ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್‌ನಿಂದ​ ಮತ್ತೊಮ್ಮೆ ಕೊಲೆ ಬೆದರಿಕೆ

Date:

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಕೊಲೆ ಬೆದರಿಕೆ ಮುಂದುವರಿದಿವೆ. ಮುಂಬೈನ ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ಸಲ್ಮಾನ್‌ಗೆ ಬೆದರಿಕೆ ಸಂದೇಶ ಬಂದಿದೆ. ಗುರುವಾರ ರಾತ್ರಿ 12 ಗಂಟೆ ಸುಮಾರಿಗೆ ಇದು ನಡೆದಿದೆ.

- Advertisement -

ಬೆದರಿಕೆ ಹಾಕಿರುವ ವ್ಯಕ್ತಿ ಯಾರು ಎಂಬುದು ಸದ್ಯಕ್ಕೆ ಪತ್ತೆಯಾಗಿಲ್ಲ. ಗುರುವಾರ ತಡರಾತ್ರಿ ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಮ್‌ಗೆ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇತ್ತೀಚೆಗಷ್ಟೇ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಲಾಗಿತ್ತು. ಆ ಬೆದರಿಕೆಯಲ್ಲಿ ಜಿಂಕೆ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ದೇವಸ್ಥಾನಕ್ಕೆ ತೆರಳಿ ಕ್ಷಮೆ ಕೇಳುವಂತೆ ಹಾಗೂ 5 ಕೋಟಿ ರೂ. ಕೊಡುವಂತೆ ಕೇಳಲಾಗಿತ್ತು.

ಎರಡು ದಿನಗಳ ಹಿಂದಷ್ಟೇ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆಯೊಡ್ಡಿದ್ದ ಆರೋಪದಡಿ ಬಿಖಾ ರಾಮ್ ಅಲಿಯಾಸ್ ವಿಕ್ರಮ್ (32) ಎಂಬುವವರನ್ನು ಹಾವೇರಿ ಜಿಲ್ಲಾ ಪೊಲೀಸರು ಬಂಧಿಸಿ, ಮುಂಬೈನ ಭಯೋತ್ಪಾದನಾ ನಿಗ್ರಹ ಪಡೆಯ ವಶಕ್ಕೆ ಒಪ್ಪಿಸಿದ್ದಾರೆ.

1998ರಲ್ಲಿ ರಾಜಸ್ಥಾನದಲ್ಲಿ ಸಲ್ಮಾನ್ ಖಾನ್ ಅವರು ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಜೋಧ್ ಪುರದಲ್ಲಿ ಬೇಟೆಗೆ ತೆರಳಿದ್ದರು. ಅಂದು ರಾತ್ರಿ ಸಲ್ಮಾನ್ ಕೃಷ್ಣಮೃಗ ಬೇಟೆಯಾಡಿದ್ದರು ಎನ್ನಲಾಗಿದೆ. ಈ ಕಪ್ಪು ಜಿಂಕೆಯನ್ನು ಬಿಷ್ಣೋಯ್ ಸಮುದಾಯದಲ್ಲಿ ಬಹಳ ಪೂಜ್ಯವೆಂದು ಪರಿಗಣಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಕ್ಫ್ ಧರಣಿಗೂ, ಬಿಜೆಪಿ ಬಂಡಾಯಕ್ಕೂ ಶೋಭಾ ನಾಯಕಿಯಾಗಿದ್ದೇಕೆ?

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಹೆಸರು ಕೇಳಿ ಬಂದ ತಕ್ಷಣ ಬಿಷ್ಣೋಯ್ ಸಮುದಾಯದವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. 2018 ರಲ್ಲಿ ಜೋಧ್‌ಪುರ ನ್ಯಾಯಾಲಯವು ಸಲ್ಮಾನ್ ಖಾನ್‌ಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಎರಡು ದಿನಗಳ ನಂತರ ಸಲ್ಮಾನ್ ಖಾನ್ ಜಾಮೀನಿನ ಮೇಲೆ ಹೊರಬಂದರು.

ಇದರಿಂದ ಕೋಪಗೊಂಡ ರೌಡಿ ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಅಂದಿನಿಂದ ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರ ಪರಮ ಶತ್ರುವಾಗಿಯೇ ಉಳಿದಿದ್ದಾನೆ. ಇತ್ತೀಚಿನ ದಿನಗಳಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಖಾನ್‌ಗೆ ಹಲವು ಬಾರಿ ಕೊಲೆ ಬೆದರಿಕೆಗಳು ಬಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...