ಮುಂಬೈನ ನೂತನ ಮೇಯರ್ ಆಗಿ ರಿತು ತಾವ್ಡೆ ಅವಿರೋಧ ಆಯ್ಕೆ

Date:

ಬೃಹನ್ಮುಂಬೈ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರಿತು ತಾವ್ಡೆ, ಶಿವಸೇನೆ ನಾಯಕ ಸಂಜಯ್ ಘಾಡಿ ಉಪ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಸಂಖ್ಯಾಬಲದ ಕೊರತೆಯ ಹಿನ್ನಲೆಯಲ್ಲಿ ಶಿವಸೇನೆ ಯುಬಿಟಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದ ಬಳಿಕ ಅವಿರೋಧ ಆಯ್ಕೆ ಘೋಷಣೆಯಾಗಿದ್ದು, ಇದರಿಂದಾಗಿ ಏಷ್ಯಾದ ಅತ್ಯಂತ ಶ್ರೀಮಂತ ನಾಗರಿಕ ಸಂಸ್ಥೆಯ ಮೇಲಿನ ಠಾಕ್ರೆ ಕುಟುಂಬದ 25 ವರ್ಷಗಳ ನಿಯಂತ್ರಣ ಕೊನೆಗೊಂಡಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಕ್ಸಲ್ ನಿಗ್ರಹದ ನೆಪದಲ್ಲಿ ಪ್ರಕೃತಿ ಸಂಪತ್ತಿನ ಲೂಟಿಗಿಳಿಯಿತೇ ಸರ್ಕಾರ?

ಘಾಟ್ಕೋಪರ್ ಪಶ್ಚಿಮದಿಂದ ಮೂರು ಅವಧಿಗೆ ಕಾರ್ಪೊರೇಟರ್ ಆಗಿದ್ದ 53 ವರ್ಷದ ತಾವ್ಡೆ, ತಳಮಟ್ಟದ ರಾಜಕೀಯ, ನಾಗರಿಕ ಆಡಳಿತ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಒಂದು ದಶಕಕ್ಕೂ ಹೆಚ್ಚು ಅನುಭವ ಹೊಂದಿದ್ದಾರೆ. ಕಳೆದ ತಿಂಗಳು ಜನವರಿ 15 ರಂದು ನಡೆದ ನಾಗರಿಕ ಚುನಾವಣೆಯಲ್ಲಿ, ತಾವ್ಡೆ 132 ನೇ ವಾರ್ಡ್​​ನಿಂದ ಗೆಲುವು ಸಾಧಿಸಿದರು. ಈ ಹಿಂದೆ ತಾವ್ಡೆ ಕಾರ್ಪೊರೇಟರ್ ಅಷ್ಟೆ ಅಲ್ಲದೇ, ಮುಂಬೈ ಮಹಾನಗರ ಪಾಲಿಕೆಯ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

227 ಸದಸ್ಯ ಬಲದ ಬಿಎಂಸಿಯಲ್ಲಿ ಅಧಿಕಾರ ಹಿಡಿಯಲು 114 ಸ್ಥಾನಗಳ ಅವಶ್ಯಕತೆ ಇತ್ತು. ಬಿಜೆಪಿ 89 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಡಿಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 29 ಸ್ಥಾನಗಳನ್ನು ಗೆದ್ದಿದೆ, ಮಹಾಯುತಿ ಮೈತ್ರಿಕೂಟ 118 ವಾರ್ಡ್​ಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ನಾಲ್ಕು ದಶಕಗಳಿಂದ ಬಿಎಂಸಿಯನ್ನು ಆಳಿದ್ದ ಠಾಕ್ರೆ ಬಣವು 65 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...