ಬಿಜೆಪಿ-ಆರ್‌ಎಸ್‌ಎಸ್‌ ಜನರನ್ನು ವಿಭಜಿಸುತ್ತಿವೆ, ಕಾಂಗ್ರೆಸ್‌ ‘ಪ್ರೀತಿಯ ಅಂಗಡಿ’ ತೆರೆಯುತ್ತಿದೆ: ಖರ್ಗೆ

Date:

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ದೇಶದಲ್ಲಿ ದ್ವೇಷ ಹರಡಿ, ಜನರನ್ನು ವಿಭಜಿಸುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್ ಪಕ್ಷವು ಶಾಂತಿ ಮತ್ತು ಏಕತೆಗಾಗಿ ‘ಮೊಹಬ್ಬತ್ ಕಿ ದುಕಾನ್’ (ಪ್ರೀತಿಯ ಅಂಗಡಿ) ತೆರೆಯುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

- Advertisement -

ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. “ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಸರ್ಕಾರಗಳು ಜಾರಿಗೆ ತಂದ ಯೋಜನೆಗಳ ಹೆಸರುಗಳನ್ನು ಬದಲಾಯಿಸಿ, ಎಲ್ಲವನ್ನೂ ತಾವೇ ಮಾಡಿದ್ದು ಎಂದು ಕ್ರೆಡಿಟ್ ಪಡೆದುಕೊಳ್ಳುತ್ತಿದ್ದಾರೆ. ಒಂದಲ್ಲ ಒಂದು ದಿನ ಅವರು ನಮ್ಮ ರಾಷ್ಟ್ರಧ್ವಜವನ್ನೇ ಕೆಳಗಿಳಿಸಲು ಯತ್ನಿಸಬಹುದು ಎಂಬ ಭೀತಿಯಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಸ್ವಾತಂತ್ರ್ಯ ದಿನವು ಕೇವಲ ಹೋರಾಟವನ್ನು ಸ್ಮರಿಸುವ ದಿನವಲ್ಲ, ಬದಲಿಗೆ ನಮ್ಮ ಹಿರಿಯರ ಕನಸನ್ನು ನಾವು ಎಷ್ಟು ನನಸು ಮಾಡಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳುವ ದಿನವಾಗಿದೆ” ಎಂದು ಹೇಳಿದರು.

“ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನು ಸಂವಿಧಾನವು ಪ್ರಜೆಗಳಿಗೆ ನೀಡಿದೆ. ತಮ್ಮ ಹಕ್ಕುಗಳಿಗಾಗಿ ರಸ್ತೆಗಿಳಿದು ಹೋರಾಡುವುದು ದೇಶದ್ರೋಹವಲ್ಲ. ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಇಂದಿನ ‘ಜೆನ್ ಝಿ’ ಯುವಜನರು ದೇಶದ್ರೋಹಿಗಳಲ್ಲ” ಎಂದು ಖರ್ಗೆ ಪ್ರತಿಪಾದಿಸಿದರು.

“ಚುನಾವಣಾ ಆಯೋಗ, ನ್ಯಾಯಾಂಗ, ವಿಶ್ವವಿದ್ಯಾಲಯಗಳು, ತನಿಖಾ ಸಂಸ್ಥೆಗಳು ಹಾಗೂ ಮಾಧ್ಯಮಗಳಲ್ಲಿ ಸರ್ಕಾರದ ಹಸ್ತಕ್ಷೇಪ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರ ನಂಬಿಕೆ ಕುಸಿದಿದೆ. ಇಸ್ರೋ ಮತ್ತು ಡಿಆರ್‌ಡಿಒ ನಂತಹ ಪ್ರತಿಷ್ಠಿತ ಸಂಸ್ಥೆಗಳ ಪ್ರಮುಖ ವಿಜ್ಞಾನಿಗಳನ್ನು ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗುತ್ತಿದೆ” ಎಂದು ಖರ್ಗೆ ಆರೋಪಿಸಿದರು.

“ರಾಮಮಂದಿರದ ದೇಣಿಗೆಯಲ್ಲಿ ಅಕ್ರಮ ನಡೆದಿದೆ. ಧಾರ್ಮಿಕ ಕ್ಷೇತ್ರದಲ್ಲಿ ಬಡವರು ಭಕ್ತಿಯಿಂದ ನೀಡಿದ 50 ರೂಪಾಯಿ ದೇಣಿಗೆಯೂ ಈಗ ಸುರಕ್ಷಿತವಾಗಿಲ್ಲ. ಪ್ರಧಾನಿ ಮೋದಿ ಅವರು ಸಾಧು-ಸಂತರನ್ನು ಬದಿಗೊತ್ತಿ ತಾವೇ ಟ್ರಸ್ಟ್ ರಚಿಸಿ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದರು. ದೇಣಿಗೆ ಕಳವು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಕುರಿತು ಪ್ರಶ್ನೆಗಳನ್ನು ಕೇಳಿದರೂ ಪ್ರಧಾನಿಯವರು ಉತ್ತರ ನೀಡಲಿಲ್ಲ. ಪ್ರಜಾಪ್ರಭುತ್ವದಲ್ಲಿ ಇದು ಸರಿಯೇ” ಎಂದು ಖರ್ಗೆ ಪ್ರಶ್ನಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆಯರಿಲ್ಲದ ಸಂಪುಟ; ಮಾತು ತಪ್ಪಿತೇ ಕಾಂಗ್ರೆಸ್?

ರಾಜ್ಯದ ಮಹಿಳೆಯರು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟಿದ್ದರೂ, ಅಧಿಕಾರದ ವಿಚಾರ ಬಂದಾಗ ಅವರು...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...