ಸೋಲಿಗೆ ಬೆದರಿದ ಬಿಜೆಪಿಯಿಂದ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ; ಖರ್ಗೆ ಕಿಡಿ

Date:

ವಿಧಾನಸಭಾ ಚುನಾವಣೆಯಲ್ಲಿ ಸೋಲು ಖಚಿತ ಎಂಬುದನ್ನು ಅರಿತಿರುವ ಬಿಜೆಪಿ, ತನ್ನ ಕೊನೆಯ ದಾಳವಾಗಿರುವ ಕೇಂದ್ರೀಯ ಸಂಸ್ಥೆಗಳನ್ನು ಬಳಕೆ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

- Advertisement -

ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜಸ್ಥಾನ ಚುನಾವಣೆಯಲ್ಲಿ ಸೋಲು ಖಚಿತವಾದ ಹಿನ್ನೆಲೆ ಬಿಜೆಪಿ ತನ್ನ ಕೊನೆಯ ದಾಳವನ್ನು ಪ್ರಯೋಗಿಸಿದೆ. ಇಡಿ, ಸಿಬಿಐ, ಐಟಿಯನ್ನು ಬಳಕೆ ಮಾಡುತ್ತಿದೆ. ಛತ್ತೀಸ್‌ಗಢದ ನಂತರ ರಾಜಸ್ಥಾನದ ಕಾಂಗ್ರೆಸ್ ನಾಯಕರ ವಿರುದ್ಧ ಇಡಿ ದಾಳಿ ನಡೆದಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

‘ನರೇಂದ್ರ ಮೋದಿ ಸರ್ಕಾರದ ಸರ್ವಾಧಿಕಾರ ಧೋರಣೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ತನಿಖಾ ಸಂಸ್ಥೆಗಳ ದುರುಪಯೋಗದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಬಿಜೆಪಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಟಿವಿ ನೇರ ಪ್ರಸಾರದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಮಾಡಿದ ಬಿಆರ್‌ಎಸ್ ಶಾಸಕ!

ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಮತ್ತು ಮಹುವಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಶಾಲಾ ಶಿಕ್ಷಣ ಖಾತೆಯ ಮಾಜಿ ಸಚಿವ ದೋತಸ್ರಾ ಅವರ ಸಿಕರ್ ಮತ್ತು ಜೈಪುರದ ನಿವಾಸ, ದೌಸಾದ ಮಹುವಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಓಂಪ್ರಕಾಶ್ ಹುಡ್ಲಾ ಮತ್ತು ಇತರ ಕೆಲವರ ನಿವಾಸಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ನಡೆಸುತ್ತಿದ್ದಾರೆ.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ. ಚುನಾವಣೆಗೂ ಮುನ್ನ ಇಡಿ ದಾಳಿ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಅಶೋಕ್ ಗೆಹ್ಲೋಟ್ ಪುತ್ರನಿಗೆ ಇಡಿ ಸಮನ್ಸ್

ವಿದೇಶಿ ವಿನಿಮಯ ಕಾನೂನು(ಫೆಮಾ) ಉಲ್ಲಂಘಿಸಿದ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಶುಕ್ರವಾರ ಜೈಪುರ ಅಥವಾ ನವದೆಹಲಿಯಲ್ಲಿರುವ ಫೆಡರಲ್ ಏಜೆನ್ಸಿಯ ಕಚೇರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ವೈಭವ್ ಗೆಹ್ಲೋಟ್ ಅವರಿಗೆ ಸೂಚಿಸಲಾಗಿದೆ.

ರಾಜಸ್ಥಾನ ಮೂಲದ ಹಾಸ್ಪಿಟಾಲಿಟಿ ಗ್ರೂಪ್ ಟ್ರಿಟಾನ್ ಹೋಟೆಲ್ಸ್ ಆಂಡ್ ರೆಸಾರ್ಟ್ಸ್ ಪ್ರೈವೇಟ್ ಲಿಮಿಟೆಡ್, ವರ್ಧಾ ಎಂಟರ್‌ಪ್ರೈಸಸ್‌ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕ ಹಾಗೂ ಪ್ರವರ್ತಕರಾದ ಶಿವಶಂಕರ್ ಶರ್ಮಾ, ರತ್ತನ್ ಕಾಂತ್ ಶರ್ಮಾ ಮತ್ತು ಇತರರ ವಿರುದ್ಧದ ಇತ್ತೀಚಿನ ಇಡಿ ದಾಳಿಗೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...