ಶಾಲಾ ಸಮವಸ್ತ್ರದಲ್ಲಿದ್ದ ಇಬ್ಬರು ಬಾಲಕಿಯರ ಮೃತದೇಹಗಳು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಒಡಿಶಾದ ಮಲ್ಕನ್‌ಗಿರಿ ಜಿಲ್ಲೆಯ ಕಾಡಿನಲ್ಲಿ ಘಟನೆ ನಡೆದಿದೆ.
ಇಬ್ಬರೂ ಬಾಲಕಿಯರು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅವರು ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಇದೀಗ, ಅವರ ಮೃತದೇಹಗಳು ಕಾಡಿನಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಶಾಲೆಗೆ ತೆರಳಿದ್ದ ಬಾಲಕಿಯರು, ಶಾಲೆ ಮುಗಿದ ಬಳಿಕ ಮನೆಗೆ ಮರಳಿ ಬಂದಿರಲಿಲ್ಲ. ಹುಡುಕಾಟ ನಡೆಸಿದ ಪೋಷಕರು, ಪೊಲೀಸರಿಗೆ ದೂರು ನೀಡಿದ್ದರು.
ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ಆರಂಭಿಸಿದ್ದರು. ಅವರ ಮೃತದೇಹಗಳು ಶನಿವಾರ ರಾತ್ರಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಬಾಲಕಿಯ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.