ಅಸ್ಸಾಂನಲ್ಲಿ BJP ಎಂದರೆ ‘ಕೇಸರಿ ಲೇಬಲ್’ವುಳ್ಳ ಹಿಮಂತ್ ನೇತೃತ್ವದ ಕಾಂಗ್ರೆಸ್: ಗೌರವ್ ಗೊಗೊಯ್ ವ್ಯಂಗ್ಯ

Date:

ಅಸ್ಸಾಂನಲ್ಲಿರುವ ಬಿಜೆಪಿ ವಾಸ್ತವವಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ, ಕೇಸರಿ ಪಕ್ಷದ ಲೇಬಲ್ ಹೊಂದಿರುವ ಕಾಂಗ್ರೆಸ್ ಆಗಿದೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ವ್ಯಂಗ್ಯವಾಡಿದ್ದಾರೆ.

- Advertisement -

ವಿಧಾನಸಭಾ ಚುನಾವಣೆಯ ಹಿನ್ನೆಲೆ ಮಾಜುಲಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು. “ಮುಂಬರುವ ವಿಧಾನಸಭಾ ಚುನಾವಣೆಯು ಮಾಜಿ ಮುಖ್ಯಮಂತ್ರಿ ದಿವಂಗತ ತರುಣ್ ಗೊಗೊಯ್ ನೇತೃತ್ವದ ಕಾಂಗ್ರೆಸ್ ಮತ್ತು ‘ಶರ್ಮಾ ನೇತೃತ್ವದ ಕಾಂಗ್ರೆಸ್’ (ಬಿಜೆಪಿ) ನಡುವಿನ ಸ್ಪರ್ಧೆಯಾಗಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ತರುಣ್ ಗೊಗೊಯ್ ಅವರೊಂದಿಗಿನ ಭಿನ್ನಾಭಿಪ್ರಾಯದ ನಂತರ 2015ರಲ್ಲಿ ಶರ್ಮಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ತಮ್ಮೊಂದಿಗೆ ಅನೇಕ ಆಪ್ತರನ್ನು ಕರೆದೊಯ್ದಿದ್ದರು. ಇತ್ತೀಚೆಗೆ ಲೋಕಸಭಾ ಸಂಸದ ಪ್ರದ್ಯುತ್ ಬೊರ್ಡೊಲೊಯ್ ಮತ್ತು ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಕೂಡ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಬಿಜೆಪಿಯಲ್ಲಿರುವ ಪ್ರಬಲ ನಾಯಕರೆದಲ್ಲರೂ ಕಾಂಗ್ರೆಸ್‌ನವರೇ ಆಗಿದ್ದಾರೆ. ಆದ್ದರಿಂಲೇ, ಗೊಗೊಯ್ ಅವರು ಬಿಜೆಪಿಯಲ್ಲಿ ಲೇವಡಿ ಮಾಡಿದ್ದಾರೆ.

“ನಮ್ಮ ಮುಂದೆ ನಿಂತಿರುವುದು ಕೇವಲ ಬಿಜೆಪಿ ಟ್ಯಾಗ್ ಹೊತ್ತಿರುವ ಶರ್ಮಾ ನೇತೃತ್ವದ ಕಾಂಗ್ರೆಸ್. ತರುಣ್ ಗೊಗೊಯ್ ಅವರ ಅವಧಿಯಲ್ಲಿ ತಪ್ಪು ಮಾಡಿದ ನಾಯಕರು ಈಗ ಬಿಜೆಪಿಯಲ್ಲಿದ್ದಾರೆ. ಈಗ ಅವರೆಲ್ಲರೂ ಬಿಜೆಪಿಯಲ್ಲಿದ್ದುಕೊಂಡು ತಮ್ಮ ಮತ್ತು ತಮ್ಮ ಕುಟುಂಬದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಗೊಗೊಯ್ ಆರೋಪಿಸಿದ್ದಾರೆ.

“ನಾವು ತರುಣ್ ಗೊಗೊಯ್ ಅವರ ಆದರ್ಶಗಳಿಂದ ಪ್ರೇರಿತವಾದ ಕಾಂಗ್ರೆಸ್ಅನ್ನು ಪ್ರತಿನಿಧಿಸುತ್ತಿದ್ದೇವೆ. ಅಸ್ಸಾಂನ ಜನತೆ ಶರ್ಮಾ ನೇತೃತ್ವದ ಕಾಂಗ್ರೆಸ್ ಬೇಕೇ ಅಥವಾ ತರುಣ್ ಗೊಗೊಯ್ ಅವರ ಆದರ್ಶಗಳನ್ನು ಹೊಂದಿರುವ ಕಾಂಗ್ರೆಸ್ ಬೇಕೇ ಎಂಬುದನ್ನು ನಿರ್ಧರಿಸಲಿದ್ದಾರೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಇರಾನ್‌-ಕತಾರ್‌ ಅನಿಲ ಘಟಕಗಳಿಗೆ ಹತ್ತಿದ ಕಿಚ್ಚು: ಭಾರತಕ್ಕೂ ತಟ್ಟಲಿದೆಯಾ ಬಿಸಿ?

“ಈ ಚುನಾವಣೆಯು ಒಂದು ಪಕ್ಷವಾಗಿ ಬಿಜೆಪಿಯೊಂದಿಗಿನ ಹೋರಾಟವಲ್ಲ, ಬದಲಾಗಿ ಶರ್ಮಾ ನೇತೃತ್ವದ ‘ಹಳೆಯ ಕಾಂಗ್ರೆಸ್’ ಮತ್ತು ತರುಣ್ ಗೊಗೊಯ್ ಅವರಿಂದ ಪ್ರೇರಿತವಾದ ‘ಹೊಸ ಕಾಂಗ್ರೆಸ್’ ನಡುವಿನ ಸ್ಪರ್ಧೆಯಾಗಿದೆ. ಈ ಬಾರಿ ನಾವು ಹೊಸ ಮುಖಗಳನ್ನು ಕಣಕ್ಕಿಳಿಸುತ್ತಿದ್ದೇವೆ. ವಿರೋಧ ಪಕ್ಷಗಳ ನಡುವೆ ಒಗ್ಗಟ್ಟಿದೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗುವ ಆಶಾವಾದವನ್ನು ಹೆಚ್ಚಿಸಿದೆ” ಎಂದು ಅವರು ಹೇಳಿದ್ದಾರೆ.

ಮೈತ್ರಿಕೂಟದ ಎಲ್ಲ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರ ತ್ಯಾಗ ಮತ್ತು ಶ್ರಮಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಮೈತ್ರಿಕೂಟವು ಬಲಗೊಂಡಿದ್ದು, ರಾಜ್ಯದಲ್ಲಿ ಹೊಸ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಲಾಗಿದೆ ಎಂದಿದ್ದಾರೆ.

ಕಾಂಗ್ರೆಸ್, ರೈಜೋರ್ ದಳ, ಅಸ್ಸಾಂ ಜಾತೀಯ ಪರಿಷದ್ (AJP), ಸಿಪಿಐ(ಎಂ), ಆಲ್ ಪಾರ್ಟಿ ಹಿಲ್ ಲೀಡರ್ಸ್ ಕಾನ್ಫರೆನ್ಸ್ (APHLC) ಮತ್ತು ಸಿಪಿಐ(ಎಂಎಲ್) ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ.

ಕಾಂಗ್ರೆಸ್ ತನ್ನ ಸಂಪೂರ್ಣ 94 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ, ರೈಜೋರ್ ದಳ 13, ಎಜೆಪಿ 10 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಸಿಪಿಐ(ಎಂ) ಮತ್ತು ಎಪಿಹೆಚ್‌ಎಲ್‌ಸಿ ತಲಾ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

126 ಸದಸ್ಯ ಬಲದ ವಿಧಾನಸಭೆಗೆ ಏಪ್ರಿಲ್ 9 ರಂದು ಚುನಾವಣೆ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಮನಾಬಾದ್ | ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ : ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಹುಮನಾಬಾದ್ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹೊರರೋಗಿಗಳು, ಹೆರಿಗೆಗೆ ಬರುವ ಮಹಿಳೆಯರು...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...