ಕಾಂಗ್ರೆಸ್‌ ಶಾಸಕನ ಪುತ್ರನ ಮನೆಯಲ್ಲಿ ಯುವತಿ ಮೃತದೇಹ ಪತ್ತೆ

Date:

Advertisements

ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕರೊಬ್ಬರ ಪುತ್ರನಿಗೆ ಸೇರಿದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆ ಕೆಲಸದ ಯುವತಿಯ ಮೃತದೇಹ ಪತ್ತೆಯಾಗಿದೆ. ಆಕೆಯ ಮುಖದ ಮೇಲೆ ನಾಯಿ ಕಚ್ಚಿದ ಗುರುತುಗಳಿದ್ದು, ಅನುಮಾನ ಹುಟ್ಟುಹಾಕಿದೆ.

ಮಧ್ಯಪ್ರದೇಶದ ಛತರ್ಪುರ ಜಿಲ್ಲೆಯ ಖರ್ಗಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಚಂದಾ ಗೌರ್ ಅವರ ಪುತ್ರ ಅಭಿಯಂತ್ ಗೌರ್ ಮನೆಯಲ್ಲಿ ಸಪ್ನಾ ರೈಕ್ವಾರ್ (21) ಎಂಬ ಯುವತಿಯ ಮೃತದೇಹ ದೊರೆತಿದೆ. ಅವರು ಹಲವು ವರ್ಷಗಳಿಂದ ಅಭಿಯಂತ್ ಗೌರ್ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಬೆಳಿಗ್ಗೆ 5:20ರ ಸುಮಾರಿಗೆ ಮನೆಯ ಹಿಂಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಕಂಡುಬಂದಿದೆ. ಮನೆಯಲ್ಲಿದ್ದವರು ತಕ್ಷಣವೇ ಪೊಲೀಸರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಿಸಿಟಿವಿ ದೃಶ್ಯವಳಿಗಳು ಆಕೆ ನೇಣು ಬಿಗಿದುಕೊಳ್ಳುತ್ತಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಆಕೆಯ ಮುಖದ ಮೇಲೆ ನಾಯಿ ಕಚ್ಚಿದ ಗಾಯದ ಗುರುತುಗಳು ಕಂಡುಬಂದಿದ್ದು, ಆ ಬಗ್ಗೆಯೂ ವಿಚಾರಣೆ ನಡೆಸುತ್ತಿದ್ದಾರೆ.

ಈ ಲೇಖನ ಓದಿದ್ದೀರಾ:? ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ‘ಬಾಯಲ್ಲಿ ಬೆಲ್ಲ, ಎದೆಯಲ್ಲಿ ಕತ್ತರಿ’ಯಾಗದಿರಲಿ…

ಘಟನೆಯ ಸಮಯದಲ್ಲಿ, ಅಭಿಯಂತ್ ಗೌರ್ ಅವರ ಪತ್ನಿ ಮತ್ತು ಮಗ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಹೆಚ್ಚಿನ ಮಾಹಿತಿ ಮತ್ತು ಸ್ಪಷ್ಟತೆ ದೊರೆಯಲಿದೆ ಎಂದು ಪೊಲೀಸ್‌ ಅಧಿಕಾರಿ ಬಲ್ಮಿಕ್ ಚೌಬೆ ಹೇಳಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X