ಕೇಂದ್ರ ಸರ್ಕಾರಕ್ಕೆ ಕರಾಳ ದಿನ: ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ

Date:

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಿದ್ದ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ- 2026’ (ಡಿಲಿಮಿಟೇಶನ್ ಬಿಲ್) ಹಾಗೂ ಮಹಿಳಾ ಮೀಸಲಾತಿ ಮಸೂದೆಗಳಿಗೆ ಹಿನ್ನಡೆಯಾದ ಬೆನ್ನಲ್ಲೇ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಇದು ಕೇಂದ್ರ ಸರ್ಕಾರಕ್ಕೆ ಕರಾಳ ದಿನ. ಇದೇ ಮೊದಲ ಬಾರಿಗೆ ಅವರು ದೊಡ್ಡ ಮಟ್ಟದ ಆಘಾತವನ್ನು ಎದುರಿಸಿದ್ದಾರೆ” ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಂಸತ್ತಿನಲ್ಲಿ ಮಸೂದೆಗೆ ಆದ ಹಿನ್ನಡೆಯನ್ನು ‘ಪ್ರಜಾಪ್ರಭುತ್ವದ ಗೆಲುವು’ ಎಂದು ಕರೆದರು. ಕ್ಷೇತ್ರ ವಿಂಗಡಣೆಯ ನೆಪವೊಡ್ಡಿ ಮಹಿಳಾ ಮೀಸಲಾತಿಯಂತಹ ಪ್ರಮುಖ ವಿಷಯವನ್ನು ತಿರುಚಲು ಕೇಂದ್ರ ಸರ್ಕಾರ ಯತ್ನಿಸಿತ್ತು, ಆದರೆ ವಿರೋಧ ಪಕ್ಷಗಳ ಒಗ್ಗಟ್ಟು ಸರ್ಕಾರದ ಈ ನಡೆಯನ್ನು ವಿಫಲಗೊಳಿಸಿದೆ . ಅಲ್ಲದೆ, ಯಾವುದೇ ಷರತ್ತು ಅಥವಾ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯ ವಿಳಂಬವಿಲ್ಲದೆ, 2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಇದನ್ನು ಓದಿದ್ದೀರಾ? ಮಾನವ ಹಕ್ಕುಗಳ ಹೋರಾಟಗಾರ ಜಿ. ಅನಂತ್ ಪದ್ಮನಾಭನ್‌ ಇನ್ನಿಲ್ಲ: ಸಾವನ್ನೂ ದಿಟ್ಟತನದಿಂದ ಎದುರಿಸಿದ್ದ ಚೇತನ

​ಸಂಸತ್ತಿನ ವಿಶೇಷ ಅಧಿವೇಶನದ ಎರಡನೇ ದಿನದಂದು, ಶಾಸನಸಭೆಗಳಲ್ಲಿ ಶೇಕಡಾ 33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ‘ಸಂವಿಧಾನ (131ನೇ ತಿದ್ದುಪಡಿ) ಮಸೂದೆ, 2026’ ಹಾಗೂ ‘ಕ್ಷೇತ್ರ ವಿಂಗಡಣೆ ಮಸೂದೆ, 2026’ರ ಮೇಲೆ ಪ್ರಮುಖ ಚರ್ಚೆ ಮತ್ತು ಮತದಾನ ನಿಗದಿಯಾಗಿತ್ತು. ಆದರೆ, ಒಕ್ಕೂಟ ವ್ಯವಸ್ಥೆಯ ಅಸಮತೋಲನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಬಗ್ಗೆ ವಿರೋಧ ಪಕ್ಷಗಳ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದ ಕಾರಣ ಮಸೂದೆಗೆ ತೀವ್ರ ಪ್ರತಿರೋಧ ವ್ಯಕ್ತವಾಯಿತು.

​ಕಲಾಪ ಮುಂದೂಡಿಕೆಯಾದ ಬಳಿಕ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ತಮ್ಮ ಕಚೇರಿಯಲ್ಲಿ ವಿವಿಧ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಾಗೂ ಕಾಂಗ್ರೆಸ್ ನಾಯಕರಾದ ಕುಮಾರಿ ಸೆಲ್ಜಾ ಮತ್ತು ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ...

ನಮ್ಮ ದೇಶದಲ್ಲಿ ಅಲ್ಲದೆ ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೇ?; ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ...

CEC ರಾಜೀನಾಮೆಗೆ ಆಗ್ರಹ; ಅ.23ರಂದು ಸಂಯುಕ್ತ ಕಿಸಾನ್‌ ಮೋರ್ಚಾದಿಂದ ದೆಹಲಿ ಚಲೋ

SIR ಪ್ರಕ್ರಿಯೆಯನ್ನು ವಿರೋಧಿಸಿ, CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...