ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಬೆಂಗಳೂರಿನ ಇಂಡಿಗೋ ವಿಮಾನದಲ್ಲಿದ್ದ ವಿದೇಶಿ ಪ್ರಜೆಯೊಬ್ಬರು ಬಾಂಬ್ ಹೊತ್ತೊಯ್ಯುತ್ತಿರುವುದಾಗಿ ಹೇಳಿದ ಬಳಿಕ ಆತಂಕ ಸೃಷ್ಟಿಯಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಈ ಘಟನೆ ಶನಿವಾರ ರಾತ್ರಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೆಯೇ ಭದ್ರತಾ ಅಧಿಕಾರಿಗಳು ಆ ವ್ಯಕ್ತಿಯನ್ನು ಪ್ರಶ್ನಿಸುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್
ಬಾಂಬ್ ಬೆದರಿಕೆಯ ನಂತರ, ವಿಮಾನವನ್ನು ಸಂಪೂರ್ಣ ಪರಿಶೀಲನೆಗಾಗಿ ಸ್ಥಳಾಂತರಿಸಲಾಗಿದೆ. ಆದರೆ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್ ಗುಪ್ತಾ ತಿಳಿಸಿದ್ದಾರೆ.
ಪ್ರಯಾಣಿಕರ ಹೇಳಿಕೆಯ ನಂತರ ಇಂಡಿಗೋ ಸಿಬ್ಬಂದಿ ತಕ್ಷಣವೇ ವಾಯು ಸಂಚಾರ ನಿಯಂತ್ರಣ (ಎಟಿಸಿ)ಗೆ ಬೆದರಿಕೆಯ ಬಗ್ಗೆ ಮಾಹಿತಿ ನೀಡಿದರು ಎಂದು ಗುಪ್ತಾ ಹೇಳಿದರು.
ಕೂಡಲೇ ವಿಮಾನವನ್ನು ಲ್ಯಾಂಡ್ ಮಾಡಿ ಪರಿಶೀಲಿಸಲಾಗಿದೆ. ಭದ್ರತಾ ಸಂಸ್ಥೆಗಳಿಂದ ಅನುಮತಿ ಪಡೆದ ನಂತರ, ವಿಮಾನವು ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಹೊರಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಷಯದಲ್ಲಿ ವಿವರವಾದ ತನಿಖೆ ನಡೆಯುತ್ತಿದೆ.
