12 ರಾಜ್ಯಗಳಲ್ಲಿ ‘ಬಿಜೆಪಿ’ಯದ್ದೇ ನೇರ ಆಡಳಿತ; 3ಕ್ಕೆ ಕುಸಿದ ಕಾಂಗ್ರೆಸ್‌

Date:

ಈಗಷ್ಟೇ ಚುನಾವಣೆ ನಡೆದ ಐದು ರಾಜ್ಯಗಳ ಪೈಕಿ, ನಾಲ್ಕು ರಾಜ್ಯಗಳ ಮತ ಎಣಿಕೆ ಭಾನುವಾರ ನಡೆದಿದೆ. ಅವುಗಳಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಆ ಮೂಲಕ ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ 12 ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸಲಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಕಳೆದುಕೊಂಡ ಕಾಂಗ್ರೆಸ್‌, ಮೂರು ರಾಜ್ಯಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದೆ.

- Advertisement -

ಕೇಂದ್ರ ಸರ್ಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿಯು ಉತ್ತರಾಖಂಡ, ಹರಿಯಾಣ, ಉತ್ತರ ಪ್ರದೇಶ, ಗುಜರಾತ್, ಗೋವಾ, ಅಸ್ಸಾಂ, ತ್ರಿಪುರಾ, ಮಣಿಪುರ, ಅರುಣಾಚಲ ಪ್ರದೇಶದಲ್ಲಿ ಅಧಿಕಾರದಲ್ಲಿದೆ. ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ. ಜೊತೆಗೆ, ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಕಾಂಗ್ರೆಸ್‌ನಿಂದ ಕಸಿದುಕೊಂಡಿದೆ. ಆ ಮೂಲಕ 12 ರಾಜ್ಯಗಳಲ್ಲಿ ತನ್ನದೇ ನೇರ ಆಡಳಿತ ನಡೆಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದಲ್ಲದೆ, ಮಹಾರಾಷ್ಟ್ರ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ – ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರದ ಭಾಗವಾಗಿದೆ.

ನಾಲ್ಕು ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್‌, ರಾಜಸ್ಥಾನ ಮತ್ತು ಛತ್ತಿಸ್‌ಗಢವನ್ನು ಕಳೆದುಕೊಂಡಿದೆ. ತೆಲಂಗಾಣದಲ್ಲಿ ಗೆಲ್ಲುವ ಮೂಲಕ ಮೂರು ರಾಜ್ಯಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಕರ್ನಾಟಕ ಮತ್ತು ಹಿಮಾಚಲ ಪ್ರದೇಶದಲ್ಲಿ ಸುಭದ್ರ ಸರ್ಕಾರ ನಡೆಸುತ್ತಿದೆ.

ಜೊತೆಗೆ, ಬಿಹಾರ, ಜಾರ್ಖಂಡ್ ಹಾಗೂ ತಮಿಳುನಾಡಿನಲ್ಲಿ ಸರ್ಕಾರ ನಡೆಸುತ್ತಿರುವ ಮೈತ್ರಿ ಕೂಟದ ಭಾಗವಾಗಿ ಕಾಂಗ್ರೆಸ್‌ ಉಳಿದುಕೊಂಡಿದೆ.

ಇನ್ನು, ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತವಿದೆ. ಕೇರಳದಲ್ಲಿ ಸಿಪಿಐ(ಎಂ), ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ, ಒಡಿಶಾದಲ್ಲಿ ಬಿಜೆಡಿ, ಪುದುಚೆರಿಯಲ್ಲಿ ಎಐಎನ್‌ಆರ್‌ಸಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಕಾರದಲ್ಲಿವೆ.

ಮಿಜೋರಾಂ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಅಲ್ಲಿ ಎಂಎನ್‌ಎಫ್‌ ಗೆಲುವು ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ. ಫಲಿತಾಂಶ ಏನಾಗಲಿದೆ ಎಂಬುದು ಡಿ.4ರಂದು ತಿಳಿಯಲಿದೆ.

ಇದೆಲ್ಲದರ ನಡುವೆ, ಸಿಕ್ಕಿಂ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ವಿಧಾನಸಭೆ ಅವಧಿ ಮುಗಿಯುತ್ತಾ ಬಂದಿವೆ. ಈ ರಾಜ್ಯಗಳಲ್ಲಿ 2014ರಲ್ಲಿ ಚುನಾವಣೆ ನಡೆಯಲಿದೆ. ಇನ್ನು, ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ. 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ಇದೂವರೆಗೂ ಚುನಾವಣೆ ನಡೆದಿಲ್ಲ. ಅಲ್ಲಿ,  ವಿಧಾನಸಭೆ ಚುನಾವಣೆ ನಡೆಯುವುದು ಬಾಕಿ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...