Gen-Z ಮತಬೇಟೆಗೆ ಬಿಜೆಪಿ ಹೊಸ ಅಸ್ತ್ರ; ನಿತಿನ್ ನಬಿನ್ ನೇತೃತ್ವದಲ್ಲಿ ವಿಶೇಷ ಸಮಿತಿ

Date:

ದೇಶದ ಯುವ ಸಮುದಾಯ, ವಿಶೇಷವಾಗಿ Gen-Z ಪೀಳಿಗೆಯನ್ನು ಪಕ್ಷದತ್ತ ಸೆಳೆಯಲು ಮತ್ತು ಅವರೊಂದಿಗೆ ನೇರ ಸಂಪರ್ಕ ಬೆಳೆಸಲು ಬಿಜೆಪಿ ‌ಉನ್ನತ ಮಟ್ಟದ ವಿಶೇಷ ಸಮಿತಿಯೊಂದನ್ನು ರಚಿಸಿದೆ. ಯುವಕರ ಆಕಾಂಕ್ಷೆಗಳು, ಕಳವಳಗಳು ಹಾಗೂ ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಅವರೊಂದಿಗೆ ನೇರ ಸಂವಾದ ನಡೆಸುವುದು ಸಮಿತಿಯ ಪ್ರಮುಖ ಉದ್ದೇಶ ಎನ್ನಲಾಗಿದೆ.

- Advertisement -

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸ್ಮೃತಿ ಇರಾನಿ ಹಾಗೂ ವಿನೋದ್ ತಾವ್ಡೆ, ಗುಜರಾತ್ ಸಚಿವ ಹರ್ಷ ಸಂಘವಿ ಸೇರಿದಂತೆ ಪ್ರಮುಖ ನಾಯಕರು ಸಮಿತಿಯಲ್ಲಿದ್ದಾರೆ. ಮುಂದಿನ ಸೆಪ್ಟೆಂಬರ್‌ನಿಂದ ಯುವಕರೊಂದಿಗೆ ಅಧಿಕೃತ ಸಂವಾದ ಆರಂಭಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಮಿತಿಯ ಮೂಲಕ ಯುವಕರು ಬಿಜೆಪಿ ನಾಯಕರೊಂದಿಗೆ ನೇರವಾಗಿ ಸಂವಾದ ನಡೆಸಿ ತಮ್ಮ ಸಮಸ್ಯೆಗಳು, ಅಭಿಪ್ರಾಯಗಳು ಮತ್ತು ನಿರೀಕ್ಷೆಗಳನ್ನು ಹಂಚಿಕೊಳ್ಳಲು ವೇದಿಕೆ ಕಲ್ಪಿಸುವ ಉದ್ದೇಶ ಪಕ್ಷಕ್ಕಿದೆ. ಸಾಮಾನ್ಯವಾಗಿ 1997ರಿಂದ 2012ರ ನಡುವೆ ಜನಿಸಿದವರನ್ನು ‘Gen-Z’ ಪೀಳಿಗೆ ಎಂದು ಗುರುತಿಸಲಾಗುತ್ತದೆ. ಸ್ಮಾರ್ಟ್‌ಫೋನ್, ಹೈಸ್ಪೀಡ್ ಇಂಟರ್ನೆಟ್ ಹಾಗೂ ಸಾಮಾಜಿಕ ಮಾಧ್ಯಮಗಳೊಂದಿಗೆ ನಿಕಟವಾಗಿ ಬೆಳೆದಿರುವ ಈ ಪೀಳಿಗೆ ರಾಜಕೀಯ ಪಕ್ಷಗಳಿಗೆ‌ ಮುಂದಿನ ದಿನಗಳಲ್ಲಿ ಪ್ರಮುಖ ವೋಟ್‌ ಬ್ಯಾಂಕ್.

ಜುಲೈನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್ ಸುತ್ತಮುತ್ತ ವಿದ್ಯಾರ್ಥಿಗಳು ಹಾಗೂ ಯುವಕರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಯುವ ಸಮುದಾಯದೊಂದಿಗೆ ಪಕ್ಷದ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಅಗತ್ಯವನ್ನು ಬಿಜೆಪಿ ಮನಗಂಡಿದೆ ಎನ್ನಲಾಗಿದೆ. ಇದೇ ವೇಳೆ, ಅಭಿಜೀತ್ ದೀಪ್ಕೆ ನೇತೃತ್ವದ ಸಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕೀಯ ವಿಡಂಬನೆ, ಮೀಮ್ಸ್, ರೀಲ್ಸ್ ಹಾಗೂ ಹಾಸ್ಯದ ಮೂಲಕ ಯುವಕರನ್ನು ಸೆಳೆಯುವ ಪ್ರಯತ್ನ ನಡೆಸಿತ್ತು. ಈ ರೀತಿಯ ಡಿಜಿಟಲ್ ಅಭಿಯಾನಗಳು ಯುವ ಸಮುದಾಯದ ಮೇಲೆ ಪ್ರಭಾವ ಬೀರುತ್ತಿರುವುದನ್ನು ಗಮನಿಸಿರುವ ಬಿಜೆಪಿ, ತನ್ನದೇ ರೀತಿಯಲ್ಲಿ ಯುವಕರನ್ನು ತಲುಪುವ ಕಾರ್ಯತಂತ್ರ ರೂಪಿಸುತ್ತಿದೆ.

ಈ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಶನಿವಾರ ಪಕ್ಷದ ನೂತನ ರಾಷ್ಟ್ರೀಯ ಪದಾಧಿಕಾರಿಗಳೊಂದಿಗೆ ಮೊದಲ ಸಭೆ ನಡೆಸಿದರು. ಚುನಾವಣಾ ಸಿದ್ಧತೆ, ಜನಸಾಮಾನ್ಯರೊಂದಿಗೆ ಸಂಪರ್ಕ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಜನರಿಗೆ ತಲುಪಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವುದು, ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸುವುದು ಹಾಗೂ ವಿವಿಧ ವರ್ಗಗಳ ಜನರನ್ನು ತಲುಪುವ ಮಾರ್ಗಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಆಯಾ ರಾಜ್ಯಗಳ ಬಿಜೆಪಿ ಅಧ್ಯಕ್ಷರು, ಉಸ್ತುವಾರಿಗಳು ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮುಂದಿನ ಸಭೆಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಐಫೋನ್ ಇಎಂಐ ಪಾವತಿಸುವ ವಿಚಾರಕ್ಕೆ ಶುರುವಾದ ಕೌಟುಂಬಿಕ ಕಲಹ ಮೂವರ ಸಾವಿನಲ್ಲಿ ಅಂತ್ಯ

ಈ ವಾರದ ಆರಂಭದಲ್ಲಿ ನಿತಿನ್ ನಬಿನ್ ನೇತೃತ್ವದಲ್ಲಿ ಬಿಜೆಪಿಯ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡವನ್ನು ಘೋಷಿಸಲಾಗಿತ್ತು. ಒಟ್ಟು 65 ಪದಾಧಿಕಾರಿಗಳನ್ನು ಒಳಗೊಂಡಿರುವ ತಂಡದಲ್ಲಿ 51 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸಿಂಧಿಯಾ ಹಾಗೂ ಮಾಜಿ ಆರ್‌ಎಸ್‌ಎಸ್ ಕಾರ್ಯಕರ್ತ ರಾಮ್ ಮಾಧವ್ ಸೇರಿದಂತೆ 13 ಮಂದಿಯನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಎಂಟು ಮಂದಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಬಿ.ಎಲ್. ಸಂತೋಷ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ)ಯಾಗಿ ಮುಂದುವರಿಸಲಾಗಿದ್ದು, ವಿನೋದ್ ತಾವ್ಡೆ ಮತ್ತು ಸುನಿಲ್ ಬನ್ಸಾಲ್ ಅವರನ್ನೂ ಪ್ರಧಾನ ಕಾರ್ಯದರ್ಶಿಗಳಾಗಿ ಉಳಿಸಿಕೊಳ್ಳಲಾಗಿದೆ. ಹೊಸ ತಂಡದಲ್ಲಿ 12 ಮಹಿಳೆಯರು ಹಾಗೂ ಅಲ್ಪಸಂಖ್ಯಾತ ಸಮುದಾಯದ ಆರು ನಾಯಕರಿಗೂ ಸ್ಥಾನ ಕಲ್ಪಿಸಲಾಗಿದೆ.

2015ರಲ್ಲಿ ಅಮಿತ್ ಶಾ ಬಿಜೆಪಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಡೆದ ದೊಡ್ಡ ಮಟ್ಟದ ಸಾಂಸ್ಥಿಕ ಪುನರ್ರಚನೆಯ ಬಳಿಕ, ಒಂದು ದಶಕಕ್ಕೂ ಹೆಚ್ಚು ಸಮಯದ ನಂತರ ಪಕ್ಷದಲ್ಲಿ ಮತ್ತೊಮ್ಮೆ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಪಕ್ಷದ ಸಂಘಟನೆಯನ್ನು ಪುನರ್‌ರಚಿಸಿದ ಬೆನ್ನಲ್ಲೇ ಕೇಂದ್ರ ಸಚಿವ ಸಂಪುಟದಲ್ಲೂ ದೊಡ್ಡ ಮಟ್ಟದ ಬದಲಾವಣೆ ನಡೆಯಬಹುದು ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...