ಎನ್‌ಸಿ ಶಾಸಕರಿಗೆ ಬಿಜೆಪಿ ₹20-30 ಕೋಟಿ ಆಮಿಷ ಒಡ್ಡಿದೆ: ಒಮರ್ ಅಬ್ದುಲ್ಲಾ ಆರೋಪ

Date:

ನ್ಯಾಷನಲ್ ಕಾನ್ಫರೆನ್ಸ್ (NC) ನೇತೃತ್ವದ ಸರ್ಕಾರವನ್ನು ಉರುಳಿಸಲು ಮತ್ತು ಪಕ್ಷವನ್ನು ಇಭ್ಭಾಗ ಮಾಡಲು ಬಿಜೆಪಿ ಭಾರಿ ಸಂಚು ರೂಪಿಸುತ್ತಿದೆ. ತಮ್ಮ ಪಕ್ಷದ ಶಾಸಕರನ್ನು ಸೆಳೆಯಲು ಬಿಜೆಪಿ ₹20 ರಿಂದ ₹30 ಕೋಟಿ ಹಣ, ಸಚಿವ ಸ್ಥಾನ ನೀಡುವ ಆಮಿಷ ಒಡ್ಡುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.

- Advertisement -

ಶ್ರೀನಗರದ ಹಜರತ್‌ಬಾಲ್‌ನಲ್ಲಿ ತಮ್ಮ ಅಜ್ಜಿ ಬೇಗಂ ಅಕ್ಬರ್ ಜೆಹಾನ್ ಅಬ್ದುಲ್ಲಾ ಅವರ 26ನೇ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು ಈ ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿ: ಲೋಕಸಭೆ ಚುನಾವಣೆಗಾಗಿ ಮಾತ್ರ ರಚಿಸಿದ್ದರೆ ಇಂಡಿಯಾ ಒಕ್ಕೂಟ ವಿಸರ್ಜಿಸಿ: ಒಮರ್‌ ಅಬ್ದುಲ್ಲಾ

“ನ್ಯಾಷನಲ್ ಕಾನ್ಫರೆನ್ಸ್ ಪಕ್ಷವನ್ನು ಒಡೆಯಲು ಮತ್ತೊಮ್ಮೆ ವ್ಯವಸ್ಥಿತ ಯತ್ನಗಳು ನಡೆಯುತ್ತಿವೆ. ಹಣ ಮತ್ತು ಸಚಿವ ಸ್ಥಾನದ ಆಸೆ ತೋರಿಸಿ ನಮ್ಮ ಶಾಸಕರು ಮಣಿಯದಿದ್ದಾಗ, ಈಗ ಮುಚ್ಚಿದ ಕೋಣೆಯೊಳಗೆ ನಮ್ಮ ಶಾಸಕರಿಗೆ ಹೊಸ ಆಮಿಷಗಳನ್ನು ಒಡ್ಡಲಾಗುತ್ತಿದೆ. ‘ನೀವು ನಮ್ಮ ಜೊತೆ ಬನ್ನಿ, ನೀವು ನಮಗೆ ಬೆಂಬಲ ನೀಡಿದರೆ ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯದ ಸ್ಥಾನಮಾನ ನೀಡುತ್ತೇವೆ’ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ” ಎಂದು ಒಮರ್ ಅಬ್ದುಲ್ಲಾ ದೂರಿದ್ದಾರೆ.

ತಮ್ಮ ಜಮ್ಮು ಭಾಗದ ಶಾಸಕರೊಬ್ಬರನ್ನು ನೇರವಾಗಿ ಸಂಪರ್ಕಿಸಲಾಗಿತ್ತು ಎಂದು ವಿವರಿಸಿದ ಸಿಎಂ, “ಸುಪ್ರೀಂ ಕೋರ್ಟ್ ವಕೀಲರೂ ಆಗಿರುವ ಬಿಜೆಪಿಯ ಪ್ರಮುಖ ಪದಾಧಿಕಾರಿಯೊಬ್ಬರು ನಮ್ಮ ಜಮ್ಮುವಿನ ಶಾಸಕರನ್ನು ಭೇಟಿಯಾಗಿ, ಈ ಆಮಿಷ ಒಡ್ಡಿದ್ದಾರೆ. ಈ ವಿಷಯವನ್ನು ನಮ್ಮ ಶಾಸಕರೇ ಖುದ್ದಾಗಿ ಬಂದು ನನಗೆ ತಿಳಿಸಿದ್ದಾರೆ. ಇದಕ್ಕೆ ದೇವರೇ ಸಾಕ್ಷಿ” ಎಂದಿದ್ದಾರೆ.

ಇನ್ನು ಈ ಸಂದರ್ಭದಲ್ಲೇ ಬಿಜೆಪಿಗೆ ಓಮರ್ ಅಬ್ದುಲ್ಲಾ ನೇರ ಸವಾಲು ಹಾಕಿದ್ದಾರೆ. “ಜನರ ಆತ್ಮಸಾಕ್ಷಿ ಮತ್ತು ಶಾಸಕರ ಪ್ರಾಮಾಣಿಕತೆ ತೀರಾ ಅಗ್ಗ ಎಂದು ಬಿಜೆಪಿ ಭಾವಿಸಿದೆ. ಆದರೆ ಈ ವೇದಿಕೆಯಲ್ಲಿ ಕುಳಿತಿರುವ ಯಾವುದೇ ಒಬ್ಬ ಶಾಸಕನೂ ₹20 ಕೋಟಿ ಇರಲಿ, ₹100 ಕೋಟಿ ಕೊಟ್ಟರೂ ತನ್ನ ಪ್ರಾಮಾಣಿಕತೆಯನ್ನು ಮಾರಿಕೊಳ್ಳಲು ಸಿದ್ಧನಿಲ್ಲ. ನಾವೆಲ್ಲರೂ ದೇವರಿಗೆ ಉತ್ತರಿಸಬೇಕಾದವರು ಎಂಬ ಸಂಸ್ಕಾರವನ್ನು ನಮ್ಮ ಹಿರಿಯರು ನಮಗೆ ಕಲಿಸಿದ್ದಾರೆ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ ಓಮರ್, “ನಮ್ಮ ತಾಳ್ಮೆ ಮತ್ತು ಸೌಜನ್ಯವನ್ನು ದೌರ್ಬಲ್ಯ ಎಂದು ಭಾವಿಸಬೇಡಿ. ಅದು ನಮ್ಮ ಶಕ್ತಿ. ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ನೀವು ಎಂದಿಗೂ ಯಶಸ್ವಿಯಾಗುವುದಿಲ್ಲ. ಜನರ ತೀರ್ಪನ್ನು ಗೌರವಿಸುವುದನ್ನು ಕಲಿಯಿರಿ” ಎಂದು ಆಕ್ರೋಶ ಹೊರಹಾಕಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...