ಪಶ್ಚಿಮ ಬಂಗಾಳ | ಫಾಲ್ಟಾದಲ್ಲಿ 1.09 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಬಿಜೆಪಿ ಗೆಲುವು

Date:

ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರದ ಮರುಮತದಾನದ ಮತ ಎಣಿಕೆ ಪ್ರಕ್ರಿಯೆ ಭಾನುವಾರ ನಡೆದಿದ್ದು ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ದೇಬಾಂಗ್ಶು ಪಾಂಡಾ ಒಟ್ಟು 149,666 ಮತಗಳನ್ನು ಗಳಿಸಿದ್ದು, ಸಿಪಿಐ(ಎಂ) ಸಂಭು ನಾಥ್ ಕುರ್ಮಿ ​​ವಿರುದ್ಧ 109,021 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಸಂಭು 40,645 ಮತಗಳನ್ನು ಪಡೆದಿದ್ದಾರೆ.

- Advertisement -

ಕಾಂಗ್ರೆಸ್ ಅಭ್ಯರ್ಥಿ ಅಬ್ದುರ್ ರಝಾಕ್ ಮೊಲ್ಲಾ 10,000ಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದಾರೆ. ಆದರೆ ಮತದಾನಕ್ಕೆ ಕೇವಲ ಎರಡು ದಿನಗಳ ಮೊದಲು ಮರುಮತದಾನ ಸ್ಪರ್ಧೆಯಿಂದ ಹಿಂದೆ ಸರಿದ ಟಿಎಂಸಿಯ ಜಹಾಂಗೀರ್ ಖಾನ್ ಕೇವಲ 7,783 ಮತಗಳನ್ನು ಪಡೆದು ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಮುಸ್ಲಿಮರೇ ಅಧಿಕವಾಗಿರುವ ಬೂತ್‌ನ 97% ಮತಗಳು ಬಿಜೆಪಿ ಪಾಲು!

ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಬಿಜೆಪಿಯ ಆರೋಪದ ಹಿನ್ನೆಲೆ ಫಾಲ್ಟಾದಲ್ಲಿ ಮರುಚುನಾವಣೆ ನಡೆದಿತ್ತು. ಇದೀಗ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ ಗೆದ್ದಿದೆ. ಈ ಕ್ಷೇತ್ರವು ಟಿಎಂಸಿಯ ಭದ್ರಕೋಟೆಯಾಗಿತ್ತು.

ಇನ್ನು ಮರು ಮತದಾನಕ್ಕೆ ಕೆಲವು ದಿನಗಳ ಮೊದಲು ಟಿಎಂಸಿಯ ಜಹಾಂಗೀರ್ ಖಾನ್ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಮರು ಮತದಾನಕ್ಕೆ ಎರಡು ದಿನಗಳ ಮೊದಲು ಫಾಲ್ಟಾ ಜನರ ಹಿತಾಸಕ್ತಿಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು. ಟಿಎಂಸಿ ಇದು ಖಾನ್ ಅವರ ವೈಯಕ್ತಿಕ ನಿರ್ಧಾರವಾಗಿದ್ದು, ಪಕ್ಷದಲ್ಲ ಎಂದು ಸ್ಪಷ್ಟಪಡಿಸಿತ್ತು.

ಮರು ಮತದಾನದ ಸಮಯದಲ್ಲಿ ಕ್ಷೇತ್ರದಲ್ಲಿ ಟಿಎಂಸಿ ಪ್ರಚಾರವು ಸಕ್ರಿಯವಾಗಿ ಕಂಡುಬಂದಿಲ್ಲ. ಪಕ್ಷದ ಕಚೇರಿಗಳು ಹೆಚ್ಚಾಗಿ ನಿಷ್ಕ್ರಿಯವಾಗಿದ್ದವು ಮತ್ತು ಖಾನ್ ಕೂಡಾ ಕಂಡು ಬಂದಿರಲಿಲ್ಲ. ಮತದಾನದ ದಿನದಂದು, ಅವರ ಮನೆಯೂ ಬಂದ್ ಆಗಿತ್ತು. ಸ್ಥಳೀಯ ಪಕ್ಷದ ಕಾರ್ಯಕರ್ತರು ಕೂಡಾ ಕಡಿಮೆ ಇದ್ದರು. ಇದನ್ನೇ ಲಾಭಕ್ಕೆ ಬಳಸಿಕೊಂಡ ಬಿಜೆಪಿ ಪ್ರಚಾರ ಹೆಚ್ಚಿಸಿತ್ತು.

ಬಿಜೆಪಿ ಫಾಲ್ಟಾವನ್ನು ಗೆದ್ದ ಕಾರಣ ಬಿಜೆಪಿ ಒಟ್ಟಾಗಿ ಗೆದ್ದ ಕ್ಷೇತ್ರಗಳ ಸಂಖ್ಯೆ 207ರಿಂದ 208ಕ್ಕೆ ಏರುತ್ತದೆ. ಆದರೆ ಸುವೇಂದು ಅಧಿಕಾರಿ ಭಬಾನಿಪುರವನ್ನು ಉಳಿಸಿಕೊಂಡ ಕಾರಣ ಅವರು ಸ್ಪರ್ಧಿಸಿದ ನಂದಿಗ್ರಾಮದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ನಡೆಯಲಿದೆ. ಆದ್ದರಿಂದ ಸದ್ಯ ಸದಸ್ಯ ಬಲ 207 ಆಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆಗೆ ನಿವೇಶನ, ಮನೆ, ಜಮೀನು ಮಂಜೂರಾತಿಗೆ ಒತ್ತಾಯ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಹಿರಿಯ ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆ...

ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳುವ ನೆಪದಲ್ಲಿ ಮಹಿಳೆಯ...

ಬೀದರ್‌ | ಟನ್ ಕಬ್ಬಿಗೆ ₹4,000 ಬೆಲೆ ಘೋಷಣೆಗೆ ಪಟ್ಟು: ರೈತರ ಧರಣಿ 11ನೇ ದಿನಕ್ಕೆ

ಬೀದರ್ ಜಿಲ್ಲೆಯ ರೈತರ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ...

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡಬೇಡಿ: ಅರ್ಜುನ್ ಮಿಂಟಿ

ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ)...