ಮೇದಕ್ ಗಲಭೆ : ತೆಲಂಗಾಣದ ವಿವಾದಿತ ಬಿಜೆಪಿ ಶಾಸಕ ರಾಜಾಸಿಂಗ್ ಬಂಧನ

Date:

ತೆಲಂಗಾಣದ ವಿವಾದಿತ ಬಿಜೆಪಿ ಮುಖಂಡ ಹಾಗೂ ಶಾಸಕ ರಾಜಾಸಿಂಗ್‌ರನ್ನು ತೆಲಂಗಾಣ ಪೊಲೀಸರು ಭಾನುವಾರ ವಶಕ್ಕೆ ಪಡೆದು, ಬಂಧಿಸಿರುವುದಾಗಿ ವರದಿಯಾಗಿದೆ.

ತೆಲಂಗಾಣದ ಗೋಶಮಹಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕನಾಗಿರುವ ರಾಜಾ ಸಿಂಗ್, ವಿವಾದಾತ್ಮಕ ಹಾಗೂ ಮುಸ್ಲಿಂ ದ್ವೇಷ ಭಾಷಣ ಮಾಡುವುದಕ್ಕೆ ಕುಖ್ಯಾತಿ ಪಡೆದಿದ್ದಾರೆ. ಅವರನ್ನು ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮೇದಕ್‌ ಜಿಲ್ಲೆಯಲ್ಲಿ ಶನಿವಾರ ಸಂಜೆ ಗಲಭೆ ನಡೆದಿತ್ತು. ಹೀಗಾಗಿ, ಅಲ್ಲಿನ ಹಿಂದೂ ಮುಖಂಡರು ಹಾಗೂ ಘಟನೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡುವುದಕ್ಕಾಗಿ ಆಗಮಿಸುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಶಾಸಕ ರಾಜಾಸಿಂಗ್‌ರನ್ನು ಬಂಧಿಸಲಾಗಿದೆ. ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಮಿಯಾಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಒಂಬತ್ತು ಮಂದಿಯ ಬಂಧನ

ಮೇದಕ್‌ನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.

ಬಿಜೆಪಿ ಮೇದಕ್ ಜಿಲ್ಲಾಧ್ಯಕ್ಷ ಗದ್ದಂ ಶ್ರೀನಿವಾಸ್, ಮೇದಕ್ ಟೌನ್ ಅಧ್ಯಕ್ಷ ಎಂ ನಯಮ್ ಪ್ರಸಾದ್ ಮತ್ತು ಕೋಮು ಘರ್ಷಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಬಂಧಿತರು.

ಮೇದಕ್ ಪಟ್ಟಣದ ಮಿನ್‌ಹಾಜುನ್ ಉಲೂಮ್ ಮದ್ರಸದ ಆಡಳಿತ ಸಮಿತಿಯು ಜಾನುವಾರೊಂದನ್ನು ಖರೀದಿಸಿತ್ತು. ಜೂನ್‌ 15ರಂದು ಸಂಜೆ ಅದನ್ನು ಮದ್ರಸದ ಆವರಣದೊಳಗೆ ತಂದ ಬೆನ್ನಲ್ಲೇ, ಅಲ್ಲಿ ಜಮಾಯಿಸಿದ ಸಂಘ ಪರಿವಾರದ ಸಂಘಟನೆಯೊಂದರ ಸದಸ್ಯರು, ಜಾನುವಾರು ಹತ್ಯೆ ಮಾಡಲಾಗುತ್ತಿದೆ ಎಂದು ಪ್ರತಿಭಟನೆ ನಡೆಸಿದ್ದರು. ಪೊಲೀಸರು ಸ್ಥಳಕ್ಕಾಗಮಿಸಿ ಗುಂಪು ಚುದುರಿಸಿದ್ದರು.

ಒಂದು ಗಂಟೆಯ ಬಳಿಕ ಮತ್ತೆ ಸ್ಥಳಕ್ಕೆ ಆಗಮಿಸಿದ್ದ ಗುಂಪು ಮದ್ರಸಾ ಮೇಲೆ ದಾಳಿ ನಡೆಸಿತ್ತು. ಆಸ್ಪತ್ರೆಯ ಮೇಲೂ ಕೂಡ ಕಲ್ಲು ತೂರಾಟ ನಡೆಸಿತ್ತು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಲಾಠಿಚಾರ್ಜ್ ನಡೆಸಿ ಜನರನ್ನು ಚದುರಿಸಿದ್ದರು.

ಮದ್ರಸಾ ಮೇಲಿನ ದಾಳಿಯ ನಂತರ, ಗುಂಪು ಘರ್ಷಣೆಯಲ್ಲಿ ಗಾಯಗೊಂಡ ಜನರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಹಿಂದೂ ವಾಹಿನಿ ಮತ್ತು ಬಿಜೆಪಿ ಸದಸ್ಯರು ಮೇದಕ್ ಪೊಲೀಸ್ ಠಾಣೆ ಬಳಿಯ ಆಸ್ಪತ್ರೆಯನ್ನು ಸುತ್ತುವರಿದು ದಾಂಧಲೆ ನಡೆಸಿದ್ದಾರೆ ಎಂದು ಕಾರವಾನ್ ಶಾಸಕ ಕೌಸರ್ ಮೊಹಿಯುದ್ದೀನ್ ಹೇಳಿದ್ದಾರೆ.

ಈ ಸುದ್ದಿ ಪಟ್ಟಣದಾದ್ಯಂತ ಹಬ್ಬಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಶಾಂತಿ ಸುವ್ಯವಸ್ಥೆ ಕಾಪಾಡಲು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಅನಾರೋಗ್ಯದಿಂದ ತಮಟೆ ಬಾರಿಸದ ವ್ಯಕ್ತಿ; ದಲಿತ ಕುಟುಂಬಗಳಿಗೆ ಗ್ರಾಮದಿಂದ ಬಹಿಷ್ಕಾರ!

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ...

ವಿವಾದಾತ್ಮಕ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಬಂಧನ

ಪಿಸ್ತೂಲ್‌ ಹಿಡಿದು ರೈತರಿಗೆ ಬೆದರಿಸಿದ ಆರೋಪದ ಮೇಲೆ ವಿವಾದಾತ್ಮಕ ಐಎಎಸ್ ಅಧಿಕಾರಿ...

ಆಂಧ್ರ ಪ್ರದೇಶ | ಜನನಿಬಿಡ ಮುಖ್ಯ ರಸ್ತೆಯಲ್ಲೇ ವೈಎಸ್‌ಆರ್‌ಸಿಪಿ ಯುವ ಮುಖಂಡನ ಬರ್ಬರ ಹತ್ಯೆ

ವೈಎಸ್‌ಆರ್‌ಸಿಪಿಯ ಯುವ ಮುಖಂಡನೊಬ್ಬನನ್ನು ಜನನಿಬಿಡ ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಕೊಲೆ...