ದೆಹಲಿಯ 40 ಶಾಲೆಗಳಿಗೆ ಬಾಂಬ್ ಬೆದರಿಕೆ: 30,000 ಯುಎಸ್‌ ಡಾಲರ್‌ಗೆ ಬೇಡಿಕೆ

Date:

ದೆಹಲಿಯ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದ್ದು ಈ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ 30,000 ಯುಎಸ್‌ ಡಾಲರ್‌ ಬೇಡಿಕೆ ಮುಂದಿಟ್ಟಿದ್ದಾನೆ.

- Advertisement -

ಒಂದೇ ಇಮೇಲ್‌ನಲ್ಲಿ ಬಹುತೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಬೆನ್ನಲ್ಲೇ ಸುರಕ್ಷಿತ ದೃಷ್ಟಿಯಿಂದ ಹಲವು ಶಾಲೆಗಳಿಗೆ ಶಾಲಾಡಳಿತವು ರಜೆ ಘೋಷಿಸಿದ್ದು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದೆಹಲಿಯ ಪ್ರಸಿದ್ಧ ಶಾಲೆಗಳಾದ ಡಿಪಿಎಸ್‌ ಆರ್‌ಕೆ ಪುರಮ್, ಪಶ್ಚಿಮ ವಿಹಾರದ ಜಿಡಿ ಗೋಯೆಂಕಾ, ಚಾಣಕ್ಯಪುರಿಯ ದಿ ಬ್ರಿಟಿಷ್ ಸ್ಕೂಲ್, ಅರಬಿಂದೋ ಮಾರ್ಗದ ದ ಮದರ್ಸ್ ಇಂಟರ್‌ನ್ಯಾಶನಲ್, ಮಂಡಿ ಹೌಸ್‌ನ ಮಾಡರ್ನ್ ಸ್ಕೂಲ್, ಡಿಪಿಎಸ್ ವಸಂತ್ ಕುಂಜ್, ಸಫ್‌ದರ್‌ಜಂಗ್‌ನ ದೆಹಲಿ ಪೊಲೀಸ್ ಪಬ್ಲಿಕ್ ಸ್ಕೂಲ್, ಕೈಲಾಶ್ ಮತ್ತು ಸಾಲ್ವಾನ್‌ನ ಡಿಪಿಎಸ್‌ ಈಸ್ಟ್‌ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಬಂದಿದೆ.

ಇದನ್ನು ಓದಿದ್ದೀರಾ? ತಾಜ್‌ ಮಹಲ್‌ಗೆ ಹುಸಿ ಬಾಂಬ್ ಬೆದರಿಕೆ; ತೀವ್ರ ಭದ್ರತಾ ತಪಾಸಣೆ

ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮೊದಲು ಡಿಪಿಎಸ್‌ ಆರ್‌ಕೆ ಪುರಮ್ ಮತ್ತು ಪಶ್ಚಿಮ ವಿಹಾರದ ಜಿಡಿ ಗೋಯೆಂಕಾ ಶಾಲೆಯಿಂದ ಮುಂಜಾನೆ ಕರೆ ಬಂದಿದೆ. ಕೂಡಲೇ ಬಾಂಬ್ ನಿಷ್ಕ್ರಿಯ ದಳ, ಅಗ್ನಿಶಾಮಕದಳ, ಸ್ಥಳೀಯ ಪೊಲೀಸರು, ಶ್ವಾನ ದಳವು ಈ ಎರಡು ಶಾಲೆಗಳಿಗೆ ತಲುಪಿ ಶೋಧ ನಡೆಸಿದೆ.

ಯಾವುದೇ ಅನುಮಾಸ್ಪದ ವಸ್ತುಗಳು ಕಂಡುಬಂದಿಲ್ಲ. [email protected] ಎಂಬ ಐಡಿಯಿಂದ ಇಮೇಲ್ ಬಂದಿದೆ ಎನ್ನಲಾಗಿದೆ.

“ನಾನು ಹಲವು ಕಟ್ಟಡಗಳಲ್ಲಿ ಬಾಂಬ್ ಇರಿಸಿದ್ದೇನೆ. ಬಾಂಬ್ ಸಣ್ಣದಾಗಿದ್ದು ಅದನ್ನು ಬಚ್ಚಿಡಲಾಗಿದೆ. ಈ ಸ್ಫೋಟವು ಕಟ್ಟಡಕ್ಕೆ ಹೆಚ್ಚಿನ ಹಾನಿ ಉಂಟು ಮಾಡದು. ಆದರೆ ಬಾಂಬ್ ಸ್ಫೋಟವಾದರೆ ಹಲವು ಮಂದಿಗೆ ಗಾಯಗಳಾಗಲಿವೆ” ಎಂದು ಇಮೇಲ್‌ನಲ್ಲಿ ಬರೆಯಲಾಗಿದೆ.

ಇದನ್ನು ಓದಿದ್ದೀರಾ? ಬಾಂಬ್ ಬೆದರಿಕೆ | ಆರೋಪಿ ಜಗದೀಶ್ ಶರಣು

“ನನಗೆ 30,000 ಯುಎಸ್‌ ಡಾಲರ್ ಸಿಗದಿದ್ದರೆ ನೀವೆಲ್ಲರೂ ಕೈಕಾಲು ಕಳೆದುಕೊಂಡು ಬಳಲುವಂತಾಗುತ್ತದೆ. =E2=80=9CKNR=E2=80=9D ಗ್ರೂಪ್ ಈ ಕೃತ್ಯದ ಹಿಂದಿದೆ” ಎಂದು ಕೂಡಾ ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ.

ಮೇ ತಿಂಗಳಿನಲ್ಲಿ ಇದೇ ರೀತಿ ಸುಮಾರು 200 ಶಾಲೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಆರೋಪಿಗಳು ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ ಬಳಸಿಕೊಂಡು ಇಮೇಲ್ ಮಾಡಿದ್ದು ಈ ಪ್ರಕರಣದಲ್ಲಿ ಇನ್ನೂ ಆರೋಪಿಗಳ ಪತ್ತೆಯಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...