ಜಮ್ಮು ಕಾಶ್ಮೀರ ಚುನಾವಣೆ: ಅಭ್ಯರ್ಥಿಗಳನ್ನು ಘೋಷಿಸಿ ಹಿಂತೆಗೆದುಕೊಂಡ ಬಿಜೆಪಿ

Date:

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮೊದಲ ಹಂತದಲ್ಲಿ 44 ಅಭ್ಯರ್ಥಿಗಳನ್ನು ಘೋಷಿಸಿದ ಕೆಲವೇ ಸಮಯದಲ್ಲಿ ವಾಪಸ್‌ ತೆಗೆದುಕೊಂಡಿದೆ. ಬಿಜೆಪಿ ಮೂಲಗಳ ಪ್ರಕಾರ ಹೊಸ ಪಟ್ಟಿಯನ್ನು ಕೆಲವು ತಿದ್ದುಪಡಿಗಳೊಂದಿಗೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

- Advertisement -

ಮೊದಲ ಹಂತದಲ್ಲಿ ಮೂರು ಹಂತಗಳ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ರದ್ದು ಮಾಡುವ ಮುನ್ನ ಸೆ.18 ರಂದು ನಡೆಯುವ ಮೊದಲ ಹಂತದಲ್ಲಿ 15 ಅಭ್ಯರ್ಥಿಗಳು, ಸೆ.25 ರಂದು ನಡೆಯುವ ಎರಡನೇ ಹಂತದಲ್ಲಿ 10 ಅಭ್ಯರ್ಥಿಗಳು ಹಾಗೂ ಅ.1 ರಂದು ನಡೆಯುವ ಮೂರನೇ ಹಂತದಲ್ಲಿ 19 ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರದ್ದಾದ ಪಟ್ಟಿಯಲ್ಲಿ 14 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿತ್ತು. ಇದರಲ್ಲಿ ಮುಸ್ಲಿಂ ಬಾಹುಳ್ಯದ 8 ಕ್ಷೇತ್ರಗಳು ಸೇರಿದ್ದವು. ಜೊತೆಯಲ್ಲಿ ಇಬ್ಬರು ಕಾಶ್ಮೀರಿ ಪಂಡಿತರಿಗೂ ಘೋಷಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

44 ಅಭ್ಯರ್ಥಿಗಳಲ್ಲಿ ಕೇವಲ ಒಬ್ಬರು ಮಹಿಳೆಯರಿಗೆ ಮಾತ್ರ ಟಿಕೆಟ್ ನೀಡಲಾಗಿತ್ತು. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಲ್ಲಿ ನಾಲ್ವರು ದಲಿತರಿಗೆ ಟಿಕೆಟ್ ಅಂತಿಮಗೊಳಿಸಲಾಗಿತ್ತು. ಹಿಂತೆಗೆದುಕೊಂಡ ಪಟ್ಟಿಯಲ್ಲಿ ಜಮ್ಮು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಹಾಗೂ ಮಾಜಿ ಡಿಸಿಎಂಗಳಾದ ನಿರ್ಮಲ್ ಸಿಂಗ್ ಹಾಗೂ ಕವೀಂದ್ರ ಗುಪ್ತ ಅವರಿಗೆ ಟಿಕೆಟ್ ನೀಡಿರಲಿಲ್ಲ.

ಸೆ. 18 ರಿಂದ ಅ.1ರವರೆಗೆ ನಡೆಯುವ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್‌ 4 ರಂದು ಫಲಿತಾಂಶ ಘೋಷಿಸಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...