ಕೇಂದ್ರ ಕಾನೂನು ಸಚಿವ ‘ಭ್ರಷ್ಟಾಚಾರಿ ನಂ. 1’ ಎಂದ ಬಿಜೆಪಿ ಶಾಸಕ

Date:

ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘ್ವಲ್‌ ಅವರು ‘ಭ್ರಷ್ಟಾಚಾರಿ ನಂಬರ್‌ ಒನ್’ ಎಂದು ಬಿಜೆಪಿ ಶಾಸಕ ಹಾಗೂ ರಾಜಸ್ಥಾನ ವಿಧಾನಸಭೆಯ ಮಾಜಿ ಸ್ಪೀಕರ್‌ ಕೈಲಾಶ್‌ ಚಂದ್ರ ಆರೋಪಿಸಿದ್ದಾರೆ.

ಭಿಲ್ವಾರಾದ ಶಾಹಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ 89 ವರ್ಷದ ಕೈಲಾಶ್‌ ಚಂದ್ರ, ಭ್ರಷ್ಟಾಚಾರಿಯಾಗಿರುವ ಅರ್ಜುನ್‌ ರಾಮ್‌ ಮೇಘ್ವಲ್‌ ಅವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಕೋರಿ ತಾವು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

“ಅರ್ಜುನ್‌ ಮೇಘ್ವಲ್‌ ಭ್ರಷ್ಟಾಚಾರಿ ನಂಬರ್‌ 1. ಅವರ ವಿರುದ್ಧ ಹಲವು ಭ್ರಷ್ಟಾಚಾರ ಪ್ರಕರಣಗಳಿವೆ. ನೀವು ಕಾನೂನು ಸಚಿವರಾಗಿ ನೇಮಿಸಿದವರು ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ ಎಂದು ಪ್ರಧಾನಿಗೆ ಬರೆಯುವ ಪತ್ರದಲ್ಲಿ ವಿವರಿಸುತ್ತೇನೆ. ಅವರು ಅಧಿಕಾರಿಯಾಗಿದ್ದಾಗ ಬಡವರನ್ನು ಮತ್ತು ಪರಿಶಿಷ್ಟ ಜಾತಿಯವರನ್ನೂ ಬಿಟ್ಟಿಲ್ಲ. ಎಲ್ಲರಿಂದಲೂ ಹಣ ಪಡೆದಿದ್ದರು,” ಎಂದು ಕೈಲಾಶ್‌ ಚಂದ್ರ ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅರ್ಜುನ್‌ ಮೇಘ್ವಲ್‌ ಹಿಂದೆ ಕಲೆಕ್ಟರ್‌ ಆಗಿದ್ದಾಗ ವ್ಯಾಪಕ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದರು. ಭ್ರಷ್ಟಾಚಾರ ಪ್ರಕರಣಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಅವರು ರಾಜಕೀಯ ಸೇರಿದರು ಎಂದು ಕೈಲಾಶ್‌ ಚಂದ್ರ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲು ಧೈರ್ಯವಿದೆಯೆ? ಕೇಂದ್ರಕ್ಕೆ ಸಂಜಯ್‌ ರಾವುತ್‌ ಸವಾಲ್‌

“ಇಲ್ಲಿನ ರಾಜಕೀಯದಲ್ಲಿ ಸಚಿವರು ಹಸ್ತಕ್ಷೇಪ ನಡೆಸುತ್ತಿದ್ದಾರೆ. ಅವರ ವಿರುದ್ಧದ ಎಲ್ಲ ಭ್ರಷ್ಟಾಚಾರ ಪ್ರಕರಣಗಳು ಇತ್ಯರ್ಥವಾಗುವ ತನಕ ಸಚಿವ ಸ್ಥಾನದಿಂದ ತೆಗೆದುಹಾಕಬೇಕು” ಎಂದು ಕೈಲಾಶ್‌ ಚಂದ್ರ ಹೇಳಿದ್ದಾರೆ.

ಅರ್ಜುನ್‌ ಮೇಘ್ವಲ್ ಅವರು ಕೇಂದ್ರ ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಂಸ್ಕೃತಿ ಸಚಿವರಾಗಿದ್ದಾರೆ.

ರಾಜಸ್ಥಾನ ವಿಧಾನಸಭಾ ಚುನಾವಣೆಗಾಗಿ ಬಿಜೆಪಿಯ 25 ಸದಸ್ಯರ ಸಂಕಲ್ಪ ಪತ್ರ ಅಥವಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಇತ್ತೀಚೆಗಷ್ಟೇ ಅರ್ಜುನ್‌ ಮೇಘ್ವಲ್‌ ಅವರನ್ನು ನೇಮಿಸಲಾಗಿತ್ತು. ರಾಜಸ್ಥಾನ ಆಡಳಿತಾತ್ಮಕ ಸೇವೆಗಳ ಅಧಿಕಾರಿಯಾಗಿದ್ದ ಅವರು ನಂತರ ಐಎಎಸ್‌ ಅಧಿಕಾರಿಯಾಗಿ ಭಡ್ತಿಗೊಂಡು ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

2009 ಲೋಕಸಭಾ ಚುನಾವಣೆಗೆ ಮುನ್ನ ವಿಆರ್‌ಎಸ್‌ ಪಡೆದು ಅವರು ಬಿಕಾನೇರ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆದು ಗೆಲುವು ಸಾಧಿಸಿದ್ದರು.

ಅರ್ಜುನ್ ಮೇಘ್ವಲ್ ಅವರನ್ನು ‘ಭ್ರಷ್ಟ’ನಾಯಕ ಎಂದು ಸಾರ್ವಜನಿಕವಾಗಿ ಕರೆದಿದ್ದಕ್ಕಾಗಿ ಕೈಲಾಶ್ ಮೇಘವಾಲ್ ಅವರಿಗೆ ರಾಜಸ್ಥಾನ ರಾಜ್ಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿಗೊಳಿಸಿದೆ.

ರಾಜ್ಯಾಧ್ಯಕ್ಷ ಸಿ ಪಿ ಜೋಶಿ ಅವರ ಸೂಚನೆ ಮೇರೆಗೆ ರಾಜ್ಯ ಶಿಸ್ತು ಸಮಿತಿಯು ಕೈಲಾಶ್ ಮೇಘವಾಲ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಹತ್ತು ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್| ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರ ಬೃಹತ್ ಪ್ರತಿಭಟನೆ; ಬಿಜೆಪಿಗೆ ಮುಗಿಯದ ಸಂಕಷ್ಟ!

ಕ್ಷತ್ರಿಯ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಕೇಂದ್ರ ಸಚಿವರೂ ಆಗಿರುವ...

ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗಕ್ಕೆ ಡಿ.ಕೆ. ಸುರೇಶ್ ಆಗ್ರಹ

"ಕುಮಾರಸ್ವಾಮಿ ಅವರ ಹೇಳಿಕೆ ಮಹಿಳಾ ಕುಲಕ್ಕೆ ಮಾಡಿದ ಅಪಮಾನವಾಗಿದ್ದು ಕುಮಾರಸ್ವಾಮಿ ವಿರುದ್ಧ...

ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌...

ಮಧ್ಯಪ್ರದೇಶ| ಎರಡು ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ ಮೃತ್ಯು

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ತೆರೆದ...