಿದೆ.

ಬಂಡಿ ಸಂಜಯ್‌ ಕುಮಾರ್‌ ಈ ಮುನ್ನ ತೆಲಂಗಾಣ ಬಿಜೆಪಿ ಅಧ್ಯಕ್ಷರಾಗಿದ್ದರು. ಸಂಜಯ್ ಕುಮಾರ್ ಅವರು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಪುನರ್‌ ರಚನೆ ವೇಳೆ ಸಚಿವರಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಈ ವರ್ಷದ ಅಂತ್ಯದಲ್ಲಿ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...