ಎನ್‌ಡಿಎ ಮೈತ್ರಿ ಕೂಟಕ್ಕೆ ಮರಳಿದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ

Date:

ಈಗಾಗಲೇ ಕಳೆದ ಹಲವು ತಿಂಗಳುಗಳಿಂದ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಢಾ ಜೊತೆ ಹಲವು ಸುತ್ತಿನ ಮಾತುಕತೆ ನಂತರ ಎನ್‌ಡಿಎ ಮೈತ್ರಿ ಕೂಟಕ್ಕೆ ಟಿಡಿಪಿ ಸೇರ್ಪಡೆ ಕುರಿತಾಗಿ ಉಭಯ ಪಕ್ಷಗಳು ತೀರ್ಮಾನಿಸಿದ್ದು, ಕೆಲವೇ ಹೊತ್ತಿನಲ್ಲಿ ಅಧಿಕೃತ ತೀರ್ಮಾನ ಹೊರ ಬೀಳಲಿದೆ.

2018ರವರೆಗೂ ಟಿಡಿಪಿ ಪಕ್ಷವು ಬಿಜೆಪಿ ಸಾರಥ್ಯದ ಎನ್‌ಡಿಎ ಮೈತ್ರಿ ಕೂಟದಲ್ಲಿ ಇತ್ತು. ಆದರೆ, ತಮ್ಮ ರಾಜ್ಯಕ್ಕೆ ಸಿಗಬೇಕಾದ ಹಣಕಾಸಿನ ನೆರವಿನ ವಿಚಾರವಾಗಿ ಕೇಂದ್ರ ಸರ್ಕಾರದ ಜೊತೆ ಭಿನ್ನಮತ ಎದುರಾದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು, ಎನ್‌ಡಿಎ ಮೈತ್ರಿ ಕಡಿತ ಮಾಡಿಕೊಳ್ಳುವ ತೀರ್ಮಾನ ಕೈಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2019ರ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಎನ್‌ಡಿಎಯಿಂದ ಹೊರ ಬಂದಿದ್ದ ಟಿಡಿಪಿ ಇದೀಗ 2024ರ ಲೋಕಸಭಾ ಚುನಾವಣೆ ಸಮೀಪದಲ್ಲಿ ಇರುವಾಗ ಮತ್ತೆ ಎನ್‌ಡಿಎ ಸೇರಲು ಸಜ್ಜಾಗಿದೆ. ಸೀಟು ಹಂಚಿಕೆ ಮಾತುಕತೆ ಗಹನವಾಗಿ ನಡೆಯುತ್ತಿದೆ ಅನ್ನೋ ಮಾಹಿತಿಗಳೂ ಇವೆ.

ಆಂಧ್ರ ಪ್ರದೇಶದ ರಾಜ್ಯದ ಒಟ್ಟು 25 ಲೋಕಸಭಾ ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಸ್ಪರ್ಧೆ ಮಾಡಬೇಕು ಅನ್ನೋದೇ ಅತಿ ಮುಖ್ಯವಾಗಿದ್ದು, ಅಂತಿಮವಾಗಿ ಯಾರಿಗೆ ಒಟ್ಟು ಎಷ್ಟು ಕ್ಷೇತ್ರ ಹಂಚಿಕೆಯಾಯ್ತು ಅನ್ನೋ ಸಂಖ್ಯೆ ಕೂಡಾ ಮಹತ್ವ ಪಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೂರು ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಡಿಎಂಕೆ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಅಸಾಂವಿಧಾನಿಕ...

ಮೈಕ್ರೋಸಾಫ್ಟ್ ತಂತ್ರಾಂಶದಲ್ಲಿ ತಾಂತ್ರಿಕ ತೊಂದರೆ: ವಿಶ್ವಾದ್ಯಂತ ವಿಮಾನ, ಬ್ಯಾಂಕ್, ಷೇರು ಮುಂತಾದ ಸೇವೆಗಳಲ್ಲಿ ವ್ಯತ್ಯಯ

ಮೈಕ್ರೋಸಾಫ್ಟ್ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಯುಂಟಾದ ಕಾರಣ ಕಂಪ್ಯೂಟರ್‌ನಲ್ಲಿ ಮೈಕ್ರೋಸಾಫ್ಟ್‌ ಅವಲಂಬಿಸಿದ್ದ ಹಲವು...

ನಾಗರಿಕ ಸೇವಾ ಪರೀಕ್ಷೆಯಲ್ಲಿ ವಂಚನೆಗೆ ಯತ್ನ ಆರೋಪ; ಪೂಜಾ ಖೇಡ್ಕರ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಯುಪಿಎಸ್‌ಸಿ

ನಾಗರಿಕ ಸೇವಾ ಪರೀಕ್ಷೆಯಲ್ಲಿ ವಂಚನೆಗೆ ಯತ್ನಿಸಿದ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್...

ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರಿ ಪಾಲಿನ ಕಡಿತವನ್ನು ಸಹಿಸುವುದಿಲ್ಲ: ಕಾಂಗ್ರೆಸ್

12 ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರದ ಪಾಲನ್ನು ಶೇ.51ಕ್ಕಿಂತ ಕಡಿಮೆ ಮಾಡಲು...