ಕೇರಳ ರಾಜ್ಯಪಾಲರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ‘ಬಿಜೆಪಿ’ ಟ್ಯಾಗ್: ರಾಷ್ಟ್ರಪತಿಗೆ ದೂರು ನೀಡಿದ ಎಸ್‌ಎಫ್‌ಐ

Date:

ಕೇರಳದ ನೂತನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ‘ಬಿಜೆಪಿ’ ಹೆಸರನ್ನು ಬಳಸಲಾಗಿದೆ ಎಂದು ಆರೋಪಿಸಿ, ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಐಫ್‌ಐ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಧಿಕೃತ ದೂರು ಸಲ್ಲಿಸಿದೆ.

- Advertisement -

ಎಸ್‌ಎಫ್‌ಐ ತಿರುವನಂತಪುರಂ ಜಿಲ್ಲಾ ಕಾರ್ಯದರ್ಶಿ ನಂದನ್ ಎಂ. ಎ. ಅವರು ಇಮೇಲ್ ಮೂಲಕ ರಾಷ್ಟ್ರಪತಿಗೆ ಈ ದೂರನ್ನು ರವಾನಿಸಿದ್ದಾರೆ. ರಾಜ್ಯಪಾಲ ಓಂ ಪ್ರಕಾಶ್ ಮಾಥುರ್ ಅವರ ಇನ್‌ಸ್ಟಾಗ್ರಾಮ್ ಖಾತೆಯ ಬಳಕೆದಾರ ಹೆಸರು @ommathurbjp ಎಂದಿದ್ದು, ಇದು ರಾಜಕೀಯ ಪಕ್ಷವೊಂದರ ಸಂಕೇತವನ್ನು ಒಳಗೊಂಡಿದೆ ಎಂದು ಎಸ್‌ಎಫ್‌ಐ ದೂರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇದನ್ನೂ ಓದಿ: ಕೇಂದ್ರ-ರಾಜ್ಯ ಸಂಬಂಧ, ರಾಜ್ಯಪಾಲರ ಅಧಿಕಾರ; ಕುರಿಯನ್ ಜೋಸೆಫ್ ಸಮಿತಿಯ ಶ್ವೇತಪತ್ರ ಹೇಳುವುದೇನು?

ರಾಜ್ಯಪಾಲರ ಹುದ್ದೆಯು ಸಂವಿಧಾನಿಕವಾದದ್ದು ಮತ್ತು ರಾಜಕೀಯ ತಟಸ್ಥತೆಯನ್ನು ಕಾಯ್ದುಕೊಳ್ಳಬೇಕಾದ ಸ್ಥಾನವಾಗಿದೆ. ರಾಜ್ಯದ ಉನ್ನತ ಸ್ಥಾನದಲ್ಲಿರುವ ವ್ಯಕ್ತಿಯು ಸಾಮಾಜಿಕ ಜಾಲತಾಣಗಳಲ್ಲಿ ನಿರ್ದಿಷ್ಟ ರಾಜಕೀಯ ಪಕ್ಷದ ಹೆಸರನ್ನು ಇಟ್ಟುಕೊಳ್ಳುವುದು ಸಂವಿಧಾನದ ಮೌಲ್ಯಗಳಿಗೆ ಮತ್ತು ರಾಜಕೀಯ ತಟಸ್ಥತೆಯ ತತ್ವಕ್ಕೆ ವಿರುದ್ಧವಾಗಿದೆ ಎಂದು ದೂರಿನಲ್ಲಿ ಎಸ್‌ಎಫ್‌ಐ ಪ್ರತಿಪಾದಿಸಿದೆ. ಈ ವಿಷಯದಲ್ಲಿ ರಾಷ್ಟ್ರಪತಿಯವರು ತಕ್ಷಣವೇ ಮಧ್ಯಪ್ರವೇಶಿಸಿ ಸಂವಿಧಾನಿಕ ಹುದ್ದೆಯ ಘನತೆಯನ್ನು ಎತ್ತಿಹಿಡಿಯಬೇಕು ಎಂದು ಆಗ್ರಹಿಸಲಾಗಿದೆ.

ರಾಜಸ್ಥಾನ ಮೂಲದ ಹಿರಿಯ ಬಿಜೆಪಿ ನಾಯಕರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರು ಇತ್ತೀಚೆಗಷ್ಟೇ ಕೇರಳದ 29ನೇ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಹಿಂದೆ ಸಿಕ್ಕಿಂ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದ ಅವರು, ಆರ್‌ಎಸ್‌ಎಸ್ ಮತ್ತು ಬಿಜೆಪಿಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ಹಿನ್ನೆಲೆ ಹೊಂದಿದ್ದಾರೆ. ಪ್ರಸ್ತುತ ಎಸ್‌ಎಫ್‌ಐ ನೀಡಿದ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಭವನದಿಂದ (ರಾಜ್ ಭವನ್) ಯಾವುದೇ ಅಧಿಕೃತ ಸ್ಪಷ್ಟನೆ ಅಥವಾ ಪ್ರತಿಕ್ರಿಯೆ ಲಭ್ಯವಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನಗಣತಿಯಲ್ಲಿ ನಿಖರ ದತ್ತಾಂಶ ಸಂಗ್ರಹಿಸಿ : ಅಪರ ಜಿಲ್ಲಾಧಿಕಾರಿ ಸುರೇಖಾ

2027ರ ಜನಗಣತಿಯಲ್ಲಿ ಯಾವುದೇ ಮನೆ ಅಥವಾ ವ್ಯಕ್ತಿ ಹೊರಗುಳಿಯದಂತೆ ಅಧಿಕಾರಿಗಳು ಮತ್ತು...

ಪ್ರತಿ ರೈತನಿಗೆ ಬರ ಪರಿಹಾರವಾಗಿ ಗರಿಷ್ಠ 5000 ರೂ. ನೀಡಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

“ದಸರಾ ಮುಗಿದು ದೀಪಾವಳಿ ಬಂದಿದೆ. ರೈತರು ಬಿಕ್ಕಟ್ಟಿನಲ್ಲಿದ್ದಾರೆ. ಅವರ ಬದುಕಿಗೆ ಬೆಳಕು...

ಟ್ರಂಪ್‌ ಪಕ್ಷದ ಹೀನಾಯ ಸೋಲಿನ ಹಿಂದಿವೆ ಈ 5 ಕಾರಣಗಳು

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟರು ಜಯ ಗಳಿಸಿದ್ದಾರೆ. ಅಮೆರಿಕದ ಸಂಸತ್ತು ಎನಿಸಿರುವ...

ಸಂಸತ್ತಿಗೆ ಬನ್ನಿ, ವಿಶೇಷ ಅಧಿವೇಶನಕ್ಕೆ ಸಿದ್ಧ: ರಾಹುಲ್ ಬಹಿರಂಗ ಸವಾಲು ಸ್ವೀಕರಿಸಿದ ಅಮಿತ್ ಶಾ

ಕೇಂದ್ರ ಸರ್ಕಾರದ ವಿರುದ್ಧವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...