ದೆಹಲಿ| ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ

Date:

ಪೂರ್ವ ದೆಹಲಿಯ ಮಯೂರ್ ವಿಹಾರ್‌ನ ಮದರ್ ಮೇರಿಸ್ ಶಾಲೆಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವು ದೌಡಾಯಿಸಿದೆ.

- Advertisement -

ಇದಕ್ಕೂ ಮೊದಲು ದೆಹಲಿಯ ದ್ವಾರಕದಲ್ಲಿರುವ ದೆಲ್ಲಿ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಬಂದಿದೆ. ಇದಾದ ಬಳಿಕ ಇನ್ನೂ ಸುಮಾರು ಎಂಟು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಬಾಂಬ್ ಬೆದರಿಕೆ ಬರುತ್ತಿದ್ದಂತೆ ದೆಹಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ಶೋಧ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಮದರ್ ಮೇರಿಸ್ ಶಾಲೆಯಲ್ಲಿರುವ ಎಲ್ಲರನ್ನೂ ಸ್ಥಳಾಂತರಿಸಲಾಗುತ್ತಿದೆ. ಶಾಲೆಯ ಆವರಣವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಸೋಮವಾರ ಜೈಪುರ, ಕಾನ್ಪುರ ಮತ್ತು ಗೋವಾದ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ಕ್ರಮ ಹೆಚ್ಚಿಸಲಾಗಿದೆ ಮತ್ತು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಏಪ್ರಿಲ್ 26 ರಂದು ಕೋಲ್ಕತ್ತಾ ಮತ್ತು ಜೈಪುರ ಸೇರಿದಂತೆ ಅನೇಕ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಇದಾದ ಬಳಿಕ ಮುಂಬೈ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದರು.

ಬಾಂಬ್ ಬೆದರಿಕೆ ಬಂದ ಕಾರಣ ಶಾಲೆಯಲ್ಲಿದ್ದ ಎಲ್ಲ ಮಕ್ಕಳನ್ನು ಮನೆಗೆ ಕಳುಹಿಸಲಾಗಿದ್ದು, ಪರೀಕ್ಷೆಗಳನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...