ಬಿಹಾರದಲ್ಲಿ ಬಿಜೆಪಿ ಪರ್ವ | ನೂತನ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣ ವಚನ ಸ್ವೀಕಾರ

Date:

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪಾಟ್ನಾದ ರಾಜಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಸೈಯದ್‌ ಅತಾ ಹಸನೈನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಚೌಧರಿ ಅವರ ಜೊತೆಗೆ ಕೆಲ ಸಚಿವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು.

- Advertisement -

ಬಿಜೆಪಿಯ ಸಂಘಟನಾತ್ಮಕ ಶಕ್ತಿಯಾಗಿ ಬೆಳೆದಿರುವ ಸಾಮ್ರಾಟ್ ಚೌಧರಿ ಅವರು ಎನ್‌ಡಿಎ ಸರ್ಕಾರದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಾ ಬಂದಿದ್ದಾರೆ. ಈ ಹಿಂದೆ ಗೃಹ ಇಲಾಖೆಯಂತಹ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸಿದ್ದ ಇವರು, ಅನೇಕ ಅಧಿಕೃತ ಹಾಗೂ ರಾಜಕೀಯ ಕಾರ್ಯಕ್ರಮಗಳಲ್ಲಿ ನಿತೀಶ್ ಕುಮಾರ್ ಅವರ ಜೊತೆಯಾಗಿ ಬಿಜೆಪಿಯನ್ನು ಪ್ರತಿನಿಧಿಸಿದ್ದಾರೆ. ಹಿರಿಯ ನಾಯಕ ಶಕುನಿ ಚೌಧರಿ ಅವರ ಪುತ್ರನಾಗಿ ರಾಜಕೀಯ ಹಿನ್ನೆಲೆಯುಳ್ಳ ಕುಟುಂಬದಿಂದ ಬಂದಿರುವ ಸಾಮ್ರಾಟ್ ಅವರು, ತಮ್ಮ ಸುದೀರ್ಘ ರಾಜಕೀಯ ಪಯಣದಲ್ಲಿ ರಾಷ್ಟ್ರೀಯ ಜನತಾ ದಳ (RJD) ಮತ್ತು ಜನತಾ ದಳ (ಯುನೈಟೆಡ್) ಪಕ್ಷಗಳಲ್ಲೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನೂ ಓದಿ: ದಿಲ್ಲಿ ಮಾತು | ನೊಯಿಡಾ ಕೈಗಾರಿಕಾ ವಲಯದಲ್ಲಿ ಅಶಾಂತಿ: ಬೆವರು ಕಾರ್ಮಿಕನದು, ವಿಕಾಸ ಯಾರದ್ದು?

2017ರಲ್ಲಿ ಬಿಜೆಪಿಗೆ ಸೇರಿದ ನಂತರ ಸಾಮ್ರಾಟ್ ಚೌಧರಿ ಅವರ ರಾಜಕೀಯ ಏಳಿಗೆಗೆ ವೇಗ ಸಿಕ್ಕಿದೆ. ಇವರ ಸಂಘಟನಾ ಚತುರತೆಯನ್ನು ಗುರುತಿಸಿದ ಪಕ್ಷವು 2023ರಲ್ಲಿ ಇವರನ್ನು ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿತು. ನಂತರ 2025ರ ವಿಧಾನಸಭಾ ಚುನಾವಣೆಯಲ್ಲಿ ತಾರಾಪುರ ಕ್ಷೇತ್ರದಿಂದ ಜಯಗಳಿಸಿದ ಇವರು, ಎನ್‌ಡಿಎ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಈಗ ಬಡ್ತಿ ಪಡೆದು ಸಿಎಂ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...