ನಕಲಿ ಎನ್‌ಕೌಂಟರ್ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾಗೆ ಬಾಂಬೆ ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆ

Date:

ಚೋಟಾ ರಾಜನ್‌ ಸಹಚರ ರಾಮ್‌ನಾರಾಯಣ್‌ ಗುಪ್ತ ಎಂಬಾತನ ಮೇಲೆ 2006ರಲ್ಲಿ ಮುಂಬೈನಲ್ಲಿ ನಡೆದಿದ್ದ ನಕಲಿ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ಅವರಿಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

- Advertisement -

ನ್ಯಾಯಮೂರ್ತಿ ರೇವತಿ ಮೋಹಿತೆ ಹಾಗೂ ಗೌರಿ ಗೋಡ್ಸೆ ಅವರಿದ್ದ ಹೈಕೋರ್ಟ್ ಪೀಠ 2013ರಲ್ಲಿ ಖುಲಾಸೆಗೊಳಿಸಿದ ಸಷೆನ್ಸ್‌ ಕೋರ್ಟ್ ತೀರ್ಪನ್ನು ಸಮರ್ಥನೀಯವಲ್ಲ ಎಂದು ರದ್ದುಗೊಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿಚಾರಣಾ ನ್ಯಾಯಾಲಯ ಶರ್ಮಾ ವಿರುದ್ಧ ಲಭ್ಯವಿದ್ದ ಸಾಕ್ಷ್ಯಾಧಾರವನ್ನು ಕಡೆಗಣಿಸಿದೆ. ಸಾಮಾನ್ಯ ಅಂಶವು ಕೂಡ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತುಪಡಿಸುತ್ತದೆ ಎಂದು ಹೈಕೋರ್ಟ್ ಹೇಳಿತು.

ಸಂಬಂಧಿಸಿದ ಸಷೆನ್ಸ್‌ ನ್ಯಾಯಾಲಯದ ಮುಂದೆ ಮೂರು ವಾರಗಳೊಳಗೆ ಶರಣಾಗಬೇಕೆಂದು ವಿಭಾಗೀಯ ಪೀಠ ಶರ್ಮಾಗೆ ನಿರ್ದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಸೇರಿದಂತೆ 13 ಮಂದಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿಯಿತು. ಹಾಗೆಯೆ ಇತರ ಆರು ಮಂದಿಯ ಜೀವಾವಧಿ ಶಿಕ್ಷೆಯನ್ನು ಖುಲಾಸೆಗೊಳಿಸಿತು. ಹತ್ಯೆಯಲ್ಲಿ 13 ಪೊಲೀಸರು ಸೇರಿದಂತೆ 22 ಮಂದಿ ಭಾಗಿಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

ಪ್ರದೀಪ್ ಶರ್ಮಾ ವಿರುದ್ಧ ಸಾಕಷ್ಟು ಸಾಕ್ಯ್ಷಾಧಾರವಿಲ್ಲವೆಂದು 2013ರಲ್ಲಿ ಸೆಷನ್ಸ್‌ ಕೋರ್ಟ್ ಖುಲಾಸೆಗೊಳಿಸಿ, ಇತರ 21 ಮಂದಿ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇಬ್ಬರು ಆರೋಪಿಗಳು ಕಸ್ಟಡಿಯಲ್ಲೆ ಮೃತಪಟ್ಟಿದ್ದರು.

ಸೆಷನ್ಸ್‌ ಕೋರ್ಟ್ ತೀರ್ಪಿನ ವಿರುದ್ಧ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಆರೋಪಿಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅಲ್ಲದೆ ನಕಲಿ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ರಾಮ್‌ ಪ್ರಸಾದ್‌ ಗುಪ್ತ ಸಹೋದರ ಕೂಡ ಪ್ರದೀಪ್‌ ಶರ್ಮಾ ಖುಲಾಸೆಗೊಳಿಸಿರುವುದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

2006ರ ನವೆಂಬರ್‌ 11 ರಂದು ಗುಪ್ತ ಅಲಿಯಾಸ್‌ ಲಕನ್‌ ಬಯ್ಯ ಎಂಬಾತನನ್ನು ಚೋಟಾ ರಾಜನ್‌ ಗ್ಯಾಂಗ್‌ ಸಹಚರ ಎಂಬ ಸಂಶಯದ ಮೇಲೆ ಮುಂಬೈನ ಪ್ರದೇಶವೊಂದರಿಂದ ಕರೆದುಕೊಂಡು ಹೋಗಲಾಗಿತ್ತು. ಸಂಜೆಯ ವೇಳೆಗೆ ಈತನನ್ನು ನಕಲಿ ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...