ಮರಳು ಗಣಿಗಾರಿಕೆ ಹಕ್ಕಿಗಾಗಿ ಎರಡು ಗುಂಪುಗಳ ರಕ್ತಸಿಕ್ತ ಕಾದಾಟ: ಐಷಾರಾಮಿ ಕಾರಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ!

Date:

ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಯ ಹಕ್ಕಿಗಾಗಿ ನಡೆದ ಸಂಘರ್ಷ ಭೀಕರ ನರಮೇಧಕ್ಕೆ ತಿರುಗಿದೆ. ಮಂಗಳವಾರ ತಡರಾತ್ರಿ ನಡೆದ ಪೂರ್ವನಿಯೋಜಿತ ದಾಳಿಯಲ್ಲಿ ದುಷ್ಕರ್ಮಿಗಳು ಮೂವರನ್ನು ಜೀವಂತವಾಗಿ ಸುಟ್ಟಿದ್ದಾರೆ.  ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರೋಪಿಗಳು ಐಷಾರಾಮಿ ಎಸ್‌ಯುವಿ (Fortuner) ಕಾರನ್ನು ಟಿಪ್ಪರ್ ಲಾರಿಯಿಂದ ಡಿಕ್ಕಿ ಹೊಡೆಸಿ, ಅದಕ್ಕೆ ಬೆಂಕಿ ಹಚ್ಚಿ ಸುಟ್ಟುಹಾಕಿರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

- Advertisement -

ಸೋನ್‌ಹತ್ ಪ್ರದೇಶದ ಕಟ್ಗೊಡಿ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದೆ. ಮರಳು ಸಾಗಿಸುತ್ತಿದ್ದ ಎರಡು ವಾಹನಗಳನ್ನು ಅಡ್ಡಗಟ್ಟಿದ ದಾಳಿಕೋರರ ಗುಂಪು, ಟಿಪ್ಪರ್ ಲಾರಿಯಿಂದ ಫಾರ್ಚೂನರ್ ಕಾರಿಗೆ ಪದೇ ಪದೆ ಡಿಕ್ಕಿ ಹೊಡೆಸಿದೆ. ಕಾರಿನಲ್ಲಿದ್ದವರು ಹೊರಬರಲಾಗದಂತೆ ಸಿಲುಕಿಕೊಂಡಾಗ, ವಾಹನಕ್ಕೆ ಬೆಂಕಿ ಹಚ್ಚಲಾಗಿದೆ. ಘಟನೆಯಲ್ಲಿ ಬಿಜೆಪಿ ಮುಖಂಡ ಎನ್ನಲಾದ ಭರತ್ ಸಿಂಗ್ ಗೆಹರ್ವಾರ್ (ಲಲ್ಲಾ ಸಿಂಗ್) ಕಾರಿನಲ್ಲೇ ಸುಟ್ಟು ಕರಕಲಾಗಿದ್ದಾರೆ. ಅವರ ಸಂಬಂಧಿ ನಾಗೇಂದ್ರ ಸಿಂಗ್ ತೀವ್ರ ಸುಟ್ಟಗಾಯಗಳೊಂದಿಗೆ ರಾಯ್‌ಪುರಕ್ಕೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ವೀರೇಂದ್ರ ಪ್ರತಾಪ್ ಸಿಂಗ್ ಅಂಬಿಕಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಕಳೆದ ಹಲವು ತಿಂಗಳುಗಳಿಂದ ಮರಳು ಗಣಿಗಾರಿಕೆ ವಿಚಾರವಾಗಿ ಸಿಂಗ್ ಗುಂಪು ಮತ್ತು ಠಾಕೂರ್ ಗುಂಪಿನ ನಡುವೆ ವೈಷಮ್ಯ ಬೆಳೆದಿತ್ತು. ಮಂಗಳವಾರ ಬೆಳಗ್ಗೆ ಎರಡೂ ಗುಂಪುಗಳ ನಡುವೆ ಸಂಘರ್ಷ ನಡೆದಿತ್ತು. ಈ ಬೆನ್ನಲ್ಲೇ ಸಂಧಾನದ ನೆಪದಲ್ಲಿ ಸಿಂಗ್‌ ಗುಂಪನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಲಾಗಿತ್ತು ಎಂದು ಶಂಕಿಸಲಾಗುತ್ತಿದೆ. ಕಾರಿನ ಗಾಜು ಒಡೆದು ಹೊರಬರಲು ಪ್ರಯತ್ನಿಸಿದವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರಾಚ್ಯ ಸಂಘರ್ಷ: ದೇಶದ ಹೆದ್ದಾರಿ ಯೋಜನೆಗಳ ವೇಗಕ್ಕೆ ತಟ್ಟಿದ ಡಾಂಬರು ಅಭಾವದ ಬಿಸಿ

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಕಶ್ಯಪ್, ಇದು ಪೂರ್ವನಿಯೋಜಿತ ಕೃತ್ಯ ಎಂಬ ಅನುಮಾನವಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹತ್ತಿಕೊಂಡಿದೆಯೇ ಅಥವಾ ಉದ್ದೇಶಪೂರ್ವಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆಯೇ ಎಂಬುದನ್ನು ವಿಧಿವಿಜ್ಞಾನ ತಂಡ ಪರಿಶೀಲಿಸುತ್ತಿದೆ. ಈಗಾಗಲೇ ನಾಲ್ವರನ್ನು ಬಂಧಿಸಲಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಭೀಕರ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಸ್ಥಳೀಯ ಸಂಘಟನೆಗಳು ಸಿಬಿಐ ತನಿಖೆಗೆ ಒತ್ತಾಯಿಸಿವೆ. ಮರಳು ದಂಧೆಯ ಕರಾಳ ಮುಖವನ್ನು ಅನಾವರಣಗೊಳಿಸಿರುವ ಈ ಪ್ರಕರಣ, ಕಳೆದ ಕೆಲವು ವರ್ಷಗಳಲ್ಲಿ ಛತ್ತೀಸ್‌ಗಢದಲ್ಲಿ ವರದಿಯಾದ ಅತ್ಯಂತ ಕ್ರೂರ ಘಟನೆಗಳಲ್ಲಿ ಒಂದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...