‘ಇಂಡಿಯಾ’ ಒಕ್ಕೂಟಕ್ಕೆ 315 ಸೀಟು, ಬಿಜೆಪಿ 200 ದಾಟದು: ಮಮತಾ ಬ್ಯಾನರ್ಜಿ

Date:

ಲೋಕಸಭೆ ಚುನಾವಣೆಯ ನಂತರ ‘ಇಂಡಿಯಾ’ ಒಕ್ಕೂಟ ಕನಿಷ್ಠ 315 ಕ್ಷೇತ್ರಗಳನ್ನು ಗೆಲ್ಲಲಿದ್ದು, ಬಿಜೆಪಿ 200 ಕ್ಷೇತ್ರಗಳನ್ನು ದಾಟದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

- Advertisement -

ಕೋಲ್ಕತ್ತಾದಿಂದ 78 ಕಿ.ಮೀ ದೂರವಿರುವ ಉತ್ತರ 24 ಪರಗಣದ ಪಟ್ಟಣದ ರ್ಯಾಲಿಯಲ್ಲಿ ಮಾತನಾಡಿದರು. ಇಂಡಿಯಾ ಒಕ್ಕೂಟ 315 ಸೀಟುಗಳನ್ನು ಗೆದ್ದರೆ, ಬಿಜೆಪಿ ಹೆಚ್ಚಿಗೆ ಎಂದರೆ 195 ಸ್ಥಾನ ಗಳಿಸಬಹುದು. ಈ ಬಾರಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದು ನನಗೆ ಖಚಿತವಿದೆ. ಮೋದಿ ದೆಹಲಿಯಲ್ಲಿ ಇರುವುದಿಲ್ಲ.ನನಗೆ ಬಂದ ಅಂಕಿಅಂಶಗಳ ಮಾಹಿತಿಯ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಮೋದಿ ಈ ಬಾರಿ ಅಧಿಕಾರಕ್ಕೆ ಬರುವುದಿಲ್ಲ.ನಾಲ್ಕು ಹಂತದ ಮತದಾನವಾದ ನಂತರ ಬಿಜೆಪಿ ಪರವಾಗಿ ಮತದಾನ ಚೆನ್ನಾಗಿ ನಡೆದಿಲ್ಲ. ಈ ಕಾರಣದಿಂದ ಕೇಂದ್ರದಲ್ಲಿರುವ ಆಡಳಿತ ಪಕ್ಷ ಭಯಗೊಂಡಿದೆ. ಅದಕ್ಕಾಗಿಯೇ ಅವರು 400 ಸೀಟು ಎಂದು ಬೊಗಳುತ್ತಿದ್ದಾರೆ ಎಂದು ಮಮತಾ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

“ಸಂದೇಶ್‌ಖಾಲಿ ಸಮಸ್ಯೆಯ ಬಗ್ಗೆ ಬಿಜೆಪಿ ಹಾಗೂ ಪ್ರಧಾನಿ ಸುಳ್ಳುಗಳನ್ನು ಹರಡುತ್ತಿದ್ದಾರೆ. ಗ್ಯಾರಂಟಿ ನಾಯಕ ಪಶ್ಚಿಮ ಬಂಗಾಳದಲ್ಲಿ ಆರೋಪ ಮಾಡುತ್ತಿದ್ದಾರೆ.ಈಗ ವಿಡಿಯೋಗಳ ಮೂಲಕ ಸತ್ಯ ಬಹಿರಂಗಗೊಂಡಿದೆ. ಅವುಗಳನ್ನು ಮಾಧ್ಯಮಗಳಲ್ಲಿ ತೋರಿಸುತ್ತಿದ್ದಾರೆ. ಅವರು ಸತ್ಯವನ್ನು ಮುಚ್ಚಿಡುತ್ತಿದ್ದಾರೆ. ರಾಜ್ಯದ ಮಹಿಳೆಯರ ಘನತೆಯನ್ನು ಹಾಳು ಮಾಡಲು ಷಡ್ಯಂತ್ರ ರೂಪಿಸುತ್ತಿದ್ದಾರೆ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದರು.

ಭಾನುವಾರ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಟಿಎಂಸಿ ಸಂದೇಶ್‌ಖಾಲಿಯಲ್ಲಿನ ಹಿಂದಿನ ದುಷ್ಕೃತ್ಯಗಳನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ. ಅವರ ಪಕ್ಷದ ನಾಯಕರು ಲೈಂಗಿಕ ದೌರ್ಜನ್ಯ ಹಾಗೂ ಭೂಕಬಳಿಕೆ ಆರೋಪದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...