ಮುಂಬೈನ ಗೊರೈ ಕಡಲ ತೀರದಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ಏಳು ತುಂಡುಗಳಾಗಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಮುಂಬೈ ಪೊಲೀಸರು ಸೋಮವಾರ ಹೇಳಿದ್ದಾರೆ.
ಸುಮಾರು 25ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಇದಾಗಿದ್ದು ಈವರೆಗೂ ಗುರುತು ಪತ್ತೆಯಾಗಿಲ್ಲ. ಸ್ಥಳದಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರು ಆಗಮಿಸಿದಾಗ ವ್ಯಕ್ತಿಯ ದೇಹವನ್ನು ಏಳು ತುಂಡುಗಳಾಗಿ ಕತ್ತರಿಸಿ ನಾಲ್ಕು ಪ್ಲಾಸ್ಟಿಕ್ ಚೀಲಗಳಲ್ಲಿ ಇರಿಸಿರುವುದು ಕಂಡುಬಂದಿದೆ.
ಇದನ್ನು ಓದಿದ್ದೀರಾ? ಮುನಿರತ್ನ ಕರ್ಮಕಾಂಡ | ತುಂಡು ಗುತ್ತಿಗೆದಾರನಿಂದ ಹಿಡಿದು ಪ್ರಭಾವಿ ರಾಜಕಾರಣಿಯವರೆಗೆ…
ಪ್ಲಾಸ್ಟಿಕ್ ಚೀಲಗಳಲ್ಲಿ ಇದ್ದ ತುಂಡು ತುಂಡಾಗಿದ್ದ ವ್ಯಕ್ತಿಯ ದೇಹದ ಮೇಲೆ ಬಟ್ಟೆ ಮತ್ತು ಕೈಯಲ್ಲಿ ಹಚ್ಚೆ ಕಂಡುಬಂದಿದೆ. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸದ್ಯ ಈ ಮೃತದೇಹದ ಗುರುತು ಪತ್ತೆಯಾಗಿಲ್ಲ. ಗುರುತು ಪತ್ತೆ ಕಾರ್ಯವನ್ನೂ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
