ಪೊಲೀಸರೆದುರೇ ‘ಕಾಕ್ರೋಚ್’ಗಳನ್ನು ಥಳಿಸಿದ ಬಿಜೆಪಿ ಕಾರ್ಯಕರ್ತರು: ಅಭಿಜೀತ್ ದೀಪ್ಕೆ ಆರೋಪ

Date:

ಕಾನೂನು ಸುವ್ಯವಸ್ಥೆಯನ್ನು ರಕ್ಷಿಸಬೇಕಾದ ಪೊಲೀಸರ ಸಮ್ಮುಖದಲ್ಲೇ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಯುವಕರನ್ನು ಬಿಜೆಪಿ ಕಾರ್ಯಕರ್ತರು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ, ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ವ್ಯವಸ್ಥೆಯ ಅವ್ಯವಸ್ಥೆಯ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸಿಜೆಪಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಹಲವು ದಿನಗಳಿಂದ ಧರಣಿ ಕೂತಿದೆ. ಈ ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತರು ಸಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ಸಾರ್ವಜನಿಕರು ಪ್ರಶ್ನೆ ಎತ್ತುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನೂ ಓದಿ: ಸೋರಿಕೆ ತಡೆಯಲು ‘ಡೈಪರ್’ ಬಳಸಿ: ಸಿಜೆಪಿಯಿಂದ ವಿನೂತನ ಅಭಿಯಾನ!

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ಮೂಲಕ ವಿಡಿಯೋ ಸಾಕ್ಷ್ಯವೊಂದನ್ನು ಹಂಚಿಕೊಂಡಿರುವ ಅಭಿಜೀತ್ ದೀಪ್ಕೆ, ಬಿಜೆಪಿ ಕಾರ್ಯಕರ್ತರು ಯುವಕರನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಬಹಿರಂಗಪಡಿಸಿದ್ದಾರೆ. ಹಲ್ಲೆಗೊಳಗಾದ ಯುವಕರನ್ನು ‘ಕಾಕ್ರೋಚ್’ (ಜಿರಳೆಗಳು) ಎಂದು ಕರೆಯುತ್ತಾ, ಪೊಲೀಸರ ಸಮ್ಮುಖದಲ್ಲೇ ಅವರ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ ಎಂದು ದೀಪ್ಕೆ ದೂರಿದ್ದಾರೆ.

“ಪೊಲೀಸರು ಸ್ಥಳದಲ್ಲೇ ಇದ್ದರೂ ಮೂಕಪ್ರೇಕ್ಷಕರಂತೆ ನಿಂತಿದ್ದರು. ಕಾನೂನನ್ನು ಕೈಗೆತ್ತಿಕೊಂಡ ಬಿಜೆಪಿ ಕಾರ್ಯಕರ್ತರನ್ನು ತಡೆಯುವ ಗೋಜಿಗೆ ಅವರು ಹೋಗಲಿಲ್ಲ. ಈ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ನಾಶವಾಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾಗಿಲ್ಲ,” ಎಂದು ಅಭಿಜೀತ್ ದೀಪ್ಕೆ ತಮ್ಮ ಪೋಸ್ಟ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ಅಭಿಜೀತ್ ದೀಪ್ಕೆ ಅವರ ಈ ಆರೋಪದ ಬೆನ್ನಲ್ಲೇ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಪೊಲೀಸರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗಲಾಟೆ ನಡೆಯುತ್ತಿದ್ದರೂ ಪೊಲೀಸರು ಕೇವಲ ನಿಂತು ನೋಡುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಆಡಳಿತ ಪಕ್ಷದ ಕಾರ್ಯಕರ್ತರಿಗೆ ಕಾನೂನಿನ ಭಯವಿಲ್ಲದಂತಾಗಿದೆ ಮತ್ತು ಪೊಲೀಸರು ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳ ಮುಖಂಡರು ಟೀಕಿಸಿದ್ದಾರೆ.

ಆರೋಪ ಮತ್ತು ವಿಡಿಯೋ ವೈರಲ್ ಆಗುತ್ತಿದ್ದಂತೆ ಉನ್ನತ ಪೊಲೀಸ್ ಅಧಿಕಾರಿಗಳು, ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. “ಸ್ಥಳದಲ್ಲಿದ್ದ ಸಿಬ್ಬಂದಿಯಿಂದ ವರದಿ ಕೇಳಲಾಗಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಮತ್ತು ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದು ಹೇಳಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...