ಪೂರ್ವ ದೆಹಲಿಯ ಮಯೂರ್ ವಿಹಾರ್‌ನ ಮದರ್ ಮೇರಿಸ್ ಶಾಲೆಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವು ದೌಡಾಯಿಸಿದೆ.
ಇದಕ್ಕೂ ಮೊದಲು ದೆಹಲಿಯ ದ್ವಾರಕದಲ್ಲಿರುವ ದೆಲ್ಲಿ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಬಂದಿದೆ. ಇದಾದ ಬಳಿಕ ಇನ್ನೂ ಸುಮಾರು ಎಂಟು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.
ಬಾಂಬ್ ಬೆದರಿಕೆ ಬರುತ್ತಿದ್ದಂತೆ ದೆಹಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ಶೋಧ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
An email was received this morning at Mother Mary’s School, East Delhi Mayur Vihar regarding a bomb threat. The school is being evacuated and a thorough checking of the school premises is being done: Delhi Police
— ANI (@ANI) May 1, 2024
ಮದರ್ ಮೇರಿಸ್ ಶಾಲೆಯಲ್ಲಿರುವ ಎಲ್ಲರನ್ನೂ ಸ್ಥಳಾಂತರಿಸಲಾಗುತ್ತಿದೆ. ಶಾಲೆಯ ಆವರಣವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
#WATCH | Delhi: Visuals from BGS International Public School, Dwarka which received an email regarding a bomb threat. As a precautionary measure, the students are sent back home.
According to Delhi Police, several schools have received emails regarding the bomb threat today.… pic.twitter.com/El4alruDSD
— ANI (@ANI) May 1, 2024
ಇನ್ನು ಸೋಮವಾರ ಜೈಪುರ, ಕಾನ್ಪುರ ಮತ್ತು ಗೋವಾದ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ಕ್ರಮ ಹೆಚ್ಚಿಸಲಾಗಿದೆ ಮತ್ತು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಏಪ್ರಿಲ್ 26 ರಂದು ಕೋಲ್ಕತ್ತಾ ಮತ್ತು ಜೈಪುರ ಸೇರಿದಂತೆ ಅನೇಕ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಇದಾದ ಬಳಿಕ ಮುಂಬೈ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದರು.
ಬಾಂಬ್ ಬೆದರಿಕೆ ಬಂದ ಕಾರಣ ಶಾಲೆಯಲ್ಲಿದ್ದ ಎಲ್ಲ ಮಕ್ಕಳನ್ನು ಮನೆಗೆ ಕಳುಹಿಸಲಾಗಿದ್ದು, ಪರೀಕ್ಷೆಗಳನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ.