ED ಕಚೇರಿಗೆ ಬೆಂಕಿ: ಮೆಹುಲ್‌ ಚೋಕ್ಸಿ, ನೀರವ್ ಮೋದಿ ಸೇರಿ ಹಲವು ಭ್ರಷ್ಟರ ದಾಖಲೆಗಳು ಸುಟ್ಟು ಹೋದವೇ?

Date:

ಕಚೇರಿಗೆ ಬೆಂಕಿ ಬಿದ್ದ ನಂತರ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಪಡೆದಿರುವ ನಿಗದಿತ ಸಾಕ್ಷಿಗಳ ವಿಚಾರಣೆಯ ಮೇಲೆ ಪರಿಣಾಮ ಬೀರುವ, ಮೆಹುಲ್ ಚೋಕ್ಸಿ, ನೀರವ್‌ ಮೋದಿ, ಅನಿಲ್ ದೇಶ್‌ಮುಖ್, ಛಗನ್ ಭುಜ್‌ಬಲ್ ಬಚಾವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮುಂಬೈನಲ್ಲಿ ಭಾನುವಾರ(ಏ.27)ರಂದು ಮಧ್ಯರಾತ್ರಿ ದಕ್ಷಿಣ ಮುಂಬೈನಲ್ಲಿರುವ ಇ.ಡಿ ಕಚೇರಿಗೆ ಬೆಂಕಿ ಹೊತ್ತಿಕೊಂಡಿತ್ತು. 10 ಗಂಟೆಗಳಿಗೂ ಹೆಚ್ಚು ಕಾಲ ಬೆಂಕಿ ಉರಿದಿದ್ದು, ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಆದರೆ ಮೆಹುಲ್ ಚೋಕ್ಸಿ, ನೀರವ್‌ ಮೋದಿ, ಅನಿಲ್ ದೇಶ್‌ಮುಖ್, ಛಗನ್ ಭುಜ್‌ಬಲ್ ಅವರ ಹಲವು ಭ್ರಷ್ಟಾಚಾರ ಪ್ರಕರಣಗಳ ದಾಖಲೆಗಳು ಹಾಗೂ ಕಾಗದ ಪತ್ರಗಳು ಸುಟ್ಟುಹೋಗಿದೆ ಎಂದು ಹೇಳಲಾಗುತ್ತಿದೆ.

- Advertisement -

ಮಾಧ್ಯಮಗಳ ವರದಿಯ ಪ್ರಕಾರ ಯಾವ ಮಟ್ಟದ ಹಾನಿಯುಂಟಾಗಿದೆ ಎಂಬುದನ್ನು ಇ.ಡಿ ದಾಖಲಿಸಲಿದೆ ಎಂದು ಹೇಳಲಾಗುತ್ತಿದೆ. ಈ ಕಚೇರಿಯಲ್ಲಿ ಹಲವು ಭ್ರಷ್ಟಾಚಾರ ಪ್ರಕರಣಗಳ ಭೌತಿಕ ಹಾಗೂ ಡಿಜಿಟಲ್‌ ತನಿಖೆಯ ದಾಖಲೆಗಳನ್ನು ಇಡಲಾಗಿತ್ತು. ತನಿಖೆ ನಡೆಯುತ್ತಿದ್ದ ದಾಖಲೆಗಳು ಸುಟ್ಟುಹೋಗಿರಬಹುದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಮೂಲಗಳ ಪ್ರಕಾರ ಕಂಪ್ಯೂಟರ್‌ಗಳು ಹಾಗೂ ದಾಖಲೆಗಳನ್ನು ಒಳಗೊಂಡ ತನಿಖೆಗೆ ಸಂಬಂಧಪಟ್ಟ ಸ್ವತ್ತುಗಳನ್ನು ಕಚೇರಿಯಲ್ಲಿ ಇಡಲಾಗಿತ್ತು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹಾಗೆಯೇ ಬಹುತೇಕ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿತ್ತು ಎನ್ನಲಾಗುತ್ತಿದೆ. ಜಾರಿ ನಿರ್ದೇಶನಾಲಯವು ಅವುಗಳನ್ನು ಪುನಃ ಮರಳಿಪಡೆಯುವ ಸಾಧ್ಯತೆಯಿದೆ ಎಂದೂ ಕೂಡ ಹೇಳಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಮೂಲಗಳ ಪ್ರಕಾರ ಪ್ರಕರಣಗಳ ತನಿಖೆಯ ದಾಖಲೆಗಳನ್ನು ಇ.ಡಿ ಆರೋಪಪಟ್ಟಿಯ ಮೂಲಕ ಕೋರ್ಟ್‌ಗೆ ಸಲ್ಲಿಸಿದ್ದು, ಅವುಗಳ ಪ್ರತಿಗಳನ್ನು ತನ್ನಲ್ಲಿ ಇಟ್ಟುಕೊಂಡಿತ್ತು. ಆದರೆ ಕಚೇರಿಗೆ ಬೆಂಕಿ ಬಿದ್ದ ನಂತರ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಪಡೆದಿರುವ ನಿಗದಿತ ಸಾಕ್ಷಿಗಳ ವಿಚಾರಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕೈಸರ್‌ ಹಿಂದ್‌ ಪ್ರದೇಶದಲ್ಲಿರುವ ನಾಲ್ಕು ಮಹಡಿಗಳ ಪುರಾತನ ಕಟ್ಟಡದಲ್ಲಿ ಇ.ಡಿ ನಾಲ್ಕನೇ ಹಾಗೂ ಮೊದಲ ಮಹಡಿಯಲ್ಲಿ ಕಚೇರಿ ಹೊಂದಿದೆ. ನಾಲ್ಕನೇ ಮಹಡಿಯಲ್ಲಿರುವ ಹೆಚ್ಚುವರಿ ನಿರ್ದೇಶಕರ ಕಚೇರಿ ಹಾಗೂ ತನಿಖಾ ಘಟಕಗಳಿಗೆ ಬೆಂಕಿ ಬಿದ್ದಿದ್ದು, ಘಟನೆ ನಂತರ ಈ ಮಹಡಿಯನ್ನು ಸದ್ಯಕ್ಕೆ ಮುಚ್ಚಲಾಗಿದೆ. ಅಗ್ನಿಶಾಮಕ ದಳದ ವರದಿಯ ಪ್ರಕಾರ ಕಚೇರಿಗೆ ಮಧ್ಯರಾತ್ರಿ 2.30ರ ಸಮಯದಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಆ ಸಂದರ್ಭದಲ್ಲಿ ಅಡುಗೆ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಮಾತ್ರ ಸ್ಥಳದಲ್ಲಿದ್ದರು. ಯಾರಿಗೂ ಗಾಯಗಳಾಗಿಲ್ಲ.

ಹೆಚ್ಚು ಹೊಗೆ ಆವರಿಸಿದ ಕಾರಣ ಅಗ್ನಿ ಶಾಮಕ ಸಿಬ್ಬಂದಿ ಕೂಡ ಘಟನೆ ನಡೆದ ಪ್ರಮುಖ ಸ್ಥಳಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಹಳೆಯ ಕಟ್ಟಡವಾದ ಕಾರಣ ಕೇವಲ ಒಂದು ಮೆಟ್ಟಿಲು ಪ್ರದೇಶ ಮಾತ್ರ ಇದೆ. ಅಗ್ನಿ ಶಾಮಕ ಸಿಬ್ಬಂದಿ ಪ್ರಕಾರ ದುರಂತದಲ್ಲಿ ಅಪಾರ ಪ್ರಮಾಣದ ಕಾಗದ ಪತ್ರಗಳು, ದಾಖಲೆಗಳು ಪೀಠೋಪಕರಣಗಳು ಬೆಂಕಿಯಲ್ಲಿ ನಾಶವಾಗಿವೆ ಎನ್ನಲಾಗುತ್ತಿದೆ. ಭಾನುವಾರ ಮಧ್ಯಾಹ್ನದ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ತಹಬದಿಗೆ ತರಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...