ಕಾಕ್ರೋಚ್‌ಗಳಿಗೆ ಬಾಲಿವುಡ್ ಬೆಂಬಲ; ವಿದ್ಯಾರ್ಥಿಗಳ ಮಾತು ಆಲಿಸುವಂತೆ ಸರ್ಕಾರಕ್ಕೆ ನಟ-ನಟಿಯರ ಆಗ್ರಹ

Date:

ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಪ್ರತಿಭಟನೆಗೆ ತಡವಾಗಿಯಾದರೂ ಬಾಲಿವುಡ್‌ ಸಿನಿಮಾಮಂದಿ ಬೆಂಬಲ ಘೋಷಿಸಿದ್ದಾರೆ. ಸೋಮವಾರ ಪ್ರತಿಭಟನಾಕಾರರ ಮೇಲೆ ನಡೆದ ‘ಪೊಲೀಸ್ ದೌರ್ಜನ್ಯ’ವನ್ನು ವಿರೋಧಿಸಿ ಧ್ವನಿ ಎತ್ತಿರುವ ನಟ-ನಟಿಯರು, ವಿದ್ಯಾರ್ಥಿಗಳ ಮಾತು ಆಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -

ಪಂಜಾಬಿ ನಟ, ಗಾಯಕ ದಿಲ್ಜಿತ್ ದೊಸಾಂಜ್ ಅವರು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿದ್ದಾರೆ. “ನಡೆದದ್ದೆಲ್ಲವೂ ಬೇಸರ ತಂದಿದೆ. ವಿದ್ಯಾರ್ಥಿಗಳನ್ನು ಈ ರೀತಿ ನಡೆಸಿಕೊಳ್ಳಬಾರದು” ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

“ಜನರ ಧ್ವನಿಯೇ ದೇವರ ಧ್ವನಿ. ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿ” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಹಿಂದೆ, ರೈತರ ಪ್ರತಿಭಟನೆಯ ಸಮಯದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದಕ್ಕಾಗಿ ತಮ್ಮನ್ನು ‘ದೇಶದ್ರೋಹಿ’ ಎಂದು ಕರೆಯಲಾಗಿತ್ತು ಎಂಬುದನ್ನು ನೆನಪಿಸಿಕೊಂಡಿರುವ ದೋಸಾಂಜ್, “ಮತ್ತೆ ನನ್ನನ್ನು ದೇಶದ್ರೋಹಿ ಎಂದು ಕರೆಯಬಹುದು” ಎಂದಿದ್ದಾರೆ.

ನಟಿ ಜೆನಿಲಿಯಾ ಡಿಸೋಜಾ ಮತ್ತು ಅವರ ಸಂಗಾತಿ, ನಟ ರಿತೇಶ್ ದೇಶ್‌ಮುಖ್ ಕೂಡ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ. “ನಾವು ನಮ್ಮ ದೇಶದ ಯುವಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಅವರ ಧ್ವನಿಯನ್ನು ಗಟ್ಟಿಯಾಗಿ, ಸ್ಪಷ್ಟವಾಗಿ ಹಾಗೂ ಭಯವಿಲ್ಲದೆ ಆಲಿಸಬೇಕು. ಅವರು ನಮ್ಮ ಪ್ರಜಾಪ್ರಭುತ್ವ ಮತ್ತು ದೇಶದ ಭವಿಷ್ಯದ ನಿಜವಾದ ಶಿಲ್ಪಿಗಳು. ನಾವು ಅವರನ್ನು ಆಲಿಸೋಣ, ಬೆಂಬಲಿಸೋಣ ಹಾಗೂ ಶಕ್ತಿ ತುಂಬೋಣ. ನಮ್ಮ ಯುವಜನರ ಶಕ್ತಿ, ಧೈರ್ಯ ಹಾಗೂ ಕನಸುಗಳು ನಾವು ನಿರ್ಮಿಸಲು ಬಯಸುವ ಭಾರತವನ್ನು ರೂಪಿಸುತ್ತವೆ” ಎಂದು ‘ಟ್ವೀಟ್’ ಮಾಡಿದ್ದಾರೆ.

ಅಂತೆಯೇ, ನಟಿ ಹುಮಾ ಕುರೇಷಿ ಕೂಡ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿದ್ದಾರೆ. ”ಪ್ರತಿಭಟನೆಯ ದೃಶ್ಯಗಳು ನನ್ನ ಮನಸ್ಸಿನಲ್ಲಿ ದೀರ್ಘಕಾಲ ಉಳಿಯುತ್ತವೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ನಡೆಸಿದ ಲಾಠಿಚಾರ್ಜ್ ತಮಗೆ ತೀವ್ರ ಬೇಸರ ತಂದಿದೆ” ಎಂದಿದ್ದಾರೆ.

ಸಿನಿಮಾ ಬರಹಗಾರ್ತಿ ಸುತಾಪಾ ಸಿಕ್ದರ್, “ಪ್ರತಿಭಟನಾಕಾರರಲ್ಲಿ ಹೆಚ್ಚಿನವರು ಜವಾಬ್ದಾರಿಯನ್ನು ಪ್ರಶ್ನಿಸಲು ಪಾಕೆಟ್‌ನಲ್ಲಿ 20 ರೂಪಾಯಿ ಇಟ್ಟುಕೊಂಡು ಬಂದಿದ್ದ ವಿದ್ಯಾರ್ಥಿಗಳು. ಅವರ ಮೇಲಿನ ದೌರ್ಜನ್ಯ ಖಂಡನೀಯ” ಎಂದಿದ್ದಾರೆ.

ನಟಿ, ನಿರ್ದೇಶಕಿ ನಂದಿತಾ ದಾಸ್, “ಪ್ರಜಾಪ್ರಭುತ್ವವು ಜೀವಂತವಾಗಿರಲು ‘ರಚನಾತ್ಮಕ ಭಿನ್ನಾಭಿಪ್ರಾಯ/ಪ್ರತಿಭಟನೆ’ ಅಗತ್ಯ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಜೆಪಿಗೆ ಬಿಸಿತುಪ್ಪವಾದ ಪರೀಕ್ಷಾ ಹಗರಣ, ವಾಂಗ್ಚುಕ್, ರಾಮಮಂದಿರ, ಎಥೆನಾಲ್!

ನಟಿ ಭೂಮಿ ಪೆಡ್ನೇಕರ್, “ಹಿಂಸಾಚಾರ ಯಾವುದಕ್ಕೂ ಪರಿಹಾರವಲ್ಲ, ಶಿಕ್ಷಣ ವ್ಯವಸ್ಥೆಯ ಕೊರತೆಗಳಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳ ಕಡೆಗೆ ಗಮನ ಹರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇವರಷ್ಟೇ ಅಲ್ಲದೆ, ಸೋನಿ ರಜ್ದಾನ್, ಜೀನತ್ ಅಮಾನ್, ಅಭಯ್ ಡಿಯೋಲ್, ನಾಸಿರುದ್ದೀನ್ ಶಾ, ರತ್ನ ಪಾಠಕ್ ಶಾ, ಓಮಿ ವೈದ್ಯ ಮತ್ತು ಸೋನಾಕ್ಷಿ ಸಿನ್ಹಾಸೇರಿದಂತೆ ಇತರ ಪ್ರಮುಖರು ಸಾರ್ವಜನಿಕವಾಗಿ ಈ ಚಳವಳಿಗೆ ಬೆಂಬಲ ಸೂಚಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.

ಪ್ರತಿಭಟನಾ ಮೆರವಣಿಗೆಗೆ ಮುನ್ನ, ಹಿರಿಯ ನಟಿ ಶಬಾನಾ ಅಜ್ಮಿ ಮತ್ತು ನಟ-ನಿರ್ದೇಶಕ ಪ್ರಕಾಶ್ ರಾಜ್ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರೊಂದಿಗೆ ಭಾಗವಹಿಸಿದ್ದರು.

“ಪ್ರತಿಭಟನೆಯು ಶಾಂತಿಯುತವಾಗಿದ್ದು, ಸಂವಿಧಾನಾತ್ಮಕ ಮೌಲ್ಯಗಳಲ್ಲಿ ಬೇರೂರಿದೆ. ಇಲ್ಲಿರುವ ನಾವೆಲ್ಲರೂ ನಮ್ಮ ದೇಶದ ಸಂವಿಧಾನ ನೀಡಿದ ಹಕ್ಕನ್ನು ಚಲಾಯಿಸಲು, ಶಾಂತಿಯುತ ಪ್ರತಿಭಟನೆ ನಡೆಸಲು ಬಂದಿದ್ದೇವೆ. ಮಹಾತ್ಮ ಗಾಂಧೀಜಿಯವರು ನಮಗೆ ಶಾಂತಿಯುತ ಪ್ರತಿಭಟನೆ ಹೇಗೆ ನಡೆಸಬೇಕೆಂದು ಕಲಿಸಿಕೊಟ್ಟಿದ್ದಾರೆ. ಯಾವುದೇ ರೀತಿಯ ಹಿಂಸಾಚಾರವನ್ನು ಉಂಟುಮಾಡುವ ಉದ್ದೇಶ ನಮಗಿಲ್ಲ” ಎಂದು ಶಬಾನಾ ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ – ಯೂನುಸ್ – ಶೇರ್ ಖಾನ್!

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...