ಮತದಾರರನ್ನು ಅಳಿಸಿಹಾಕಲು BJPಯಿಂದ ‘ವ್ಯಾನಿಶ್ ಆಯೋಗ’ದ ದುರುಪಯೋಗ; ಮುಂದುವರೆದ ಮಮತಾ ಧರಣಿ

Date:

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ಧ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಧರಣಿ ಮೂರನೇ ದಿನವು ಮುಂದುವರೆದಿದೆ. ಚುನಾವಣಾ ಆಯೋಗವನ್ನು ‘ವ್ಯಾನಿಶ್‌ ಆಯೋಗ’ವೆಂದು ಕರೆದಿರುವ ಮಮತಾ, “ಕಾನೂನುಬದ್ಧ ಮತದಾರರನ್ನು ಅಳಿಸಿಹಾಕಲು ಬಿಜೆಪಿ ‘ವ್ಯಾನಿಶ್ ಆಯೋಗ’ವನ್ನು ದುರುಪಯೋಗ ಮಾಡಿಕೊಂಡಿದೆ” ಎಂದು ಆರೋಪಿಸಿದ್ದಾರೆ.

- Advertisement -

“ದೇಶವು ತನ್ನ ಪ್ರಜಾಪ್ರಭುತ್ವದ ಅಡಿಪಾಯಗಳ ಮೇಲೆ ಅಭೂತಪೂರ್ವ ಮತ್ತು ನೇರ ದಾಳಿಯನ್ನು ಎದುರಿಸುತ್ತಿದೆ. ಬಿಜೆಪಿ ತನ್ನ ‘ಒಂದು ರಾಷ್ಟ್ರ, ಒಬ್ಬ ನಾಯಕ, ಒಂದು ಪಕ್ಷ’ ಎಂಬ ಉನ್ಮಾದದಲ್ಲಿ ಜನ ವಿರೋಧಿ ಮಹತ್ವಾಕಾಂಕ್ಷೆಗಳ ಈಡೇರಿಕೆಗಾಗಿ ಪ್ರಜಾಪ್ರಭುತ್ವ ಸಂಸ್ಥೆ ಮತ್ತು ಸಾಂವಿಧಾನಿಕ ಹುದ್ದೆಗಳನ್ನು ವ್ಯವಸ್ಥಿತವಾಗಿ ದುರುಪಯೋಗ ಮಾಡಿಕೊಂಡಿದೆ” ಎಂದು ಮಮತಾ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಬಾಬಾಸಾಹೇಬ್ ಅಂಬೇಡ್ಕರ್ ರೂಪಿಸಿದ ಸಂವಿಧಾನವನ್ನು ತನ್ನ ಪ್ರಣಾಳಿಕೆ ಮತ್ತು ಮನುವಾದದೊಂದಿಗೆ ಬದಲಾಯಿಸುವುದು ಬಿಜೆಪಿಯ ಅಂತಿಮ ಗುರಿಯಾಗಿದೆ. ವರ್ಷಗಳಿಂದ, ಬಿಜೆಪಿ ಕೇಂದ್ರೀಯ ಸಂಸ್ಥೆಗಳು, ರಾಷ್ಟ್ರೀಯ ಆಯೋಗಗಳು, ಗುಲಾಮ ಗೋದಿ ಮಾಧ್ಯಮ ಹಾಗೂ ನ್ಯಾಯಾಂಗದ ಒಂದು ವಿಭಾಗವನ್ನು ಬಂಗಾಳದ ವಿರುದ್ಧ ಅಸ್ತ್ರವಾಗಿ ಬಳಸಲಾಗುತ್ತಿದೆ. ಅವರು ಮತದಾರರ ಪಟ್ಟಿಯಿಂದ ಕಾನೂನುಬದ್ಧ ಮತದಾರರನ್ನು ಅಳಿಸಲು ಮುಂದಾಗಿದ್ದಾರೆ” ಎಂದು ದೂರಿದ್ದಾರೆ.

ಈ ಲೇಖನ ಓದಿದ್ದೀರಾ?: ಇರಾನ್ ನಾಯಕನ ಆಯ್ಕೆಯಲ್ಲಿ ಅಮೆರಿಕದ ಹಸ್ತಕ್ಷೇಪ; ಮುಂದುವರಿದ ಟ್ರಂಪ್ ದುಷ್ಟಬುದ್ಧಿ

ಬಿಜೆಪಿ ನಾಯಕತ್ವವನ್ನು ‘ದೆಹಲಿ ಜಮೀನ್ದಾರರು’ ಎಂದು ಕರೆದಿರುವ ಮಮತಾ, “ಬಂಗಾಳವನ್ನು ತಮ್ಮ ಅಧೀನಕ್ಕೆ ಪಡೆಯಬೇಕೆಂಬ ಅವರ ಗುರಿಯು ಎಂದಿಗೂ ಯಶಸ್ವಿಯಾಗುವುದಿಲ್ಲ. ಈ ರಾಜ್ಯದ ಜನರನ್ನು ಅವಮಾನಿಸಲು, ಬೆದರಿಸಲು ಹಾಗೂ ಕಿರುಕುಳ ನೀಡಲು ಪ್ರಯತ್ನಿಸುವ ಬಿಜೆಪಿ ಪ್ರತಿಯೊಂದು ಬಂಗಾಳ ವಿರೋಧಿ ಕಾರ್ಯಸೂಚಿಗೆ ನಮ್ಮ ಧರಣಿಯು ಉತ್ತರವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...