ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಜಯಭೇರಿ: ದೇವೇಂದ್ರ ಫಡ್ನಾವಿಸ್‌

Date:

  • ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ದೇವೇಂದ್ರ ಫಡ್ನಾವಿಸ್‌ ಮಾತು
  • ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಕಾಂಗ್ರೆಸ್‌ ಜಯ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣದ ರಾಜ್ಯ ಕರ್ನಾಟಕದ ಎಲ್ಲ ಸ್ಥಾನಗಳಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ ಫಡ್ನಾವಿಸ್ ಸೋಮವಾರ (ಮೇ 15) ಕಾರ್ಯಕರ್ತರಿಗೆ ಭರವಸೆಯ ಮಾತುಗಳನ್ನು ಹೇಳಿದ್ದಾರೆ.

ದೇವೇಂದ್ರ ಫಡ್ನಾವಿಸ್‌ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇತ್ತೀಚಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಜಯ ಸಾಧಿಸಿರುವುದು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಣಿಸುವ ಮೊದಲ ಸೂಚನೆ ಎಂದು ಬಿಂಬಿಸುತ್ತಿರುವ ಪ್ರತಿಪಕ್ಷಗಳನ್ನು ಟೀಕಿಸಿದರು.

“ಕರ್ನಾಟಕ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಆದರೆ ನಮ್ಮ ಮತಗಳ ಪ್ರಮಾಣ ಕಡಿಮೆಯಾಗಲಿಲ್ಲ. ಜೆಡಿಎಸ್ ಮತಗಳು ಕಡಿಮೆಯಾಗಿದ್ದರಿಂದ ಕಾಂಗ್ರೆಸ್‌ಗೆ ಲಾಭವಾಗಿದೆ. ಆದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ” ಎಂದು ಫಡ್ನಾವಿಸ್‌ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೇವೇಂದ್ರ ಫಡ್ನಾವಿಸ್, “ಕಾಂಗ್ರೆಸ್ ಗೆದ್ದಿರುವುದಕ್ಕೆ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ಮತ್ತು ಶಿವಸೇನಾ (ಯುಬಿಟಿ) ಏಕೆ ಸಂಭ್ರಮಪಡುತ್ತಿವೆ ಎಂಬುದು ಅರ್ಥವಾಗುತ್ತಿಲ್ಲ. ಬಿಜೆಪಿ- ಶಿವಸೇನೆ ಮರು ಆಯ್ಕೆಯಾಗುವುದರಿಂದ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಮಹಾ ವಿಕಾಸ್ ಅಘಾಡಿ ಕನಸು ಎಂದಿಗೂ ನನಸಾಗುವುದಿಲ್ಲ” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ಜಪ್ತಿ ಮಾಡಿದ ₹25 ಸಾವಿರ ಕೋಟಿ ಮೌಲ್ಯದ ಮಾದಕ ದ್ರವ್ಯ ಪಾಕ್‌ನಿಂದ ಬಂದಿದ್ದು: ಎನ್‌ಸಿಬಿ

ಇತ್ತೀಚೆಗೆ ಮುಕ್ತಾಯಗೊಂಡ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳನ್ನು ಪಡೆಯುವ ಮೂಲಕ ಆಡಳಿತಾರೂಢ ಬಿಜೆಪಿಯನ್ನು ಮಣಿಸಿತು. ಈಗ ಕರ್ನಾಟಕದಲ್ಲಿ ಸರ್ಕಾರ ರಚನೆ ಬಗ್ಗೆ ಕಾಂಗ್ರೆಸ್‌ ಕಸರತ್ತು ನಡೆಸಿದೆ.

ಬಳಿಕ ನಾನಾ ರಾಜಕೀಯ ಪಕ್ಷಗಳು ಕಾಂಗ್ರೆಸ್ ಪಕ್ಷವನ್ನು ಶ್ಲಾಘಿಸುತ್ತಿವೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ವಿಜಯವನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಗೆಲುವಿನ ದಿಕ್ಸೂಚಿ ಎಂದು ಅನೇಕ ಪ್ರತಿಪಕ್ಷಗಳ ನಾಯಕರು ಹೇಳುತ್ತಿದ್ದಾರೆ.

ಕರ್ನಾಟಕದಲ್ಲಿ ಜಯ ಗಳಿಸಿರುವ ಕಾಂಗ್ರೆಸ್‌ ಸರ್ಕಾರ ರಚಿಸುವತ್ತ ಸಾಗಿದೆ. ಮುಖ್ಯಮಂತ್ರಿ ಆಯ್ಕೆಯ ಚಟುವಟಿಕೆಗಳು ಭರದಿಂದ ಸಾಗಿವೆ. ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ. ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ರಚನೆಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಪ್ರಚಾರದ ಸಾಲು ಬದಲಿಸಲು ಹೇಳಿದ ಚುನಾವಣಾ ಆಯೋಗ; ಎಎಪಿ ಆಕ್ರೋಶ

ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಎಫ್‌ಐಆರ್

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್...