ಕೇರಳದಲ್ಲಿ ಮತ್ತೆ ಖಾತೆ ತೆರೆದ ಬಿಜೆಪಿ: ಮೂರು ಕ್ಷೇತ್ರಗಳಲ್ಲಿ ಗೆಲುವು

Date:

ಕೇರಳ ವಿಧಾನಸಭೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದು, ಒಟ್ಟು ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದೇ ಮೊದಲ ಬಾರಿಗೆ ಕೇರಳದಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಜಯ ಕಂಡಿದೆ.

- Advertisement -

ಇದಕ್ಕೂ ಮೊದಲು 2016ರಲ್ಲಿ ಓ. ರಾಜಗೋಪಾಲ್ ಅವರು ನೇಮಮ್ ಕ್ಷೇತ್ರದಿಂದ ಕೇರಳದ ಮೊದಲ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. 2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಸ್ಥಾನವನ್ನು ಗೆದ್ದಿರಲಿಲ್ಲ. ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಕೇರಳದಲ್ಲಿ ಕನಿಷ್ಠ 10 ಸ್ಥಾನ ಗೆಲ್ಲುವ ನಿರೀಕ್ಷೆಯಲ್ಲಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ತಿರುವನಂತಪುರದ ಚತ್ತನ್ನೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯ ಬಿ.ಬಿ. ಗೋಪಕುಮಾರ್ ಸಿಪಿಐನ ಆರ್. ರಾಜೇಂದ್ರನ್ ವಿರುದ್ಧ 3,686 ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಕಾಂಗ್ರೆಸ್‌ನ ಸೂರಜ್ ರವಿ ಮೂರನೇ ಸ್ಥಾನ ಗಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೋಮು ದ್ವೇಷ ಭಾಷಣ; ಕೇರಳ ಬಿಜೆಪಿ ನಾಯಕ ಪಿಸಿ ಜಾರ್ಜ್ ವಿರುದ್ಧ ಪ್ರಕರಣ ದಾಖಲು

Advertisements

ಇನ್ನು ನೇಮಮ್‌ನಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಕೇರಳ ಘಟಕದ ಮುಖ್ಯಸ್ಥ ರಾಜೀವ್ ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ. ಸಿಪಿಐ(ಎಂ) ಹಿರಿಯ ಮತ್ತು ಸಚಿವ ವಿ. ಶಿವನ್‌ಕುಟ್ಟಿ ಪರಾಭವಗೊಂಡಿದ್ದಾರೆ. ಕಾಂಗ್ರೆಸ್‌ನ ಕೆ.ಎಸ್. ಸಬರಿನಾಥನ್ ಮೂರನೇ ಸ್ಥಾನ ಪಡೆದಿದ್ದಾರೆ.

ಕಜಕೂಟಂ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ಗೆದ್ದಿದ್ದಾರೆ. ಹಿರಿಯ ಸಿಪಿಐ(ಎಂ) ನಾಯಕ ಕಡಕಂಪಳ್ಳಿ ಸುರೇಂದ್ರನ್ ಮತ್ತು ಮುರಳೀಧನರ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಕಾಂಗ್ರೆಸ್‌ನ ಟಿ. ಶರತ್‌ಚಂದ್ರ ಪ್ರಸಾದ್ ಮೂರನೇ ಸ್ಥಾನ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...