ಅತ್ಯಾಚಾರ ಸಂತ್ರಸ್ತೆಗೆ ಬಿಜೆಪಿ ನಾಯಕನಿಂದ ಬೆದರಿಕೆ; ವಿಡಿಯೋ ವೈರಲ್

Date:

ಅತ್ಯಾಚಾರ ಸಂತ್ರಸ್ತೆಯೊಬ್ಬರಿಗೆ ಬಿಜೆಪಿ ನಾಯಕನೊಬ್ಬ ಚಾಕು ತೋರಿಸಿ ಬೆದರಿಕೆ ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ರಾಮ್‌ಪುರ್ ಬಘೇಲನ್ ಗ್ರಾಮದಲ್ಲಿ ಘಟನೆ ನಡೆದಿದೆ. ವಿಡಿಯೋದಲ್ಲಿ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಬಿಜೆಪಿ ನಾಯಕ ಅಶೋಕ್ ಸಿಂಗ್‌ ಎಂದು ಹೆಸರಿಸಲಾಗಿದೆ. ಆತ ಸಂತ್ರಸ್ತೆಗೆ ಚಾಕು ತೋರಿಸಿ, ತನ್ನೊಂದಿಗೆ ಮತ್ತೊಮ್ಮೆ ದೈಹಿಕ ಸಂಪರ್ಕ ಹೊಂದುವಂತೆ ಬೆದರಿಕೆವೊಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ವೈರಲ್ ಆಗಿರುವ ವಿಡಿಯೋದಲ್ಲಿ, ಆರೋಪಿ ಬಿಜೆಪಿ ನಾಯಕ, “ನನಗೇನಾಗುತ್ತದೆ? ನನಗೇನೂ ಆಗುವುದಿಲ್ಲ. ನೀನು ಎಲ್ಲಿ ಬೇಕಾದರೂ ದೂರು ನೀಡು. ನನಗೇನೂ ಆಗುವುದಿಲ್ಲ” ಎಂದು ಹೇಳುತ್ತಿರುವುದು ಕಂಡುಬಂದಿದೆ.

ಅತ್ಯಾಚಾರ ಸಂತ್ರಸ್ತೆ ಸತ್ನಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನ್ಸ್ ರಾಜ್ ಸಿಂಸ್‌ ಅವರಿಗೆ ದೂರು ನೀಡಿದ್ದಾರೆ. “ಆರು ತಿಂಗಳ ಹಿಂದೆ ಹನುಮಾನ್ ಗಂಜ್ ನಿವಾಸಿ, ಆರೋಪಿ ಅಶೋಕ್ ಸಿಂಗ್ ನನ್ನ ಮನೆಯನ್ನು ಪ್ರವೇಶಿಸಿದ್ದ. ನನಗೆ ಚಾಕು ತೋರಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ತನ್ನ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾನೆ. ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ, ವಿಡಿಯೋ ಹರಿಬಿಡುವುದಾಗಿ ಮತ್ತು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈಗ, ಮತ್ತೊಮ್ಮೆ ಅತ್ಯಾಚಾರ ಎಸಗಲು, ಬೆದರಿಕೆ ಹಾಕುತ್ತಿದ್ದಾನೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...

ದೇಶ ಹಾದಿ ತಪ್ಪಿದೆ; ಮತ್ತೆ ಸರಿ ದಾರಿಗೆ ಬರುವ ಶಕ್ತಿ ಭಾರತಕ್ಕಿದೆ: ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ

"ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶ ತನ್ನ ಹಾದಿಯನ್ನು ಕಳೆದುಕೊಂಡಿದೆ ಎಂದು ನನಗೆ ಅನಿಸುತ್ತದೆ....