ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಪ್ರಯಾಣಿಕರು ಸುರಕ್ಷಿತ

Date:

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಾಹಿತಿ ಮೇರೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 10.30ರ ಸುಮಾರಿಗೆ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ.

ಹೇಳಿಕೆಯಲ್ಲಿ, ವಿಮಾನಯಾನ ಸಂಸ್ಥೆ ಬಾಂಬ್ ಬೆದರಿಕೆಯನ್ನು ದೃಢಪಡಿಸಿದೆ. ಹಾಗೆಯೇ ನಿಯಮವನ್ನು ಕೂಡಾ ಅನುಸರಿಸಲಾಗಿದೆ. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ಇಂಡಿಗೋ ಸಂಸ್ಥೆ ತಿಳಿಸಿದೆ.

“ಚೆನ್ನೈನಿಂದ ಮುಂಬೈಗೆ ಹಾರಾಟ ಮಾಡುವ ಇಂಡಿಗೋ ವಿಮಾನ 6E 5149ಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ಪ್ರಯಾಣಿಕರನ್ನು ಇಳಿಸಿದ ಬಳಿಕ ಸಿಬ್ಬಂದಿ ನಿಯಮವನ್ನು ಅನುಸರಿಸಿದರು. ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಕೊಂಡೊಯ್ಯಲಾಯಿತು” ಎಂದು ಏರ್‌ಲೈನ್ಸ್ ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ 13ರ ಬಾಲಕ ಪೊಲೀಸ್ ವಶಕ್ಕೆ

“ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ವಿಮಾನದಿಂದ ಇಳಿದಿದ್ದಾರೆ. ನಾವು ಭದ್ರತಾ ಏಜೆನ್ಸಿಗಳೊಂದಿಗೆ ಕಾರ್ಯ ನಿರ್ವಹಣೆ ಮಾಡುತ್ತಿದ್ದೇವೆ. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ ವಿಮಾನವನ್ನು ಟರ್ಮಿನಲ್ ಪ್ರದೇಶದಲ್ಲಿ ಇರಿಸಲಾಗುವುದು” ಎಂದು ತಿಳಿಸಿದೆ.

ಇನ್ನು ಮಂಗಳವಾರ ಮುಂಬೈನಲ್ಲಿರುವ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಬೆದರಿಕೆ ಇಮೇಲ್‌ನ ನಂತರ, ಪೊಲೀಸರು ಕಟ್ಟಡದಲ್ಲಿ ಶೋಧ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು, ವ್ಯಕ್ತಿ ಕಂಡುಬಂದಿಲ್ಲ. ಬೆದರಿಕೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಅನಾರೋಗ್ಯದಿಂದ ತಮಟೆ ಬಾರಿಸದ ವ್ಯಕ್ತಿ; ದಲಿತ ಕುಟುಂಬಗಳಿಗೆ ಗ್ರಾಮದಿಂದ ಬಹಿಷ್ಕಾರ!

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ...

ವಿವಾದಾತ್ಮಕ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಬಂಧನ

ಪಿಸ್ತೂಲ್‌ ಹಿಡಿದು ರೈತರಿಗೆ ಬೆದರಿಸಿದ ಆರೋಪದ ಮೇಲೆ ವಿವಾದಾತ್ಮಕ ಐಎಎಸ್ ಅಧಿಕಾರಿ...

ಆಂಧ್ರ ಪ್ರದೇಶ | ಜನನಿಬಿಡ ಮುಖ್ಯ ರಸ್ತೆಯಲ್ಲೇ ವೈಎಸ್‌ಆರ್‌ಸಿಪಿ ಯುವ ಮುಖಂಡನ ಬರ್ಬರ ಹತ್ಯೆ

ವೈಎಸ್‌ಆರ್‌ಸಿಪಿಯ ಯುವ ಮುಖಂಡನೊಬ್ಬನನ್ನು ಜನನಿಬಿಡ ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಕೊಲೆ...