ಹೊಸ ವರ್ಷ ಆಚರಣೆ ವೇಳೆ ಗುಂಡು ಹಾರಿಸಿ ಮಹಿಳೆ ಹತ್ಯೆ; ಬಿಜೆಪಿ ಶಾಸಕ ದೋಷಿ

Date:

2019ರ ಹೊಸ ವರ್ಷದ ಮುನ್ನಾದಿನದಂದು (2018ರ ಡಿಸೆಂಬರ್ 31) ದೆಹಲಿಯ ಫಾರ್ಮ್‌ಹೌಸ್‌ನಲ್ಲಿ ನಡೆದ ಪಾರ್ಟಿಯೊಂದರಲ್ಲಿ ನಿಯಮ ಬಾಹಿರವಾಗಿ ಗುಂಡು ಹಾರಿಸಿ ಮಹಿಳೆಯೊಬ್ಬರ ಸಾವಿಗೆ ಕಾರಣರಾಗಿದ್ದ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಸಾಹೇಬ್‌ಗಂಜ್ ಕ್ಷೇತ್ರದ ಬಿಜೆಪಿ ಶಾಸಕ ರಾಜುಕುಮಾರ್ ಸಿಂಗ್ ಅವರನ್ನು ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ವಿಶಾಲ್ ಗಾಗ್ನೆ ಅವರು ಈ ಮಹತ್ವದ ತೀರ್ಪನ್ನು ನೀಡಿದ್ದು, ಶಾಸಕರನ್ನು ತಕ್ಷಣವೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದಾರೆ.

- Advertisement -

2018ರ ಡಿಸೆಂಬರ್ 31ರ ಮಧ್ಯರಾತ್ರಿ ದೆಹಲಿಯ ಫತೇಪುರ ಬೇರಿಯಲ್ಲಿರುವ ಶಾಸಕ ರಾಜುಕುಮಾರ್ ಸಿಂಗ್ ಅವರ ‘ರೋಸ್ ಫಾರ್ಮ್’ ಫಾರ್ಮ್‌ಹೌಸ್‌ನಲ್ಲಿ ಹೊಸ ವರ್ಷದ ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜನರು ನೃತ್ಯ ಮಾಡುತ್ತಾ ಸಂಭ್ರಮಿಸುತ್ತಿದ್ದಾಗ, ಶಾಸಕ ರಾಜುಕುಮಾರ್ ಸಿಂಗ್ ಅವರು ಮದ್ಯದ ಅಮಲಿನಲ್ಲಿ ತಮ್ಮ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ವೇಳೆ ಹಾರಿದ ಗುಂಡು ಅಲ್ಲಿಯೇ ಇದ್ದ ಡಾ. ಅರ್ಚನಾ ಗುಪ್ತಾ (45) ಎಂಬ ಮಹಿಳೆಯ ತಲೆಗೆ ತಗುಲಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅರ್ಚನಾ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ 2019ರ ಜನವರಿ 3ರಂದು ಅವರು ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಬಳಿಕ, ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು, ಶಾಸಕರಿಗೆ ಯಾರನ್ನೂ ಕೊಲ್ಲುವ ಉದ್ದೇಶ ಇರಲಿಲ್ಲ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು, ಪ್ರಕರಣವನ್ನು ಕೊಲೆ (IPC 302) ಪ್ರಕರಣ ಎಂದು ಪರಿಗಣಿಸದೆ, ‘ಹತ್ಯೆಯಲ್ಲದ ಅಪರಾಧ ಮುಕ್ತ ನರಹತ್ಯೆ’ (IPC ಸೆಕ್ಷನ್ 304-2) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 30ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ.

“ಜನರು ನೃತ್ಯ ಮಾಡುತ್ತಿದ್ದ ಮತ್ತು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದ ಕಿಕ್ಕಿರಿದ ಪಾರ್ಟಿಯಲ್ಲಿ ಪಿಸ್ತೂಲಿನಂತಹ ಮಾರಕಾಸ್ತ್ರ ಬಳಸಿ ಗುಂಡು ಹಾರಿಸುವುದು ಅತ್ಯಂತ ಅಪಾಯಕಾರಿ ಕೃತ್ಯ. ಇದರಿಂದ ಯಾರಿಗಾದರೂ ಪ್ರಾಣಾಪಾಯ ಸಂಭವಿಸಬಹುದು ಎಂಬ ಕನಿಷ್ಠ ಜ್ಞಾನ ಶಾಸಕರಿಗೆ ಇರಬೇಕಿತ್ತು” ಎಂದು ನ್ಯಾಯಾಲಯ ಖಾರವಾಗಿ ಹೇಳಿದೆ.

ಸಾಕ್ಷ್ಯ ನಾಶಪಡಿಸಿದ ಆರೋಪ ಎದುರಿಸುತ್ತಿದ್ದ ಶಾಸಕನ ಪತ್ನಿ ರೇಣು ಸಿಂಗ್ ಹಾಗೂ ಇತರ ಇಬ್ಬರನ್ನು ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಖುಲಾಸೆಗೊಳಿಸಿದೆ. ಪ್ರಕರಣದ ಮತ್ತೊಬ್ಬ ಆರೋಪಿಯಾಗಿದ್ದ ಶಾಸಕನ ಚಾಲಕ ಹರಿ ಸಿಂಗ್ ವಿಚಾರಣೆಯ ಅವಧಿಯಲ್ಲೇ ಮೃತಪಟ್ಟಿದ್ದರಿಂದ ಅವರ ಮೇಲಿನ ಪ್ರಕ್ರಿಯೆಗಳನ್ನು ಕೈಬಿಡಲಾಗಿತ್ತು.

ನ್ಯಾಯಾಲಯವು ರಾಜುಕುಮಾರ್ ಸಿಂಗ್ ಅವರನ್ನು ದೋಷಿ ಎಂದು ಘೋಷಿಸಿದೆ‌. ಆತನನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಆದಾಗ್ಯೂ, ಇನ್ನೂ ಶಿಕ್ಷೆ ಪ್ರಮಾಣ ಘೋಷಿಸಿಲ್ಲ. ಜೂನ್ 9ರಂದು ಶಿಕ್ಷೆಯ ಪ್ರಮಾಣದ ಕುರಿತು ವಾದ-ಪ್ರತಿವಾದಗಳನ್ನು ಆಲಿಸಲಿದೆ. ಗರಿಷ್ಠ ಶಿಕ್ಷೆ ವಿಧಿಸುವ ಸಾಧ್ಯತೆಗಳಿವೆ ಎಂದು ಕಾನೂನು ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...