ದೆಹಲಿ-ವಾರಣಾಸಿ ವಿಮಾನದಲ್ಲಿ ಬಾಂಬ್‌ ಬೆದರಿಕೆ; ಪ್ರಯಾಣಿಕರ ಸ್ಥಳಾಂತರ

Date:

Advertisements

ಮಂಗಳವಾರ ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ತೆರಳಲಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 5.30ರ ಸುಮಾರಿಗೆ ವಿಮಾನ ಹೊರಡಲು ತಯಾರಾಗುತ್ತಿತ್ತು. ಆ ವೇಳೆಗೆ, ಬಾಂಬ್‌ ಬೆದರಿಕೆ ಬಂದಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ದೆಹಲಿ ಅಗ್ನಿಶಾಮಕ ದಳದ ಪ್ರಕಾರ, ಇಂದು ಮುಂಜಾನೆ 5:35ಕ್ಕೆ ದೆಹಲಿಯಿಂದ ವಾರಣಾಸಿಗೆ ಹೋಗುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇತ್ತು. ‘ಕ್ವಿಕ್ ರೆಸ್ಪಾನ್ಸ್ ಟೀಮ್‌’ಗಳು (ಕ್ಯೂಆರ್‌ಟಿ) ಸ್ಥಳಕ್ಕೆ ಧಾವಿಸಿ, ಪ್ರಯಾಣಿಕರನ್ನು ಸ್ಥಳಾಂತರಿಸಿವೆ.

 

“ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ವಿಮಾನದಲ್ಲಿದ್ದ ಪ್ರಯಾಣಿಕರನ್ನು ತುರ್ತು ನಿರ್ಗಮನದ ಮೂಲಕ ಸ್ಥಳಾಂತರಿಸಲಾಗಿದೆ” ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಕೊಂಡೊಯ್ಯಲಾಗಿದೆ. ಭದ್ರತಾ ಏಜೆನ್ಸಿ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

Download Eedina App Android / iOS

X