ಬಿಜೆಪಿ ಹಂಚಿದ್ದ ಮಲ್ಲಿಕಾರ್ಜುನ ಖರ್ಗೆಗೆ ಅವಮಾನಿಸುವ ವಿಡಿಯೋ ನಕಲಿ: ಅಸಲಿ ಪ್ರಕಟಿಸಿದ ಕಾಂಗ್ರೆಸ್

Date:

ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಿಟ್ಟು ಅಮಾನಿಸಲಾಗಿದೆ ಎಂದು ಆರೋಪಿಸಿ ವಿಡಿಯೊ ಹಂಚಿಕೊಂಡಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ‘ಸುಳ್ಳು ಹರಡುವ ಬಿಜೆಪಿಯ ತಂತ್ರಗಾರಿಕೆ ಮತ್ತೊಮ್ಮೆ ಬಯಲಾಗಿದೆ’ ಎಂದು ಹೇಳಿದೆ.

- Advertisement -

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಬುಧವಾರ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಾವಿರಾರು ಕಾರ್ಯಕರ್ತರು ಅವರಿಗೆ ಜೊತೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಖರ್ಗೆ ಅವರು ಕೊಠಡಿಯ ಬಾಗಿಲಿನ ಹಿಂದೆ ನಿಂತಿರುವಂತೆ ಕಾಣುವ ವಿಡಿಯೊವೊಂದನ್ನು ಹಂಚಿಕೊಂಡಿರುವ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್, ದಲಿತ ನಾಯಕ ಖರ್ಗೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದರು.

‘ಕುಟುಂಬದವರಲ್ಲದ ಕಾರಣ ಖರ್ಗೆ ಅವರನ್ನು ಹೊರಗಿಡಲಾಗಿದೆ. ಸೋನಿಯಾ ಕುಟುಂಬದ ಅಹಂಕಾರದ ಎದುರು ಸ್ವಾಭಿಮಾನ ಮತ್ತು ಘನತೆ ಬಲಿಯಾಗಿದೆ’ ಎಂದೂ ಹೇಳಿದ್ದರು.

ಇದೇ ವಿಡಿಯೊವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ಬಿಜೆಪಿ ನಾಯಕರೂ ಹಂಚಿಕೊಂಡಿದ್ದರು. ಈ ವಿಡಿಯೊ ಕುರಿತು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿರುವ ಕಾಂಗ್ರೆಸ್, ನಕಲಿ ವಿಡಿಯೊವನ್ನು ಬಿಜೆಪಿ ಹಂಚಿಕೊಂಡಿದೆ ಎಂದು ಹೇಳಿದೆ.

ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಿಯಾಂಕಾ ಗಾಂಧಿ ಅವರ ಪಕ್ಕದಲ್ಲೇ ಕುಳಿತಿರುವುದು ಹಲವು ಚಿತ್ರಗಳಲ್ಲಿ ಕಂಡುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...