2024ರ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ ಬಿಜೆಪಿ

Date:

ಆಡಳಿತಾರೂಢ ಬಿಜೆಪಿ 2024ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಉಪಸ್ಥಿತಿಯೊಂದಿಗೆ ಔಪಚಾರಿಕವಾಗಿ ಚಾಲನೆ ನೀಡಿತು.

“ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿನ, ಪ್ರಸ್ತುತ ಹಾಗೂ ಭವಿಷ್ಯತ್ತಿನ ಪೀಳಿಗೆಯವರಲ್ಲಿ ವ್ಯಾಪಿಸಿರುವ ಕನಸುಗಳ ಭರವಸೆಯನ್ನು ಗ್ಯಾರಂಟಿಯೊಂದಿಗೆ ವಾಸ್ತವಗೊಳಿಸಿದ್ದಾರೆ. ವರ್ಷಗಳ, ದಶಕಗಳ ಕಾಲ, 500 ವರ್ಷದ ಹಿಂದಿನ ಕನಸನ್ನು ಪ್ರಧಾನಿ ಮೋದಿ ಈಡೇರಿಸಿದ್ದಾರೆ” ಎಂದು ಜೆಪಿ ನಡ್ಡಾ ತಿಳಿಸಿದರು.

“ಮೋದಿ ಸರ್ಕಾರದ ಉಪಕ್ರಮಗಳು ಕೋಟ್ಯಂತರ ಕನಸುಗಳನ್ನು ವಾಸ್ತವಕ್ಕೆ ಮರಳಿಸಿದೆ. ಸ್ಟಾರ್ಟ್‌ಅಪ್‌, ವಾಣಿಜ್ಯೋದ್ಯಮ ಸಾಲಗಳ ಮೂಲಕ ಯುವಕರು ಉದ್ಯೋಗಗಳನ್ನು ಗಿಟ್ಟಿಸಿಕೊಂಡಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರಾಟ ಮಾಡಿದ್ದಾರೆ. ಮಹಿಳೆಯರು ಎಲ್ಲ ರಂಗಗಳಲ್ಲಿ ತಮ್ಮ ಪ್ರಸ್ತುತತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಹಣಕಾಸು ಸ್ವಾತಂತ್ರ್ಯ ಹೊಂದಿದ್ದಾರೆ ಹಾಗೂ ದೇಶದ ಪ್ರಗತಿಯಲ್ಲಿ ಸಮಾನ ಪಾಲುದಾರರಾಗಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

“ಬಡವರನ್ನು ಅವರ ಬಡತನದಿಂದ ಮೇಲತ್ತಲಾಗಿದ್ದು, ಅವರು ಘನತೆಯೊಂದಿಗೆ ಬದುಕು ನಡೆಸುತ್ತಿದ್ದಾರೆ. ಸಮೃದ್ಧ ಭಾರತಕ್ಕಾಗಿ ಭರವಸೆಯಿದೆ. ಮೋದಿಯವರ ಸಾಮರ್ಥ್ಯದಲ್ಲಿ ನಂಬಿಕೆಯಿದ್ದು ಜನರ ಕನಸುಗಳನ್ನು ನನಸಾಗಿಸುತ್ತಾರೆ” ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ತಿಳಿಸಿದರು.

ಸರ್ಕಾರದ ಸಾಧನೆಗಳನ್ನು ಸಂಗೀತದ ವಿಡಿಯೋ ಬಿಡುಗಡೆ ಮಾಡುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಮಾಚಲ ಪ್ರದೇಶ | ವಿಧಾನಸಭೆಯಿಂದ 15 ಬಿಜೆಪಿ ಶಾಸಕರ ಅಮಾನತು; ಕಾಂಗ್ರೆಸ್‌ನ ಸಚಿವ ರಾಜೀನಾಮೆ

ಹಿಮಾಚಲ ಪ್ರದೇಶ ಸುಖ್ವಿಂದರ್ ಸಿಂಗ್‌ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಬೀಳಿಸಲು...

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದ ಅಪರಾಧಿ ಸಾವು

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, ಬಳಿಕ ಬಿಡುಗಡೆಗೊಂಡಿದ್ದ...

6 ಕಾಂಗ್ರೆಸ್ ಶಾಸಕರನ್ನು ಕರೆದೊಯ್ದ ಸೇನೆ: ಬಿಜೆಪಿ ವಿರುದ್ಧ ಹಿಮಾಚಲ ಪ್ರದೇಶ ಸಿಎಂ ಆರೋಪ

ಅರೆಸೇನಾ ಪಡೆ ಮತ್ತು ರಾಜ್ಯ ಪೊಲೀಸ್‌ ಬೆಂಗಾವಲೊಂದಿಗೆ ಕಾಂಗ್ರೆಸ್‌ನ ಐದರಿಂದ ಆರು...