ಬಾಂಬೆ ಹೈಕೋರ್ಟ್ | ವಕೀಲರ ಸಂಘದ 162 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳೆಗೆ ಅಧ್ಯಕ್ಷ ಸ್ಥಾನ

Date:

ಲಿಂಗ ಸಮಾನತೆ ಮತ್ತು ನಾಯಕತ್ವದಲ್ಲಿ ಮಹಿಳಾ ಪ್ರಾತಿನಿಧ್ಯದ ಕುರಿತು ನಿರಂತರ ಚರ್ಚೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಐತಿಹಾಸಿಕ ಬೆಳವಣಿಗೆ ಘಟಿಸಿದೆ. ಬಾಂಬೆ ಹೈಕೋರ್ಟ್‌ನ ಪ್ರಭಾವಿ ವಕೀಲರ ಸಂಘ ‘ಅಸೋಸಿಯೇಷನ್ ಆಫ್ ಅಡ್ವೊಕೇಟ್ಸ್ ಆಫ್ ವೆಸ್ಟರ್ನ್ ಇಂಡಿಯಾ’ಗೆ (ಎಎಡಬ್ಲ್ಯೂಐ) ಬರೋಬ್ಬರಿ 162 ವರ್ಷಗಳ ಬಳಿಕ ಮಹಿಳಾ ವಕೀಲರೊಬ್ಬರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲು ಸಂಘ ನಿರ್ಧರಿಸಿದೆ. ಈ ಸಂಬಂಧ ಸಂಘದ ಸಂವಿಧಾನಕ್ಕೆ ತಿದ್ದುಪಡಿ ತರಲು ಮುಂದಾಗಿದೆ.

- Advertisement -

ಎಎಡಬ್ಲ್ಯೂಐ ಸಂಘವು 1864ರಲ್ಲಿ ಸ್ಥಾಪನೆಯಾಗಿತ್ತು. ಅಂದಿನಿಂದ ಈವರೆಗೆ ಈ ವಕೀಲರ ಸಂಘವನ್ನು ಯಾವುದೇ ಮಹಿಳೆ ಮುನ್ನಡೆಸಿರಲಿಲ್ಲ. ಇದೀಗ, ಮುಂಬರುವ ಚುನಾವಣೆಯಿಂದಲೇ ಅಧ್ಯಕ್ಷ ಹುದ್ದೆಯನ್ನು ಮಹಿಳಾ ಸದಸ್ಯರಿಗೆ ಮೀಸಲಿಡಲು ಎಎಡಬ್ಲ್ಯೂಐ ಸರ್ವಾನುಮತದ ನಿರ್ಧಾರ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಕುರಿತು ಸಂಘದ ಅಧ್ಯಕ್ಷ ಪ್ರಶಾಂತ್ ರೇಲೇಕರ್ ಮಾಹಿತಿ ನೀಡಿದ್ದು, “ಮುಂದಿನ ಅವಧಿಯಿಂದ ಅಧ್ಯಕ್ಷ ಸ್ಥಾನ ಮಹಿಳೆಯರಿಗೆ ಮೀಸಲಾಗಲಿದೆ. ತದನಂತರ ಪ್ರತಿ ಮೂರು ಅವಧಿಗೊಮ್ಮೆ ಮಹಿಳಾ ವಕೀಲರಿಗೆ ಸಂಘದ ಚುಕ್ಕಾಣಿ ಹಿಡಿಯುವ ಅವಕಾಶ ಸಿಗಲಿದೆ. ಬಹುಕಾಲದಿಂದ ಬಾಕಿ ಉಳಿದಿದ್ದ ಅಗತ್ಯ ಬದಲಾವಣೆಗೆ ಈಗ ಬಾಗಿಲು ತೆರೆದಿದೆ” ಎಂದಿದ್ದಾರೆ.

“ಈ ಐತಿಹಾಸಿಕ ತೀರ್ಮಾನ ತಟ್ಟನೆ ತೆಗೆದುಕೊಂಡದ್ದಲ್ಲ; ಬದಲಿಗೆ ಸಂಘಟನೆಯ ನಾಯಕತ್ವದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ವರ್ಷಗಳಿಂದ ನಡೆಸಿದ ಪ್ರಯತ್ನದ ಫಲವಾಗಿದೆ. 2014ರಲ್ಲೇ ಉಪಾಧ್ಯಕ್ಷ ಸ್ಥಾನ ಮತ್ತು ಕಾರ್ಯಕಾರಿ ಮಂಡಳಿಯ ಇಬ್ಬರು ಸದಸ್ಯರ ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟು, ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಇತ್ತೀಚೆಗೆ ಆಗಸ್ಟ್ 9ರಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಸಂಘದ ಸಂವಿಧಾನ ತಿದ್ದುಪಡಿಗೆ ವಿಶೇಷ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿಯು ಅಧ್ಯಕ್ಷ ಸ್ಥಾನದ ಜೊತೆಗೆ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಹಾಗೂ ಕಾರ್ಯಕಾರಿ ಮಂಡಳಿಯ ಹುದ್ದೆಗಳಲ್ಲೂ ಮಹಿಳಾ ಮೀಸಲಾತಿಗೆ ಶಿಫಾರಸು ಮಾಡಿದೆ. ಎಲ್ಲ ಹಂತಗಳಲ್ಲೂ ಮಹಿಳೆಯರಿಗೆ ಸಮಾನ ಪ್ರಾತಿನಿಧ್ಯ ಕಲ್ಪಿಸಲು ಸಂಘ ಮುಂದಾಗಿದೆ” ಎಂದು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಇದು ಯುವಜನ ಚಳವಳಿಗಳ ಪರ್ವಕಾಲ; ಬಿಜೆಪಿಗೆ ಸಂಕಷ್ಟ ಕಾಲ

ಸಂಘದ ಈ ನಡೆಗೆ ನ್ಯಾಯಾಂಗ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಹಿರಿಯ ವಕೀಲೆ ದೀಪಾ ಚವಾಣ್ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. “ಸಂಘದ ಒಟ್ಟು ಸದಸ್ಯರಲ್ಲಿ ಮಹಿಳೆಯರ ಸಂಖ್ಯೆ ಇನ್ನೂ ಕಡಿಮೆಯಿದೆ. ಆದರೂ, ನಾಯಕತ್ವದ ಅತ್ಯುನ್ನತ ಮಟ್ಟದಲ್ಲೇ ಅವಕಾಶ ಕಲ್ಪಿಸಿರುವುದು ಸಮಾನತೆಯತ್ತ ಇಟ್ಟ ದೊಡ್ಡ ಹೆಜ್ಜೆಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ವೃತ್ತಿಯಲ್ಲಿ ಮಹಿಳಾ ವಕೀಲರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಆದರೂ ಬಾರ್ ಅಸೋಸಿಯೇಷನ್‌ಗಳು ಮತ್ತು ಪ್ರಭಾವಿ ವೃತ್ತಿಪರ ಸಂಘಟನೆಗಳ ನಾಯಕತ್ವ ಹುದ್ದೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಇಂದಿಗೂ ತೀರ ಸೀಮಿತವಾಗಿಯೇ ಇದೆ. ಇಂತಹ ಸನ್ನಿವೇಶದಲ್ಲಿ ದೇಶದ ಅತ್ಯಂತ ಹಳೆಯ ವಕೀಲರ ಸಂಘವೊಂದು ಅಧ್ಯಕ್ಷ ಹುದ್ದೆಯನ್ನೇ ಮಹಿಳೆಯರಿಗೆ ಕಾಯ್ದಿರಿಸಿರುವುದು ಅತ್ಯುತ್ತಮ ಬೆಳವಣಿಗೆ ಎಂದೇ ಬಣ್ಣಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...