ಉತ್ತರಾಖಂಡ | ಹಿಂದೂಯೇತರರು, ರೋಹಿಂಗ್ಯಾ ಮುಸ್ಲಿಮರಿಗೆ ಪ್ರವೇಶ ನಿಷೇಧ; ಗ್ರಾಮಗಳಲ್ಲಿ ಫಲಕ ಅಳವಡಿಕೆ!

Date:

Advertisements

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಹಲವಾರು ಗ್ರಾಮಗಳ ಹೊರಭಾಗದಲ್ಲಿ ಹಿಂದೂಯೇತರರಿಗೆ, ರೋಹಿಂಗ್ಯಾ ಮುಸ್ಲಿಮರಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರವೇಶವನ್ನು ನಿಷೇಧಿಸುವ ಫಲಕಗಳನ್ನು ಹಾಕಲಾಗಿದ್ದು, ಸ್ಥಳೀಯ ಮುಸ್ಲಿಂ ಸಂಘಟನೆಗಳು ತೀವ್ರ ಕಳವಳ ವ್ಯಕ್ತಪಡಿಸಿದೆ. ಸದ್ಯ ಉತ್ತರಾಖಂಡ ರಾಜ್ಯ ಪೊಲೀಸರು ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಭಿನವ್ ಕುಮಾರ್, “ಹಲವು ಗ್ರಾಮಗಳಲ್ಲಿ ಇಂತಹ ಬೋರ್ಡ್‌ಗಳನ್ನು ಅಳವಡಿಸಿರುವುದನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಪೊಲೀಸ್ ಮತ್ತು ಗುಪ್ತಚರ ಘಟಕಗಳಿಗೆ ಆದೇಶ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನು ರುದ್ರಪ್ರಯಾಗದ ಪೊಲೀಸ್ ಅಧಿಕಾರಿ ಪ್ರಬೋಧ್ ಕುಮಾರ್ ಗಿಲ್ಡಿಯಾಲ್, “ಹಲವಾರು ಫಲಕಗಳನ್ನು ತೆಗೆದುಹಾಕಲಾಗಿದೆ. ಯಾರು ಈ ಅಪರಾಧವನ್ನು ಮಾಡಿದ್ದಾರೆ ಎಂದು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

Advertisements

“ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ವಿವಿಧ ಗ್ರಾಮ ಪ್ರಧಾನರೊಂದಿಗೆ (ಗ್ರಾಮ ಮುಖ್ಯಸ್ಥರು) ಸಭೆ ನಡೆಸಲಾಗಿದೆ” ಎಂದೂ ತಿಳಿಸಿದ್ದಾರೆ.

ಫಲಕದಲ್ಲಿ ಏನಿದೆ?

“ಹಿಂದೂಯೇತರರು/ ರೋಹಿಂಗ್ಯಾ ಮುಸ್ಲಿಮರು ಮತ್ತು ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುವುದು/ಗ್ರಾಮದಲ್ಲಿ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಗ್ರಾಮದಲ್ಲಿ ಎಲ್ಲಿಯಾದರೂ ಕಂಡು ಬಂದರೆ ಶಿಕ್ಷಾರ್ಹ ಕ್ರಮ ಕೈಗೊಳ್ಳಲಾಗುವುದು” ಎಂದು ನ್ಯಾಲ್ಸು ಗ್ರಾಮದ ಹೊರಗೆ ಅಳವಡಿಸಿರುವ ಫಲಕದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಗ್ರಾಮಸಭೆಯಿಂದ ಈ ನಿರ್ದೇಶನ ನೀಡಲಾಗಿದೆ ಎಂದು ಫಲಕದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆ | ಮೋದಿ 173 ಭಾಷಣಗಳ ಪೈಕಿ 110 ‘ಮುಸ್ಲಿಂ ದ್ವೇಷ’ದಿಂದ ಕೂಡಿವೆ

ಶೇರ್ಸಿ, ಗೌರಿಕುಂಡ, ತ್ರಿಯುಗಿನಾರಾಯಣ, ಸೋನ್‌ಪ್ರಯಾಗ, ಬರಸು, ಜಾಮು, ಏರಿಯಾ, ರವಿಗ್ರಾಮ, ಮೈಖಂಡ ಸೇರಿದಂತೆ ಬಹುತೇಕ ಎಲ್ಲಾ ಗ್ರಾಮಗಳಲ್ಲಿ ಇದೇ ರೀತಿಯ ಬೋರ್ಡ್‌ಗಳು ಇದೆ.

“ತಮ್ಮ ಗ್ರಾಮದ ಹೊರಗೆ ಸೂಚನಾ ಫಲಕವನ್ನು ಗ್ರಾಮಸ್ಥರು ಅಳವಡಿಸಿದ್ದಾರೆಯೇ ಹೊರತು ಗ್ರಾಮ ಪಂಚಾಯಿತಿ ಅಳವಡಿಸಿರುವುದಲ್ಲ” ಎಂದು ನ್ಯಾಲ್ಸುವಿನ ಪ್ರಧಾನ್ ಪ್ರಮೋದ್ ಸಿಂಗ್ ಹೇಳಿದ್ದಾರೆ.

ಜೊತೆಗೆ “ಗಂಡಸರು ಬೇರೆಡೆ ಕೆಲಸದಲ್ಲಿರುತ್ತಾರೆ. ಇಲ್ಲಿ ಹೆಂಗಸರು ಮಾತ್ರ ಇರುತ್ತಾರೆ. ಅದಕ್ಕೆ ಆ ರೀತಿ ಫಲಕಗಳನ್ನು ಹಾಕಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ನಡುವೆ ಎರಡು ಮುಸ್ಲಿಂ ನಿಯೋಗಗಳಾದ ಮುಸ್ಲಿಂ ಸೇವಾ ಸಂಘಟನೆ ಮತ್ತು ಎಐಎಂಐಎಂ ಸೆಪ್ಟೆಂಬರ್ 5ರಂದು ಡಿಜಿಪಿ ಕುಮಾರ್ ಅವರನ್ನು ಭೇಟಿಯಾಗಿ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ದ್ವೇಷದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗೆಯೇ ದೇಶದಲ್ಲಿ ಮುಸ್ಲಿಮರ ವಿರುದ್ಧ ಹೆಚ್ಚುತ್ತಿರುವ ದ್ವೇಷದ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X