ಜಮ್ಮು ಕಾಶ್ಮೀರದ ಗುರೆಜ್‌ನ ಮಾಜಿ ಶಾಸಕ ಮತ್ತು ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಾನ್ ತುಳಸಿಬಾಗ್ ಸರ್ಕಾರಿ ವಸತಿಗೃಹದೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ವಕ್ತಾರ ಅಲ್ತಾಫ್ ಠಾಕೂರ್ ಈ ಘಟನೆಯನ್ನು ದೃಢಪಡಿಸಿದ್ದಾರೆ. ಖಾನ್ ಆತ್ಮಹತ್ಯೆ ಮಾಡಿಕೊಂಡಿರುವ ಹಿಂದಿನ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಬೀದರ್ | ಅನ್ನದಾತರ ಸಾವಿಗೆ ಕೊನೆಯಿಲ್ಲ : 5 ವರ್ಷಗಳಲ್ಲಿ 100 ದಾಟಿದ ರೈತರ ಆತ್ಮಹತ್ಯೆ ಸಂಖ್ಯೆ
ಇನ್ನು ಜಮ್ಮು ಮತ್ತು ಕಾಶ್ಮೀರ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರು ಫಕೀರ್ ಮೊಹಮ್ಮದ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಮೃತರ ಆತ್ಮಕ್ಕೆ ಶಾಶ್ವತ ಶಾಂತಿ ಲಭಿಸಲಿ ಮತ್ತು ಕುಟುಂಬಕ್ಕೆ ಈ ನಷ್ಟವನ್ನು ಭರಿಸುವ ಶಕ್ತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಖಾನ್ ನಿಧನದ ಬಗ್ಗೆ ಜಮ್ಮು ಕಾಶ್ಮೀರ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ. ಗುರೆಜ್‌ನ ಅಭಿವೃದ್ಧಿಗಾಗಿ ಶ್ರಮಿಸಿದ ನಾಯಕ ಎಂದು ಬಣ್ಣಿಸಿದ್ದಾರೆ. ಹಾಗೆಯೇ ಸಂತಾಪ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸುನಿಲ್ ಶರ್ಮಾ ಮತ್ತು ಗುರೆಜ್ ಶಾಸಕ ನಜೀರ್ ಅಹ್ಮದ್ ಖಾನ್ (ಗುರೇಜಿ) ಕೂಡಾ ಖಾನ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಯಿತು.
ಇದನ್ನು ಓದಿದ್ದೀರಾ? ಕಲಬುರಗಿ | ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಿ : ಕೆ.ಬಿ.ವಾಸು
ಫಕೀರ್ ಮೊಹಮ್ಮದ್ ಖಾನ್ 1996ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಆಯ್ಕೆಯಾದರು. 2020ರಲ್ಲಿ ಬಿಜೆಪಿಗೆ ಸೇರಿದ್ದು, ಕಳೆದ ವರ್ಷ ಬಿಜೆಪಿ ಟಿಕೆಟ್‌ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಆದರೆ ಪರಾಭವಗೊಂಡಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
